ಬೆಂಗಳೂರು: ರಾಮನವಮಿ ಮುಗಿಸಿಕೊಂಡು ಮರಳಿ ಹೋಗುತ್ತಿದ್ದವರನ್ನು ಅನ್ಯಕೋಮಿನ ಯುವಕರು ಅಡ್ಡಗಟ್ಟಿ ಪುಂಡಾಟ ಮೆರೆದ ಘಟನೆ ನಡೆದಿದೆ.
ಸಿಲಿಕಾನ್ ಸಿಟಿಯ ವಿದ್ಯಾರಣ್ಯಪುರದ ಬೆಟ್ಟಳ್ಳಿ ಮಸೀದಿ ಹತ್ತಿರ ಈ ಘಟನೆ ನಡೆದಿದೆ. ಮುಸ್ಲಿಂ ಯುವಕರು ‘ಕಾರಿನ ಬಳಿ ಬಂದು ಜೈ ಶ್ರೀರಾಮ್ ಎಂದು ಹೇಳಬೇಕಾ, ಜೈ ಶ್ರೀ ರಾಮ್ ಇಲ್ಲ. ಓನ್ಲೀ ಅಲ್ಲಾ ಹು ಅಕ್ಬರ್ ಎಂದು ಹೇಳಿ ಎಂದು ಧಮ್ಕಿ ಹಾಕಿದ್ದಾರೆ. ಅಲ್ಲದೇ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎನ್ನಲಾಗಿದೆ.
ಈ ವೇಳೆ ಕಾರಿನಲ್ಲಿದ್ದ ಮೂವರು ಹಿಂದು ಯುವಕರ ಮೇಲೆ ಮುಸ್ಲಿಂ ಯುವಕರು ಹಲ್ಲೆ ನಡೆಸಿದ್ದಾರೆ. ಈ ಕುರಿತು ವಿದ್ಯಾರಣ್ಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.