ಬೆಂಗಳೂರು: ಶಕ್ತಿ ಯೋಜನೆ (Shakthi Scheme) ಯಿಂದಾಗಿ ಟ್ರಿಪ್ ಗೆ ಹೋಗಿದ್ದ ಪತ್ನಿ (Wife) ಮರಳಿ ಬಂದಿಲ್ಲ ಎಂದು ವ್ಯಕ್ತಿಯೊಬ್ಬ ಅವಂತಾರ ಸೃಷ್ಟಿಸಿದ್ದಾನೆ.
ಬೆಂಗಳೂರು ಗ್ರಾಮಾಂತರ ಹೊಸಕೋಟೆಯ ಬಸ್ ನಿಲ್ದಾಣದಲ್ಲಿ ಪತ್ನಿ ವಿರುದ್ಧ ಸಿಟ್ಟಿಗೆದ್ದ ಪತಿಯೊಬ್ಬ ನನ್ನ ಪತ್ನಿ ಟ್ರಿಪ್ ಗೆ ಹೋಗಿದ್ದವಳು ಮರಳಿ ಬಂದಿಲ್ಲ ಎಂದು ಬಸ್ ಟೈಯರ್ ಗೆ ತಲೆಕೊಟ್ಟು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಪರಿಣಾಮ ಹೊಸಕೋಟೆ (Hosakote) ಬಸ್ ನಿಲ್ದಾಣದಲ್ಲಿ ಅರ್ಧಗಂಟೆ ಬಸ್ ಸಂಚಾರ ಸ್ಥಗಿತಗೊಂಡಿತ್ತು. ಹೀಗಾಗಿ ಪ್ರಯಾಣಿಕರು ಪರದಾಡುವಂತಾಗಿತ್ತು.
ನನ್ನ ಹೆಂಡತಿ ಟ್ರಿಪ್ ಗೆ ಹೋದವಳು ಇನ್ನೂ ಮರಳಿ ಬಂದಿಲ್ಲ. ಸಿದ್ದರಾಮಯ್ಯ (Siddaramaiah) ಸರಿಯಿಲ್ಲ, ಮಹಿಳೆಯರಿಗೆ ಫ್ರೀ ಬಸ್ ಪ್ರಯಾಣ (Free Bus Ticket For Women)ವನ್ನು ಕೂಡಲೇ ರದ್ದುಗೊಳಿಸಬೇಕು ಎಂದು ಒತ್ತಯಿಸಿದರು. ಕಂಠಪೂರ್ತಿ ಕುಡಿದಿದ್ದ ವ್ಯಕ್ತಿ ತೂರಾಡಿಕೊಂಡು ವಾಹನ ಸಂಚಾರಕ್ಕೆ ಅಡ್ಡಿಪಡಿಸಿದ್ದಾನೆ. ಟೈಯರ್ ಗೆ ತಲೆಕೊಟ್ಟು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಈ ಸಂದರ್ಭದಲ್ಲಿ ಜನರು ಆತನನ್ನು ರಕ್ಷಿಸಿದ್ದಾರೆ.








