ಫೆಬ್ರವರಿವರೆಗೂ ಪ್ರತಿ ವರ್ಷ ನೆಗಡಿ ಇರುತ್ತೆ : ಡಾ.ಕೆ.ಸುಧಾಕರ್
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕು ಕೇಸ್ ಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಇಂದು ಸಿಎಂ ಬೊಮ್ಮಾಯಿ ಅಧಿಕಾರಿಗಳ ಸಭೆ ಕರೆದಿದ್ದಾರೆ.
ಈ ಸಭೆಗೆ ಹಾಜರಾಗುವ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಮಹತ್ವದ ಮಾಹಿತಿ ನೀಡಿದ್ದಾರೆ.
ಪ್ರತಿ ವರ್ಷ ಡಿಸೆಂಬರ್ನಿಂದ ಶುರುವಾಗಿ ಫೆಬ್ರವರಿವರೆಗೂ ನೆಗಡಿ ಇರುತ್ತೆ. ಇದು ಸೀಸನಲ್ ಫ್ಲೋ ಆಗಿದೆ.
ಯಾರಿಗೆಲ್ಲ ಈ ಲಕ್ಷಣ ಇದೆಯೋ ಅವರಿಗೆ ಆದ್ಯತೆ ಮೇಲೆ ಟೆಸ್ಟ್ ಮಾಡ್ತಿದ್ದೇವೆ ಎಂದು ಸಚಿವರು ತಿಳಿಸಿದ್ದಾರೆ.
ಜೊತೆಗೆ ಬೇರೆ ರಾಜ್ಯಕ್ಕೆ ಹೋಲಿಸಿದರೇ ನಮ್ಮಲ್ಲಿ ಹೆಚ್ಚು ಕೋವಿಡ್ ಟೆಸ್ಟ್ ಮಾಡುತ್ತಿದ್ದೇವೆ.
ನಮ್ಮಲ್ಲಿ ಸಾವಿನ ಪ್ರಮಾಣ ಕಡಿಮೆ ಇದ್ದು, ಆಸ್ಪತ್ರೆಗೆ ಸೇರುವವರ ಪ್ರಮಾಣವೂ ಕಡಿಮೆ ಇದೆ.
ನಾವು ಮುಂಚಿತವಾಗಿ ಎಲ್ಲ ಕ್ರಮಗಳನ್ನ ತೆಗೆದುಕೊಳ್ತಿರೋದರಿಂದ ನಮ್ಮಲ್ಲಿ ವೈರಸ್ ನಿಯಂತ್ರಣದಲ್ಲಿದೆ ಎಂದು ಸುಧಾಕರ್ ಮಾಹಿತಿ ನೀಡಿದ್ದಾರೆ.
ಇನ್ನು ಇವತ್ತಿನ ಸಭೆಯಲ್ಲಿ ಪಾಸಿಟಿವ್ ಕೇಸ್, ಆಸ್ಪತ್ರೆಗೆ ಸೇರುವವರು, ಮಕ್ಕಳ ಬಗ್ಗೆ ಹಾಗೂ ವೀಕೆಂಡ್ ಕರ್ಫ್ಯೂ ಬಗ್ಗೆಯೂ ಚರ್ಚೆ ನಡೆಯಲಿದೆ.









