ಬಾಗಲಕೋಟೆ: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ವಿರುದ್ಧ ಸಿಡಿ ಬಾಂಬ್ ಸಿಡಿಸಿದ್ದ ಬಿಜೆಪಿ ಶಾಸಕ ಹಾಗೂ ಮಾಜಿ ಕೇಂದ್ರ ಸಚಿವ ಬಸನಗೌಡ ಪಾಟೀಲ್ ಯತ್ನಾಳ್, ನೋಡಲು ಆಗದಂತಹ ಯಡಿಯೂರಪ್ಪ ಸಿಡಿಗಳೂ ಇವೆ ಎನ್ನುವ ಮೂಲಕ ಮತ್ತೊಂದು ಬಾಂಬ್ ಸಿಡಿಸಿದ್ದಾರೆ.
ಪಂಡಿತ್ ದೈವಜ್ಞ ಪ್ರಧಾನ ತಾತ್ರಿಂಕ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು 8548998564
ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564
ಬಾಗಲಕೋಟೆಯಲ್ಲಿ ಮಾತನಾಡಿದ ಯತ್ನಾಳ್, ಸಿಡಿ ತೋರಿಸಿ ಹೆದರಿಸಿ ಮಂತ್ರಿಯಾದವರ ಬಗ್ಗೆ ನಾನು ಮಾತನಾಡಿದ್ದು ನಿಜ. ಸಿಡಿಗಳಲ್ಲಿ ಭ್ರಷ್ಟಾಚಾರ ಆರೋಪದ ಸಿಡಿಗಳು ಮಾತ್ರವಲ್ಲ, ನೋಡಲು ಆಗದಂತಹ ಸಿಡಿಗಳೂ ಇವೆ. ಈ ಬಗ್ಗೆ ಸಿಬಿಐ ತನಿಖೆಯಾಗಲಿ ಎಂದು ಆಗ್ರಹಿಸಿದ್ದಾರೆ.
ಕೆಲ ತಿಂಗಳ ಹಿಂದೆ 3 ಜನ ನನ್ನ ಹತ್ತಿರ ಬಂದು ಕೆಲ ಸಿಡಿಗಳನ್ನು ತೋರಿಸಿದರು. ನಾನು ಸಿಡಿಗಳನ್ನು ಇಟ್ಟುಕೊಂಡು ಆಟವಾಡುವ ವ್ಯಕ್ತಿ ನಾನಲ್ಲ. ಅಂತಹ ಆಟ ಆಡಿದ್ದರೆ ಎಂದೋ ಡಿಸಿಎಂ ಆಗುತ್ತಿದ್ದೆ ಎಂದು ಯತ್ನಾಳ್ ವ್ಯಂಗ್ಯವಾಡಿದ್ದಾರೆ.
ನಾನು ನೇರವಾಗಿ ಮುಖ್ಯಮಂತ್ರಿಗಳ ಬಗ್ಗೆಯೇ ಮಾತನಾಡಿದ್ದೇನೆ. ಯಡಿಯೂರಪ್ಪನವರ ಸಿಡಿಗಳಲ್ಲೇ ಇಟ್ಟುಕೊಂಡು ಬ್ಲಾಕ್‍ಮೇಲ್ ಮಾಡುತ್ತಿದ್ದಾರೆ. ಕಾಲ ಕ್ರಮೇಣದಲ್ಲಿ ಈ ಸಿಡಿಗಳು ಬಹಿರಂಗ ಆಗುವ ಸಾಧ್ಯತೆ ಇದೆ. ಹೀಗಾಗಿ ಮುಕ್ತ ತನಿಖೆಯಾಗಬೇಕಾದರೆ ಸಿಬಿಐ ತನಿಖೆಗೆ ಕೊಡಿ ಎಂದರು.
ಕಾಂಗ್ರೆಸ್ ನಾಯಕರು ಸಿಡಿ ರಿಲೀಸ್ ಮಾಡಲಿ
ಡಿ.ಕೆ ಶಿವಕುಮಾರ್, ಜಮೀರ್ ಅಹಮದ್ ಖಾನ್ ಬಳಿಯೂ ಹಲವು ಮಹತ್ವದ ಸಿಡಿಗಳಿವೆ. ಯಡಿಯೂರಪ್ಪ-ವಿಜಯೇಂದ್ರ ಜತೆ ಕಾಂಗ್ರೆಸ್ ನಾಯಕರು ಅಡ್ಜಸ್ಟ್ ಮೆಂಟ್ ಮಾಡಿಕೊಂಡಿದ್ದಾರೆ. ಇಲ್ಲ ಎನ್ನುವುದಾದರೆ ಸಿಡಿ ರಿಲೀಸ್ ಮಾಡಿ ನಿಜವಾದ ಪ್ರತಿಪಕ್ಷ ಎಂಬುದನ್ನು ಸಾಬೀತು ಮಾಡಿ ಎಂದು ಯತ್ನಾಳ್ ಕಾಂಗ್ರೆಸ್ ನಾಯಕರಿಗೆ ಸವಾಲು ಹಾಕಿದ್ದಾರೆ.
ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel







