Congress | ಸಿದ್ದರಾಮಯ್ಯ ನೀಡಿದ ಪರಿಹಾರ ಹಣವನ್ನೇ ಎಸೆದ ಮಹಿಳೆ
ಬಾಗಲಕೋಟೆ : ಮಾಜಿ ಸಿಎಂ ಸಿದ್ದರಾಮಯ್ಯ ನೀಡಿದ 2 ಲಕ್ಷ ರೂಪಾಯಿ ಪರಿಹಾರ ಧನವನ್ನು ಮಹಿಳೆಯೊಬ್ಬರು ಎಸೆದ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ.
ಬದಾಮಿ ಕ್ಷೇತ್ರದ ಕೆರೂರು ಗುಂಪು ಘರ್ಷಣೆ ಗಾಯಾಳುಗಳ ಭೇಟಿಗೆ ಬಾಗಲಕೋಟೆಗೆ ಆಗಮಿಸಿದ್ದರು.
ಈ ವೇಳೆ ಗಾಯಾಳುಗಳ ಸಂಬಂಧಿಕರು ನೀಡಿದ ಹಣವನ್ನ ಸಿದ್ದರಾಮಯ್ಯಗೆ ವಾಪಸ್ ನೀಡಲು ಮುಂದಾದರು.

ನಮಗೆ ಹಣ ಬೇಡ, ನ್ಯಾಯ ಬೇಕು ಅಂತಾ ಆಕ್ರೋಶ ಹೊರಹಾಕಿದ್ದಾರೆ.
ಆಗ ಸಿದ್ದರಾಮಯ್ಯ ಕಾರು ಮುಂದೆ ಸಾಗಿದ್ದು, ಮಹಿಳೆ ಹಣವನ್ನ ಪೊಲೀಸ್ ಬೆಂಗಾವಲು ವಾಹನಕ್ಕೆ ಎಸೆದು ಆಕ್ರೋಶ ಹೊರಹಾಕಿದ್ದಾರೆ.
ಅಂದಹಾಗೆ ಸಿದ್ದರಾಮಯ್ಯ ಅವರು ಆಶೀರ್ವಾದ ಆಸ್ಪತ್ರೆಗೆ ಭೇಟಿ ನೀಡಿದ್ದರು.
ಅಲ್ಲದೇ ಘರ್ಷಣೆಯಲ್ಲಿ ಗಾಯಗೊಂಡಿದ್ದ ಹನೀಫ್, ರಾಜೇಸಾಬ್, ರಫೀಕ್, ದಾವಲ್ ಮಲೀಕ್ ಅವರನ್ನ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.