ಬಂಟ್ವಾಳ: ರಸ್ತೆ ಅಪಘಾತದಲ್ಲಿ ರಂಗಭೂಮಿ ಕಲಾವಿದ ಗೌತಮ್ ಕುಲಾಲ್ ವಗ್ಗ(28) ಸಾವನ್ನಪ್ಪಿದ್ದಾರೆ.
ಬಂಟ್ವಾಳ ಹತ್ತಿರದ ವಗ್ಗದಲ್ಲಿ ಇಂದು ಬೆಳಿಗ್ಗೆ ಈ ಘಟನೆ ನಡೆದಿದೆ. ಬಂಟ್ವಾಳ ತಾಲ್ಲೂಕಿನ ದೇವಸ್ಯಪಡೂರು ಎಂಬ ಗ್ರಾಮದ ಮರಾಯಿದೊಟ್ಟು, ನೂಜೆ ಗ್ರಾಮದ ಗೌತಮ್ ಅವರು ಪಿಂಗಾರ ಕಲಾವಿದೆರ್ ಬೆದ್ರ ರಂಗಭೂಮಿ ತಂಡದವರಾಗಿದ್ದರು. ಈ ತಂಡ ಕರಿಯನಂಗಡಿಯಲ್ಲಿ ನಿನ್ನೆ ರಾತ್ರಿ ‘ಕದಂಬ’ ನಾಟಕವಬ್ಬು ಪ್ರದರ್ಶಿಸಿತ್ತು. ಹೀಗಾಗಿ ಗೌತಮ್ ಅಲ್ಲಿ ಅಭಿನಯಿಸಿ ಮರಳಿ ಮನೆಗೆ ತೆರಳುತ್ತಿದ್ದರು. ಈ ಸಂದರ್ಭದಲ್ಲಿ ಅವರ ಬೈಕ್ ಮರಕ್ಕೆ ಡಿಕ್ಕಿ ಹೊಡೆದಿದೆ.
ಗಾಯಗೊಂಡು ಬಿದ್ದಿದ್ದ ಅವರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಅಷ್ಟರಲ್ಲಾಗಲೇ ಸಾವನ್ನಪ್ಪಿದ್ದರು ಎನ್ನಲಾಗಿದೆ.








