ಬೆಂಗಳೂರು: ರಾಜ್ಯದಲ್ಲಿ ಎರಡು ದಿನಗಳ ಕಾಲ ಭರ್ಜರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕೂಡ ಎರಡು ದಿನ ಭಾರೀ ಮಳೆಯಾಗುವ (Rain) ಸಾಧ್ಯತೆಗಳಿವೆ ಎಂದು ಇಲಾಖೆ ಈಗಾಗಲೇ ಮುನ್ಸೂಚನೆ ನೀಡಿದೆ. ಹೀಗಾಗಿ ಸಿಲಿಕಾನ್ ಸಿಟಿಯಲ್ಲಿ ಬೆಳಿಗ್ಗೆಯಿಂದಲೇ ಚಳಿ ಆರಂಭವಾಗಿದೆ. ಆಂಧ್ರ, ಒಡಿಶಾ, ತಮಿಳುನಾಡಲ್ಲಿ ಭಾರೀ ಮಳೆ ಸಾಧ್ಯತೆ ಹಿನ್ನೆಲೆ ರಾಜ್ಯದಲ್ಲೂ ಹೈಅಲರ್ಟ್ ಘೋಷಣೆ ಮಾಡಲಾಗಿದೆ.
ಗಂಟೆಗೆ 100 ಕಿಮೀ ವೇಗದಲ್ಲಿ ಈ ಚಂಡಮಾರುತ ಬೀಸಲಿದ್ದು, ರಾಜ್ಯಕ್ಕೂ ಸೈಕ್ಲೋನ್ ಎಫೆಕ್ಟ್ ತಟ್ಟುವ ಸಾಧ್ಯತೆ ಹೆಚ್ಚಿದೆ.