ADVERTISEMENT
Thursday, March 12, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Karavali Karnataka

ತೆಂಕುತಿಟ್ಟು ಯಕ್ಷಗಾನ ರಂಗದ ಖ್ಯಾತ ಕಲಾವಿದ ಪುತ್ತೂರು ಡಾ| ಶ್ರೀಧರ್ ಭಂಡಾರಿ ಇನ್ನಿಲ್ಲ

Shwetha by Shwetha
February 19, 2021
in Karavali Karnataka, Newsbeat, ಕರಾವಳಿ ಕರ್ನಾಟಕ, ನ್ಯೂಸ್ ಬೀಟ್
Yakshagana artist shreedhar bhandary
Share on FacebookShare on TwitterShare on WhatsappShare on Telegram

ತೆಂಕುತಿಟ್ಟು ಯಕ್ಷಗಾನ ರಂಗದ ಖ್ಯಾತ ಕಲಾವಿದ ಪುತ್ತೂರು ಡಾ| ಶ್ರೀಧರ್ ಭಂಡಾರಿ ಇನ್ನಿಲ್ಲ

ಪುತ್ತೂರು, ಫೆಬ್ರವರಿ19: ಯಕ್ಷಗಾನ ಕಲಾವಿದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪುತ್ತೂರು ಶ್ರೀಧರ ಭಂಡಾರಿಯವರು ಇಂದು ನಿಧನರಾಗಿದ್ದಾರೆ. ಅವರಿಗೆ 73 ವರ್ಷ ವಯಸ್ಸಾಗಿತ್ತು.
ಪುತ್ತೂರಿನ ಬನ್ನೂರಿನಲ್ಲಿ ವಾಸ್ತವ್ಯವಿದ್ದ ಅವರು ಯುವ ಜನಾಂಗಕ್ಕೆ ಯಕ್ಷ ಪಾಠಗಳನ್ನು ಹೇಳಿಕೊಡುತ್ತಿದ್ದರು. ತಮ್ಮ ಅಜ್ಜನಿಂದ ಪ್ರಭಾವಿತರಾಗಿ ಯಕ್ಷಗಾನದತ್ತ ಆಕರ್ಷಿತರಾದ ಶ್ರೀಧರ ಭಂಡಾರಿಯವರು ಯಕ್ಷರಂಗವನ್ನು ಪ್ರವೇಶಿಸಿದ್ದರು.
ಸಿಡಿಲಮರಿ ಅಭಿಮನ್ಯು, ಸಿಡಿದೆದ್ದ ಗಂಡುಗಲಿ, ಯಕ್ಷಗಾನ ಚತುರ, ಅದ್ಭುತ ನರ್ತಕ, ಗಂಡುಗತ್ತಿನ ಪುಂಡುವೇಷಧಾರಿ , ರಂಗಸ್ಥಳದ ರಾಜ ಮುಂತಾದ ಹೆಗ್ಗಳಿಕೆಗೆ ಪಾತ್ರರಾಗಿದ್ದ ಶ್ರೀಧರ ಭಂಡಾರಿಯವರು ತೆಂಕುತಿಟ್ಟು ಯಕ್ಷಗಾನ ಕ್ಷೇತ್ರದಲ್ಲಿ ಕ್ರಿಶ್ಚಿಯನ್ ಬಾಬು, ಮಾಣಂಗಾಯಿ ಕೃಷ್ಣ ಭಟ್ಟರು, ಹೊಸಹಿತ್ಲು ಮಹಾಲಿಂಗ ಭಟ್ಟರು ಮುಂತಾದವರ ನಂತರ ಪುಂಡುವೇಷಧಾರಿಯಾಗಿ ಬಹಳ ಪ್ರಸಿದ್ಧಿಯನ್ನು ಪಡೆದಿದ್ದರು. ಅಭಿಮನ್ಯು ಪಾತ್ರ ಅವರಿಗೆ ಬಹು ದೊಡ್ಡ ಹೆಸರನ್ನು ತಂದುಕೊಟ್ಟಿತು.
ಆಕರ್ಷಕ ಧೀಂಗಿಣ ಶೈಲಿಯ ಸಿಡಿಲಮರಿ ಎಂದೇ ಖ್ಯಾತರಾಗಿದ್ದ ಅವರು ಯಕ್ಷಗಾನದಲ್ಲಿ ಮಾತು ಮತ್ತು ನಾಟ್ಯದಿಂದ ಜನಮೆಚ್ಚುಗೆ ಗಳಿಸಿದ್ದರು.
Yakshagana artist shreedhar bhandary

Related posts

ಉತ್ತರ ಪ್ರದೇಶದಲ್ಲಿ ಮೂರನೇ ಬಾರಿ ಅಧಿಕಾರಕ್ಕೆ ಬಿಜೆಪಿ ತಂತ್ರ: ‘ಮಿಷನ್ ಯುಪಿ 2027’

ಉತ್ತರ ಪ್ರದೇಶದಲ್ಲಿ ಮೂರನೇ ಬಾರಿ ಅಧಿಕಾರಕ್ಕೆ ಬಿಜೆಪಿ ತಂತ್ರ: ‘ಮಿಷನ್ ಯುಪಿ 2027’

March 12, 2026
ಯುದ್ಧದ ಹಿನ್ನೆಲೆ: IPL ಪಂದ್ಯಗಳು ಮುಂದೂಡಿಕೆ ಸಾಧ್ಯತೆ?

ಯುದ್ಧದ ಹಿನ್ನೆಲೆ: IPL ಪಂದ್ಯಗಳು ಮುಂದೂಡಿಕೆ ಸಾಧ್ಯತೆ?

March 12, 2026

ಕೇರಳದ ಎರ್ನಾಕುಲಂ ನಲ್ಲಿ ಕೃಷ್ಣ ಪಾತ್ರಕ್ಕೆ ಗೆಜ್ಜೆ ಕಟ್ಟುವ ಮ‌ೂಲಕ ಯಕ್ಷಗಾನ ಕ್ಷೇತ್ರಕ್ಕೆ ಪದಾರ್ಪಣೆ ಮಾಡಿದ ಶ್ರೀಧರ ಭಂಡಾರಿಯವರು 1963ರಲ್ಲಿ ಧರ್ಮಸ್ಥಳ ಮೇಳ ಸೇರಿದ್ದರು. 1980ರಲ್ಲಿ ಪುತ್ತೂರು ಮೇಳ ಹಾಗೂ 1987ರಲ್ಲಿ ಕಾಂತವರ ಮೇಳಗಳನ್ನು ಸ್ವಂತವಾಗಿ ಕಟ್ಟಿ ಬಳಿಕ ಮತ್ತೆ ಧರ್ಮಸ್ಥಳ ಮೇಳ ಸೇರಿದ್ದರು. ಇವರು ಶ್ರೀ ಕ್ಷೇತ್ರ ಧರ್ಮಸ್ಥಳ ಮೇಳದಲ್ಲಿ ಸುದೀರ್ಘ 45 ವರ್ಷಗಳ ಕಾಲ ಪ್ರಮುಖ ವೇಷಧಾರಿಯಾಗಿ ಸೇವೆ ಸಲ್ಲಿಸಿದ್ದರು.
ರಾಜ್ಯ, ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮತ್ತು ಪ್ರಶಸ್ತಿಗಳನ್ನು ಗಳಿಸಿದ್ದ ಅವರು ತಮ್ಮ 12ನೇ ವಯಸ್ಸಿನಲ್ಲೇ ಯಕ್ಷಗಾನ ಕಲಿತು, 15ನೇ ವಯಸ್ಸಿನಲ್ಲಿ ರಂಗಸ್ಥಳ ಏರಿದ್ದರು.
ಐದು ದಶಕಗಳ ಕಾಲ ಯಕ್ಷಗಾನ ರಂಗವನ್ನು ಆಳಿದ ಶ್ರೀಧರ ಭಂಡಾರಿಯವರು ಹಿರಿಯ ಯಕ್ಷಗಾನ ಕಲಾವಿದ ಶ್ರೀ ಬಳ್ಳಂಬೆಟ್ಟು ಶೀನಪ್ಪ ಭಂಡಾರಿ ಮತ್ತು ಶ್ರೀಮತಿ ಸುಂದರಿ ದಂಪತಿಗಳ ಪುತ್ರ. ಇವರಿಗೆ ಕನ್ನಡ ಸಂಘ ಮಸ್ಕತ್-2009, ಕುವೈಟ್‌ ಬಂಟೋತ್ಸವ-2008, ಕನ್ನಡ ಸಂಘ ಬಹರೈನ್-2002, ಯುಎಇ ತುಳುಕೂಟ ದುಬೈ-2001, ಜೇಡ್ ಜಪಾನ್-1991, ಕರ್ನಾಟಕ ಸಂಘ ದುಬೈ-1989, ಡಾಕ್ಟರೇಟ್ ಪದವಿ 2012, ಅಮೆರಿಕದ ಗ್ಲೋಬಲ್ ಫೀಸ್ ಆಫ್ ಹಾನ್ ಸ್ಟನ್ ಯುನಿವರ್ಸಿಟಿಯಿಂದ ಗೌರವ ಡಾಕ್ಟರೇಟ್ ಪದವಿ ಪಡೆದಿದ್ದಾರೆ.
Yakshagana artist shreedhar bhandary

ಯಕ್ಷಗಾನ ಕ್ಷೇತ್ರದಲ್ಲಿ 56 ವರ್ಷಗಳ ವರ್ಷಗಳ ಸುದೀರ್ಘ ಸೇವೆ ಸಲ್ಲಿಸಿದ ಡಾ | ಶ್ರೀಧರ ಭಂಡಾರಿಯವರಿಗೆ ಯಕ್ಷ ಕೌಸ್ತುಭ, ಸ್ವಸ್ತಿ ಸಿರಿ ರಾಜ್ಯ ಪ್ರಶಸ್ತಿ, ಕರ್ನಾಟಕ ಯಕ್ಷಗಾನ ಬಯಲಾಟ ಪ್ರಶಸ್ತಿ, ಕಂಚಾರು ಆನಂದ ಶೆಟ್ಟಿ ಸ್ಮಾರಕ ಯಕ್ಷಗಾನ ಪ್ರಶಸ್ತಿ ಮುಂಬಯಿ ಡಾ.ಬಿ.ಬಿ ಶೆಟ್ಟಿ ಪ್ರಶಸ್ತಿ, ಅಡ್ಕಸ್ಥಳ ಪ್ರಶಸ್ತಿ, ಶ್ರೀ ರಾಮ ವಿಠಲ ಪ್ರಶಸ್ತಿ, ಪೇಜಾವರ ಎಡನೀರು ಮಠ ಪ್ರಶಸ್ತಿಗಳು ಸೇರಿದಂತೆ ಹಲವಾರು ಪ್ರಶಸ್ತಿಗಳು ಸಂದಿವೆ.

ಮೃತರು ಪತ್ನಿ ಉಷಾ ಭಂಡಾರಿ, ಪುತ್ರಿಯರಾದ ಕೋಕಿಲಾ, ಶಾಂತನಾ, ಪುತ್ರರಾದ ಡಾ ಅನಿಲ, ದೇವಿ ಪ್ರಕಾಶ್ ಮತ್ತು ಮೊಮ್ಮಕ್ಕಳನ್ನು ಅಗಲಿದ್ದಾರೆ.

Tags: Dr. Shreedhar bhandaryYakshagana artist
ShareTweetSendShare
Join us on:

Related Posts

ಉತ್ತರ ಪ್ರದೇಶದಲ್ಲಿ ಮೂರನೇ ಬಾರಿ ಅಧಿಕಾರಕ್ಕೆ ಬಿಜೆಪಿ ತಂತ್ರ: ‘ಮಿಷನ್ ಯುಪಿ 2027’

ಉತ್ತರ ಪ್ರದೇಶದಲ್ಲಿ ಮೂರನೇ ಬಾರಿ ಅಧಿಕಾರಕ್ಕೆ ಬಿಜೆಪಿ ತಂತ್ರ: ‘ಮಿಷನ್ ಯುಪಿ 2027’

by Shwetha
March 12, 2026
0

ಭಾರತೀಯ ಜನತಾ ಪಾರ್ಟಿ ಉತ್ತರ ಪ್ರದೇಶದಲ್ಲಿ ಸತತ ಮೂರನೇ ಅವಧಿಗೆ ಅಧಿಕಾರವನ್ನು ಮರಳಿ ಪಡೆಯಲು ಹೊಸ ರಾಜಕೀಯ ತಂತ್ರವನ್ನು ರೂಪಿಸಿದೆ. ಈ ತಂತ್ರಕ್ಕೆ ಆರ್‌ಎಸ್‌ಎಸ್ ಸಹ ಒಪ್ಪಿಗೆ...

ಯುದ್ಧದ ಹಿನ್ನೆಲೆ: IPL ಪಂದ್ಯಗಳು ಮುಂದೂಡಿಕೆ ಸಾಧ್ಯತೆ?

ಯುದ್ಧದ ಹಿನ್ನೆಲೆ: IPL ಪಂದ್ಯಗಳು ಮುಂದೂಡಿಕೆ ಸಾಧ್ಯತೆ?

by Shwetha
March 12, 2026
0

ಮಾರ್ಚ್ 28ರಿಂದ ಆರಂಭವಾಗಬೇಕಿದ್ದ ಐಪಿಎಲ್ ಟೂರ್ನಿ ಮುಂದೂಡಲಾಗುವ ಸಾಧ್ಯತೆಗಳ ಬಗ್ಗೆ ಚರ್ಚೆಗಳು ಆರಂಭವಾಗಿವೆ. ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಉದ್ವಿಗ್ನ ಪರಿಸ್ಥಿತಿ ಮತ್ತು ಅದರ ಪರಿಣಾಮಗಳಿಂದ ಹಲವು ವ್ಯವಸ್ಥಾತ್ಮಕ ಸಮಸ್ಯೆಗಳು...

ಸುಪ್ರೀಂ ಕೋರ್ಟ್ ಅಸಮಾಧಾನ ಬಳಿಕ  ಇಡೀ ಪಠ್ಯಪುಸ್ತಕ ಹಿಂಪಡೆದು ಕ್ಷಮೆಯಾಚಿಸಿದ NCERT

NCERT ಪಠ್ಯಪುಸ್ತಕಗಳ ಸಮಗ್ರ ಪರಿಶೀಲನೆ: ಸುಪ್ರೀಂ ಕೋರ್ಟ್ ಸೂಚನೆ

by Shwetha
March 12, 2026
0

ಸುಪ್ರೀಂ ಕೋರ್ಟ್ ಎನ್‌ಸಿಇಆರ್‌ಟಿ ಪಠ್ಯಪುಸ್ತಕ ವಿವಾದದ ಹಿನ್ನೆಲೆಯಲ್ಲಿ ಮಹತ್ವದ ಸೂಚನೆ ನೀಡಿದೆ. NCERT ಪ್ರಕಟಿಸಿರುವ 8ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿನ ‘ನ್ಯಾಯಾಂಗದಲ್ಲಿ ಭ್ರಷ್ಟಾಚಾರ’ ಎಂಬ ವಿಷಯಕ್ಕೆ...

ಇರಾನ್ ಬೆದರಿಕೆ ನಡುವೆಯೂ ಮುಂಬೈ ತಲುಪಿದ ತೈಲ ಟ್ಯಾಂಕರ್: ಜಾಗತಿಕ ಮಟ್ಟದಲ್ಲಿ ಭಾರತದ ದರ್ಬಾರ್ ಶುರು!

ಇರಾನ್ ಬೆದರಿಕೆ ನಡುವೆಯೂ ಮುಂಬೈ ತಲುಪಿದ ತೈಲ ಟ್ಯಾಂಕರ್: ಜಾಗತಿಕ ಮಟ್ಟದಲ್ಲಿ ಭಾರತದ ದರ್ಬಾರ್ ಶುರು!

by Shwetha
March 12, 2026
0

ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡಗಳು ಕವಿದಿರುವ ಪ್ರಸ್ತುತ ಸಂದರ್ಭದಲ್ಲಿ, ಇಡೀ ವಿಶ್ವದ ಜೀವನಾಡಿಯಾಗಿರುವ ತೈಲ ಪೂರೈಕೆ ಮಾರ್ಗ 'ಹಾರ್ಮುಜ್ ಜಲಸಂಧಿ' ಬಹುತೇಕ ಸ್ತಬ್ಧಗೊಂಡಿದೆ. ಇರಾನ್ ನೀಡಿದ್ದ ನೇರ...

ಗ್ಯಾಸ್ ಕೊರತೆ ಪರಿಣಾಮ: ಬೆಂಗಳೂರಿನ ಹೋಟೆಲ್‌ಗಳಲ್ಲಿ ಕೆಲವು ತಿಂಡಿಗಳಿಗೆ ತಾತ್ಕಾಲಿಕ ಬಂದ್

ಗ್ಯಾಸ್ ಕೊರತೆ ಪರಿಣಾಮ: ಬೆಂಗಳೂರಿನ ಹೋಟೆಲ್‌ಗಳಲ್ಲಿ ಕೆಲವು ತಿಂಡಿಗಳಿಗೆ ತಾತ್ಕಾಲಿಕ ಬಂದ್

by Shwetha
March 12, 2026
0

ಬೆಂಗಳೂರು ನಗರದಲ್ಲಿನ ಹೋಟೆಲ್‌ಗಳಲ್ಲಿ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಪೂರೈಕೆಯಲ್ಲಿ ತೀವ್ರ ವ್ಯತ್ಯಯ ಉಂಟಾಗಿರುವ ಹಿನ್ನೆಲೆ ಕೆಲವು ತಿಂಡಿಗಳನ್ನು ತಾತ್ಕಾಲಿಕವಾಗಿ ತಯಾರಿಸದಂತೆ ಹೋಟೆಲ್ ಮಾಲೀಕರು ನಿರ್ಧರಿಸಿದ್ದಾರೆ. ವಿಶೇಷವಾಗಿ ಹೆಚ್ಚು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram