ಮಡಿಕೇರಿ : ತಲಾಕಾವೇರಿಯಲ್ಲಿ ಇಂದು ಬೆಳಿಗ್ಗೆ 7.05 ನಿಮಿಷಕ್ಕೆ ಕನ್ಯಾರಾಶಿಯಲ್ಲಿ ಕಾವೇರಿಯು ತೀರ್ಥರೂಪಿಣಿಯಾಗಿ ಭಕ್ತರಿಗೆ ದರ್ಶನ ನೀಡಿದ್ದಾಳೆ. theerthodbhava in talacauvery
ಗೋಪಾಲಕೃಷ್ಣ ಆಚಾರ್ ಅವರ ನೇತೃತ್ವದಲ್ಲಿ ಬೆಳಗ್ಗಿನ ಜಾವ 3.30 ಗಂಟೆಯಿಂದಲೇ ಕಾವೇರಿ ಕುಂಡಿಕೆ ಬಳಿ ಪೂಜಾ ಕೈಂಕರ್ಯ ಸಾಗಿದೆ. ಮಹಾಸಂಕಲ್ಪ ಪ್ರಾರ್ಥನೆಯೊಂದಿಗೆ ಕಾವೇರಿ ಪೂಜೆ ಪ್ರಾರಂಭವಾಗಿದೆ. theerthodbhava in talacauvery
ತಳಿಯತಕ್ಕಿ ಬೊಳಕ್ ನೊಂದಿಗೆ ಕೊಡವ ಸಾಂಪ್ರದಾಯಿಕ ಉಡುಗೆಯಲ್ಲಿ ಭಾಗಮಂಡಲದಿಂದ ತಲಕಾವೇರಿಗೆ ಭಕ್ತರು ಆಗಮಿಸಿದ್ದರು.
ಇದನ್ನೂ ಓದಿ : ಮೈಸೂರು ದಸರಾ ಮಹೋತ್ಸವಕ್ಕೆ ವಿಧ್ಯುಕ್ತ ಚಾಲನೆ
ಕೊರೊನಾ ಹಿನ್ನೆಲೆ ತೀರ್ಥೋದ್ಭವ ಸಂದರ್ಭದಲ್ಲಿ ದೇವಾಲಯ ಅರ್ಚಕರು, ಸಿಬ್ಬಂದಿ ಮತ್ತು ಉಸ್ತುವಾರಿ ಸಚಿವರು ಹಾಗೂ ಕೆಲವೇ ಅಧಿಕಾರಿಗಳಿಗೆ ಮಾತ್ರ ಭಾಗವಹಿಸಲು ಅವಕಾಶ ನೀಡಲಾಗಿದೆ.
ತೀರ್ಥೋಧ್ಭವದ ಬಳಿಕ ಭಕ್ತರು ತಲಕಾವೇರಿಗೆ ಬಂದು ತೀರ್ಥ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಎಲ್ಲಾ ಕಡೆ ಪೊಲೀಸರನ್ನು ನಿಯೋಜಿಸಲಾಗಿದೆ.
ಪವಿತ್ರ ಕಾವೇರಿ ತೀರ್ಥೋದ್ಭವ ಸಂದರ್ಭ ವಸತಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ, ಶಾಸಕ ಅಪ್ಪಚ್ಚು ರಂಜನ್, ವಿಧಾನ ಪರಿಷತ್ ಸದಸ್ಯ ಸುನೀಲ್ ಸುಬ್ರಮಣಿ, ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರಾ, ಜಿ.ಪಂ ಸಿ.ಇ.ಒ ಭನ್ವರ್ ಸಿಂಗ್ ಮೀನಾ ಇತರ ಗಣ್ಯರು ಉಪಸ್ಥಿತರಿದ್ದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel









