ಕುಮಾರಸ್ವಾಮಿ ಬಗ್ಗೆ ಮಾತನಾಡುವ ನೈತಿಕತೆ ಲೀಡರ್ಸ್‍ಗಿಲ್ಲ : ರೇವಣ್ಣ

1 min read
H D Revanna saaksha tv

ಕುಮಾರಸ್ವಾಮಿ ಬಗ್ಗೆ ಮಾತನಾಡುವ ನೈತಿಕತೆ ಲೀಡರ್ಸ್‍ಗಿಲ್ಲ : ರೇವಣ್ಣ Kumaraswamy saaksha tv

ಹಾಸನ : ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಬಗ್ಗೆ ಮಾತನಾಡುವ ನೈತಿಕತೆ ಕಾಂಗ್ರೆಸ್ ನ ಕೆಲವು ಲೀಡರ್ ಗಳಿಗಿಲ್ಲ ಎಂದು ಮಾಜಿ ಸಚಿವ ಹೆಚ್ ಡಿ ರೇವಣ್ಣ ಹೇಳಿದ್ದಾರೆ.

ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರಿಗೆ ಕುಮಾರಸ್ವಾಮಿ ಬಗ್ಗೆ ನೈತಿಕತೆ ಇಲ್ಲ.

ನಮ್ಮ ಮನೆ ಬಾಗಿಲಿಗೆ ಬಂದು ನೀವೇ ಐದು ವರ್ಷ ಮುಖ್ಯಮಂತ್ರಿ ಆಗಿ ಅಂದಿದ್ದರು.

Kumaraswamy saaksha tv

ಕುಮಾರಸ್ವಾಮಿ ಅವರಿಗೆ ಒಳ್ಳೆಯ ಹೆಸರು ಬರುತ್ತೆ ಎಂದು ಸರ್ಕಾರವನ್ನು ಬೀಳಿಸಿದರು ಎಂದು ಪರೋಕ್ಷವಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಕಿಡಿಕಾಡಿದರು.

ಇನ್ನು ಎರಡೂ ರಾಷ್ಟ್ರೀಯ ಪಕ್ಷಗಳು ನನ್ನ ಹೆಸರಿನ ವ್ಯಕ್ತಿಯಿಂದ ನಾಮಪತ್ರ ಹಾಕಿಸಿವೆ. ನಾವು ಅಷ್ಟೊಂದು ಫೇಮಸ್ ಆಗಿದ್ದೀವಿ.

ಎರಡು ಪಕ್ಷಗಳಿಗೆ ಈ ಪರಿಸ್ಥಿತಿ ಬಂದಿದೆ ಎಂದು ವ್ಯಂಗ್ಯವಾಡಿದ ರೇವಣ್ಣ, ಎರಡು ರಾಷ್ಟ್ರೀಯ ಪಕ್ಷಗಳು ಜೆಡಿಎಸ್ ಪ್ರತಿಸ್ಪರ್ಧಿ ಎಂದು ಹೇಳುತ್ತಿದ್ದಾರೆ. ಜೆಡಿಎಸ್ ಏನು ಎಂದು ಈಗ ಎಲ್ಲರಿಗೂ ಗೊತ್ತಾಗಿದೆ ಎಂದರು.

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd