ಶ್ರೀಮಂತ ಮುಖೇಶ್ ಅಂಬಾನಿ ಪುತ್ರ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚಂಟ್ ಅವರ ವಿವಾಹಪೂರ್ವ ಸಂಭ್ರಮಾಚರಣೆಯಲ್ಲಿ ನಗದು ಸೇರಿದಂತೆ ಹಲವು ವಸ್ತುಗಳನ್ನು ಕಳ್ಳತನ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ಪೊಲೀಸರು ಐವರನ್ನು ಬಂಧಿಸಿದ್ದಾರೆ.
ಆರೋಪಿಗಳು ತಿರುಚ್ಚಿ ಮೂಲದವರು ಎನ್ನಲಾಗಿದೆ. ಆರೋಪಿಗಳನ್ನು ಗುಜರಾತ್ ಪೊಲೀಸರು ಬಂಧಿಸಿದ್ದಾರೆ. ತಿರುಚ್ಚಿ ಜಿಲ್ಲೆಯ ರಾಮ್‌ಜಿ ನಗರದ ಐವರು ರಾಜ್‌ಕೋಟ್‌ನಲ್ಲಿ ವಿವಾಹ ಪೂರ್ವ ಕಾರ್ಯಕ್ರಮದ ಸ್ಥಳದಲ್ಲಿ ನಿಲ್ಲಿಸಿದ್ದ ಮರ್ಸಿಡಿಸ್ ಕಾರಿನ ಕಿಟಕಿ ಒಡೆದು 10 ಲಕ್ಷ ರೂ. ನಗದು ಹಾಗೂ ಲ್ಯಾಪ್‌ಟಾಪ್ ಕಳ್ಳತನ ಮಾಡಿದ್ದರು. ಸದ್ಯ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.