ಬೆಂಗಳೂರು: ಈಶ್ವರಪ್ಪ ಜೊತೆ ಕುಳಿತು ಎಲ್ಲವನ್ನೂ ಸರಿ ಮಾಡುತ್ತೇನೆ ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂತೇಶ್ ನನ್ನು ಎಂಎಲ್ಸಿ ಮಾಡುವ ಕುರಿತು ದೆಹಲಿ ಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಈ ಕುರಿತು ನಾನು ಮಾತನಾಡುತ್ತೇನೆ ಎಂದು ಹೇಳಿದರು.
ಅಲ್ಲದೇ, ಯದುವೀರ್ ಸ್ಪರ್ಧೆ ಬಗ್ಗೆ ಮಾತನಾಡಿದ ಅವರು, ಅವರ ಸ್ಪರ್ಧೆಯಿಂದ ಸುತ್ತಮುತ್ತಲ ಕ್ಷೇತ್ರಗಳಲ್ಲಿ ಅನುಕೂಲವಾಗಲಿದೆ. ಅವರು ಕೂಡಾ ಅಕ್ಕಪಕ್ಕದ ಕ್ಷೇತ್ರಗಳಲ್ಲಿ ಓಡಾಡಲು ಒಪ್ಪಿಕೊಂಡಿದ್ದಾರೆ.