ದೇಶದಲ್ಲಿ 95.3 ಕೋಟಿಗೂ ಅಧಿಕ ಮತದಾರರಿದ್ದಾರೆ: ಸುಶೀಲ್ ಚಂದ್ರ SaakshaTv
ನವದೆಹಲಿ: ಚುನಾವಣೆಯಲ್ಲಿ Election ಹೆಚ್ಚಿನ ಯುವಕರು ಭಾಗಿಯಾಗಲು ಪ್ರೋತ್ಸಾಹ ನೀಡಲು ಜನವರಿ 25 ರಂದು ರಾಷ್ಟ್ರೀಯ ಮತದಾರರ ದಿನಾಚರಣೆ ಆಚರಿಸಲಾಗುತ್ತದೆ ಎಂದು ಚುನಾವಣಾ ಆಯೋಗದ ಮುಖ್ಯಸ್ಥ ಸುಶೀಲ್ ಚಂದ್ರ Shushil Chandra ಹೇಳಿದರು.
ನವದೆಹಲಿಯಲ್ಲಿ ಆಯೋಜನೆಗೊಂಡಿದ್ದ 12ನೇ ರಾಷ್ಟ್ರೀಯ ಮತದಾರರ ದಿನಾಚರಣೆ National Voters Day ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಇಂದು ರಾಷ್ಟ್ರೀಯ ಮತದಾರರ ದಿನಾಚರಣೆ. ಯುವಕರು ಚುನಾವಣೆಯಲ್ಲಿ ಭಾಗಿಯಾಗಿ ತಮ್ಮ ಮತವನ್ನು ಚಲಾಯಿಸಬೇಕು. ಇದು ಅವರ ಹಕ್ಕು. ದೇಶದಲ್ಲಿ 95.3 ಕೋಟಿಗೂ ಅಧಿಕ ಮತದಾರರಿದ್ದಾರೆ. ಈ ಮತದಾರರಲ್ಲಿ 49 ಕೋಟಿ ಪುರುಷರು ಹಾಗೂ 46 ಕೋಟಿ ಮಹಿಳೆಯರಿದ್ದಾರೆ. ಜೊತೆಗೆ ದೇಶದಲ್ಲಿ 1.92 ಕೋಟಿ ಹಿರಿಯ ನಾಗರಿಕ ಮತದಾರಿದ್ದಾರೆ ಎಂದು ಮಾಹಿತಿ ನೀಡಿದರು.
ದೇಶದಲ್ಲಿ ಈಗಾಗಲೆ ಘೋಷಣೆಯಾಗಿರುವ ಪಂಚರಾಜ್ಯ ಚುನಾವಣೆ Five State Election ಕುರಿತು ಮಾತನಾಡಿದ ಅವರು, ಕೊರೊನಾ ಸಾಕಷ್ಟು ಪ್ರಮಾಣದಲ್ಲಿ ಹರಡುತ್ತಿದ್ದು, ಇದನ್ನು ಗಮನದಲ್ಲಿ ಇಟ್ಟುಕೊಂಡು ಸುರಕ್ಷಿತವಾಗಿ ಚುನಾವಣೆ ನಡೆಸುತ್ತೇವೆ. ಇದಕ್ಕೆ ಬೇಕಾಗುವ ಎಲ್ಲ ಸಿದ್ದತೆಗಳನ್ನು ಮಾಡಿಕೊಂಡಿದ್ದೇವೆ ಎಂದು ಹೇಳಿದರು.
ಕಳೆದ ಎರಡು ವರ್ಷಗಳಿಂದ ದೇಶದಲ್ಲಿ ಕೊರೊನಾ ಆರ್ಭಟ ಹೆಚ್ಚಾಗಿದೆ. ಆದರೂ ಇದರ ಮಧ್ಯೆ ಚುನಾವಣೆ ನಡೆಸುವುದು ದೊಡ್ಡ ಸವಾಲಿನ ಕೆಲಸ ಆದರೆ ಮತದಾರರ ಸಹಕಾರದಿಂದ ಈವರೆಗಿನ ಎಲ್ಲ ಚುನಾವಣೆಗಳನ್ನು ಯಶಸ್ವಿಯಾಗಿ ನಡೆಸಿದ್ದೇವೆ. ಮುಂಬರುವ ಉತ್ತರಪ್ರದೇಶ, ಮಣಿಪುರ, ಗೋವಾ, ಉತ್ತರಾಖಂಡ ಮತ್ತು ಪಂಜಾಬ್ ರಾಜ್ಯಗಳ ಚುನಾವಣೆಯನ್ನು ಯಶಸ್ವಿಯಾಗಿ ನಡೆಸಲು ಸಜ್ಜಾಗಿದ್ದೇವೆ ಎಂದರು.