ಕಡಬ : ಬೈಕ್ ಗಳ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಗಂಭೀರ ಗಾಯಗೊಂಡಿದ್ದ ಸವಾರನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಸುಬ್ರಹ್ಮಣ್ಯ – ಧರ್ಮಸ್ಥಳ ರಾಜ್ಯ ಹೆದ್ದಾರಿಯ ಮರ್ಧಾಳದ ಕೋಡಂದೂರು ಎಂಬಲ್ಲಿ ಸೋಮವಾರ ಬೆಳಿಗ್ಗೆ ಬೈಕ್ ಗಳ ನಡುವೆ ಡಿಕ್ಕಿ ಸಂಭವಿಸಿತ್ತು. ಇದರಲ್ಲಿ ಗಂಭೀರ ಗಾಯಗೊಂಡಿದ್ದ ಕಡಬ ತಾಲೂಕು ಬಂಟ್ರ ಗ್ರಾಮದ ಪಣೆಬೈಲು ನಿವಾಸಿ ಯತೀಂದ್ರ ರೈ ಎಂಬವರ ಪುತ್ರ ಪ್ರಮೋದ್ ರೈ ಎಂಬವರನ್ನು 108 ಆಂಬ್ಯುಲೆನ್ಸ್ ಮೂಲಕ ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಪುತ್ತೂರಿಗೆ ಕರೆದೊಯ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗಾಯಾಳು ಪ್ರಮೋದ್ ರವರು ತಡರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಭಾರತಕ್ಕೆ FATFನಲ್ಲಿ ಐತಿಹಾಸಿಕ ಗೆಲುವು: IAS ಅಧಿಕಾರಿ ವಿವೇಕ್ ಅಗರ್ವಾಲ್ ಉಪಾಧ್ಯಕ್ಷರಾಗಿ ಆಯ್ಕೆ
ಭಾರತಕ್ಕೆ FATFನಲ್ಲಿ ಐತಿಹಾಸಿಕ ಗೆಲುವು: IAS ಅಧಿಕಾರಿ ವಿವೇಕ್ ಅಗರ್ವಾಲ್ ಉಪಾಧ್ಯಕ್ಷರಾಗಿ ಆಯ್ಕೆ ಭಾರತಕ್ಕೆ ಜಾಗತಿಕ ಹಣಕಾಸು ಮತ್ತು ಭದ್ರತಾ ಕ್ಷೇತ್ರದಲ್ಲಿ ಮತ್ತೊಂದು ಮಹತ್ವದ ಸಾಧನೆ ದೊರೆತಿದ್ದು,...








