ಶಿವಮೊಗ್ಗ: ಕೌಟುಂಬಿಕ ಕಲಹದಿಂದಾಗಿ ಮಹಿಳೆಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
ಮಹಿಳೆಯೊಬ್ಬರು (Woman) ರೈಲಿಗೆ (Train) ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದಲ್ಲಿ (Shivamogga) ನಡೆದಿದೆ.
ಕಮಲಾ (35) ಆತ್ಮಹತ್ಯೆಗೆ ಶರಣಾಗಿರುವ ಮಹಿಳೆ ಎನ್ನಲಾಗಿದೆ. ಸೋಮವಾರ ರಾತ್ರಿ ಪತಿಯೊಂದಿಗೆ ಜಗಳವಾಡಿ ಮನೆಯಿಂದ ತೆರಳಿದ್ದರು. ನಂತರ ತಾಳಗುಪ್ಪ – ಬೆಂಗಳೂರು ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಸಾವನ್ನಪ್ಪಿರುವ ಕಮಲಾ ಮೆಗ್ಗಾನ್ ಆಸ್ಪತ್ರೆಯಲ್ಲಿ ಹೊರಗುತ್ತಿಗೆ ನೌಕರಳಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು ಎಂದು ತಿಳಿದು ಬಂದಿದೆ. ಸ್ಥಳಕ್ಕೆ ವಿನೋಬನಗರ ಹಾಗೂ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.








