ಬೆಂಗಳೂರು: ರಾಜ್ಯ ಸರ್ಕಾರ ಕುರ್ಚಿಗಾಗಿ ಕಿತ್ತಾ ನಡೆಸುತ್ತಿದೆ. ಪರಿಣಾಮ ಇಡೀ ರಾಜ್ಯವೇ ಜಂಗಲ್ ಆದಂತಾಗಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೀದರ್ (Bidar) ಘಟನೆ ಸೇರಿದಂತೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ರಾಜ್ಯದಲ್ಲಿ ದಿನನಿತ್ಯ ಹಗಲು ದರೋಡೆಯಾಗುತ್ತಿದೆ. ಪುಟ್ಟ ಮಕ್ಕಳ ಮೇಲೆ ಅತ್ಯಾಚಾರದಂತ ಅಪರಾಧ ಕೃತ್ಯಗಳು ರಾಜಾರೋಷವಾಗಿ ನಡೆಯುತ್ತಿದ್ದು, ಅಪರಾಧ ಮಾಡುವವರಿಗೆ ಯಾರದ್ದೂ ಭಯವಿಲ್ಲದಂತಾಗಿದೆ. ಈ ಸರ್ಕಾರದ ಅವಧಿಯಲ್ಲಿ ಮೂಕ ಪ್ರಾಣಿಗಳು, ಮನುಷ್ಯರು, ಯಾರಿಗೂ ರಕ್ಷಣೆ ಇಲ್ಲದಂತಾಗಿದೆ.
ಬೀದರ್‌ನಲ್ಲಿ ಹಾಡ ಹಗಲೇ ಎಟಿಎಂಗೆ ಹಣ ತುಂಬಲು ಬಂದವರ ಮೇಲೆ ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಿರುವುದು ರಾಜ್ಯವೇ ಬೆಚ್ಚಿ ಬೀಳುವಂತೆ ಮಾಡಿದೆ. ರಾಜ್ಯದಲ್ಲಿ ದಿನನಿತ್ಯ ಹಗಲು ದರೋಡೆ, ಪುಟ್ಟ ಮಕ್ಕಳ ಮೇಲೆ ಅತ್ಯಾಚಾರದಂತ ಅಪರಾಧ ಕೃತ್ಯಗಳು ರಾಜಾರೋಷವಾಗಿ ನಡೆಯುತ್ತಿದ್ದು, ಆಡಳಿತ ನಡೆಸುವವರು ಕುರ್ಚಿಗಾಗಿ ಕಿತ್ತಾಟ ನಡೆಸುವುದರಲ್ಲಿ ನಿರತರಾಗಿದ್ದು, ಸರ್ಕಾರಕ್ಕೆ ಪೊಲೀಸರ ಮೇಲೆ ನಿಯಂತ್ರಣ ಇಲ್ಲದಂತಾಗಿದೆ. ಪೊಲಿಸರಿಗೆ ಕ್ರಿಮಿನಲ್ ಗಳ ಮೇಲೆ ನಿಯಂತ್ರಣ ಇಲ್ಲದಂತಾಗಿದ್ದು, ಅಪರಾಧ ಮಾಡುವವರಿಗೆ ಯಾರ ಭಯವಿಲ್ಲದಂತಾಗಿದೆ. ಇದರಿಂದ ಕರ್ನಾಟಕ ಜಂಗಲ್ ರಾಜ್ಯ ಆಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಮೂಕ ಪ್ರಾಣಿಗಳು, ಮನುಷ್ಯರು ಯಾರಿಗೂ ರಕ್ಷಣೆ ಇಲ್ಲದಂತಾಗಿದೆ. ರಾಜ್ಯ ಸರ್ಕಾರ ತಪ್ಪಿತಸ್ಥರ ಮೇಲೆ ಕೂಡಲೇ ಕ್ರಮ ಕೈಗೊಂಡು ಕಠಿಣ ಶಿಕ್ಷೆ ನೀಡಬೇಕು. ಇಲ್ಲದಿದ್ದರೆ ರಾಜ್ಯದ ಜನರು ದಂಗೆ ಏಳುತ್ತಾರೆ ಎಂದು ಕಿಡಿಕಾರಿದ್ದಾರೆ.ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆ
ಬೆಂಗಳೂರು: ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟದಲ್ಲಿ ಹಲವು ನಿರ್ಧಾರಗಳನ್ನು ಕೈಗೊಳ್ಳಲಾಗಿದೆ.
ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಸಚಿವ ಎಚ್.ಕೆ. ಪಾಟೀಲ್, ಹೆಚ್‌ಎಂಟಿ ಅಧೀನದಲ್ಲಿ ಇರುವ ಅರಣ್ಯ ಭೂಮಿ ಹಿಂಪಡೆಯುವ ಕುರಿತು ಕ್ಯಾಬಿನೆಟ್‌ನಲ್ಲಿ ಚರ್ಚಿಸಲಾಗಿದೆ. ಹೆಚ್‌ಎಂಟಿ ಕಂಪನಿ (HMT Company) ಕೆಲವು ಅರಣ್ಯ ಭಾಗವನ್ನು ಬೇರೆ ಸಂಸ್ಥೆಗಳಿಗೆ ಮಾರಾಟ ಮಾಡಿದೆ. ಕಂಪನಿಯು ಸುಮಾರು 160 ಎಕರೆ ಭೂಮಿಯನ್ನು 375 ಕೋಟಿ ರೂ.ಗೆ ಖಾಸಗಿ ಹಾಗೂ ಸರ್ಕಾರಿ ಸಂಸ್ಥೆಗಳಿಗೆ ಮಾರಾಟ ಮಾಡಿದೆ. ಮಾರಾಟ ಸಂದರ್ಭದಲ್ಲಿ ಅರಣ್ಯ ಇಲಾಖೆ, ಅರಣ್ಯ ಸಚಿವರು ಯಾರಿಂದಲೂ ಅನುಮತಿ ಪಡೆದಿಲ್ಲ. ಹೀಗಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದಿದ್ದಾರೆ.
180 ಎಕರೆ ಅರಣ್ಯ ಭೂಮಿಯನ್ನು ಇದೀಗ ಮಾರಾಟ ಮಾಡಲು ಹೊರಟಿದ್ದಾರೆ. ಅಲ್ಲದೇ ಮೊದಲೇ 160 ಎಕರೆ ಮಾರಾಟ ಆಗಿದ್ದು, ಅದೂ ಅರಣ್ಯ ಭೂಮಿ ಡಿನೋಟೀಫೈ ಆಗಿಲ್ಲ. ಈ ಪ್ರಶ್ನಾರ್ಹ ಭೂಮಿಯನ್ನು ಡಿನೋಟಿಫೈ ಮಾಡುವುದಕ್ಕೆ ಸುಪ್ರೀಂ ಕೋರ್ಟ್‌ಗೆ ಮಧ್ಯಂತರ ಅರ್ಜಿ ಸಲ್ಲಿಸಲಾಗಿತ್ತು. 2015ರಲ್ಲಿ ಸಮಸ್ಯೆ ಬಗೆಹರಿಸಲು ಉನ್ನತ ಮಟ್ಟದ ಸಮಿತಿ ಕೂಡ ರಚಿಸಲಾಗಿತ್ತು. ಅರಣ್ಯ ಭೂಮಿ ಡಿನೋಟಿಫೈ ಮಾಡಿದರೆ ರಾಜ್ಯಕ್ಕೆ ಭಾರೀ ಆರ್ಥಿಕ ನಷ್ಟ ಉಂಟಾಗುತ್ತದೆ ಎಂದಿದ್ದಾರೆ.