ಚಾಮಾರಾಜನಗರ: ಕೊರೊನಾ ಶಂಕೆ ಮೇರೆಗೆ ಚಾಮರಾಜನಗರದ ಕೋವಿಡ್ ಆಸ್ಪತ್ರೆಯಲ್ಲಿ ಇಂದು ಮೃತಪಟ್ಟಿರುವ ಮಹಿಳೆಗೆ ಕೊರೊನಾ ತಗುಲಿರಲಿಲ್ಲ ಎಂದು ಚಾಮರಾಜನಗರ ಜಿಲ್ಲಾಧಿಕಾರಿ ಡಾ. ಎಂ.ಆರ್ ರವಿ ಸ್ಪಷ್ಟಪಡಿಸಿದ್ದಾರೆ.
ಚಾಮರಾಜನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೋಮವಾರ ಸಾವನ್ನಪ್ಪಿದ ಮಹಿಳೆಯ ಕೊರೊನಾ ವರದಿ ನೆಗೆಟಿವ್ ಬಂದಿದ್ದು, ತೀವ್ರ ಉಸಿರಾಟದ ತೊಂದರೆ ಹಿನ್ನೆಲೆ ಮಹಿಳೆ ಮೃತಪಟ್ಟಿದ್ದಾಳೆ. ಈ ಕುರಿತು ಯಾವುದೇ ಗೊಂದಲ, ಆತಂಕ ಪಡುವ ಅಗತ್ಯವಿಲ್ಲ. ಕೊರೊನಾಕ್ಕೂ ಈ ಸಾವಿಗೂ ಸಂಬAಧವಿಲ್ಲ ಎಂದು ಸ್ಪಷ್ಟ ಪಡಿಸಿದರು.
ಚಾಮರಾಜನಗರ ಜಿಲ್ಲೆಯ ಕೆಲವು ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಸೊಂಕಿತರಿಗೆ ಚಿಕಿತ್ಸೆ ನೀಡಲು ಸರ್ಕಾರದ ಆದೇಶದಂತೆ ಸೂಚಿಸಲಾಗಿದೆ. ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಕೋವಿಡ್ ಸೋಂಕು ಪರೀಕ್ಷೆ ಮಾಡಲು ಸೂಚನೆ ನೀಡಲಾಗಿದೆ ಎಂದರು.
ಜಿಲ್ಲೆಯ ಜನತೆ ಕೊರಾನಾ ಬಗ್ಗೆ ಯಾವುದೇ ಆತಂಕ ಪಡುವ ಅವಶ್ಯಕತೆ ಇಲ್ಲ. ಈಗಾಗಲೇ ಚಾಮರಾಜನಗರ ಜಿಲ್ಲೆಯಲ್ಲಿ ಕೊರಾನಾ ವೈರಸ್ ನಿಯಂತ್ರಣಕ್ಕೆ ಸಾಕಷ್ಟು ಕ್ರಮ ವಹಿಸಿದ್ದು, ಜಿಲ್ಲೆಯಲ್ಲಿ ಕಂಟೈನ್‌ಮೆAಟ್ ಝೋನ್ ಗಳಲ್ಲಿ ಆರೋಗ್ಯ ಇಲಾಖೆ ಉತ್ತಮ ಚಿಕಿತ್ಸೆ ನೀಡಲು ಬದ್ದವಾಗಿದೆ ಎಂದು ಹೇಳಿದರು.
ಯಡಿಯೂರಪ್ಪ ನನಗೆ ಹಿರಿಯಣ್ಣನಿದ್ದಂತೆ: ಈಶ್ವರಪ್ಪ ಸ್ಪಷ್ಟನೆ, ರಾಜಕೀಯ ಜರ್ನಿಗೆ ಹೊಸ ತಿರುವು?
ಮಾಜಿ ಸಚಿವ ಹಾಗೂ ಹಿರಿಯ ನಾಯಕ ಕೆ.ಎಸ್. ಈಶ್ವರಪ್ಪ ತಮ್ಮ ಮಾತುಗಳಿಂದ ಮತ್ತೊಮ್ಮೆ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣರಾಗಿದ್ದಾರೆ. ಬಿ.ಎಸ್. ಯಡಿಯೂರಪ್ಪ ಅವರು ನನಗೆ ಹಿರಿಯಣ್ಣನಂತೆ. ಅವರಿಗೂ...