ತುಮಕೂರು: ಕುಡಿಯಲು ನೀರು ಕೇಳುವ ನೆಪದಲ್ಲಿ ಮನೆಗೆ ನುಗ್ಗಿದ ಖದೀಮರು ಗನ್ ತೋರಿಸಿ ದೋಚಿ ಪರಾರಿಯಾಗಿರುವ ಘಟನೆ ನಡೆದಿದೆ.
ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಊರ್ಕಿಹಳ್ಳಿ ಹತ್ತಿರ ಈ ಘಟನೆ ನಡೆದಿದೆ. ಅಲ್ಲದೇ, ಖದೀಮರು ಮೂರು ಬಾರಿ ಗುಂಡು ಹಾರಿಸಿದ್ದು ಘಟನೆಯಲ್ಲಿ ಮನೆ ಮಾಲೀಕನಿಗೆ ಗಾಯಗಳಾಗಿವೆ. ಈ ಕುರಿತು ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಖದೀಮರು ತಾಲೂಕಿನ ಊರ್ಕಿಹಳ್ಳಿ ಗ್ರಾಮದ ಮಲ್ಲಿಕಾ ಗಂಗಣ್ಣ ಎಂಬುವವರ ಮನೆಗೆ ನೀರು ಕೇಳಲು ಹೋಗಿದ್ದಾರೆ. ಈ ವೇಳೆ ಮನೆಯಲ್ಲಿ ಕಳ್ಳತನ ನಡೆಯುತ್ತಿರುವುದು ತಿಳಿಯುತ್ತಿದ್ದಂತೆ ಮನೆಯಲ್ಲಿದ್ದವರು ಕೂಗಾಡಿದ್ದಾರೆ. ಆಗ ಗನ್ ತೋರಿಸಿ ಹೆದರಿಸಿದ್ದಾರೆ. ನಂತರ ಬ್ಯಾಗ್ ನಲ್ಲಿದ್ದ ಮೂರು ಲಕ್ಷ ಹಣ ದೋಚಿ ಪರಾರಿಯಾಗಿದ್ದಾರೆ. ಅಲ್ಲದೇ, ಮೂರು ಬಾರಿ ಫೈರಿಂಗ್ ಕೂಡ ಮಾಡಿದ್ದಾರೆ. ಈ ಹಿನ್ನೆಲೆ ಮನೆಯ ಮಾಲೀಕನ ಬಲಗಾಲಿಗೆ ಗಾಯಗಳಾಗಿವೆ. ಪೊಲೀಸರು ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.