ಬೆಂಗಳೂರು: ಮಂಡ್ಯ ಜಿಲ್ಲೆಯ ನಾಗಮಂಗಲ ಕೋಮು ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿದೆ. ಈ ವಿಷಯವಾಗಿ ಮಾತನಾಡಿರುವ ವಿಪಕ್ಷ ನಾಯಕ ಆರ್. ಅಶೋಕ್, ರಾಜ್ಯದಲ್ಲಿರುವುದು ತಾಲಿಬಾನ್ ಸರ್ಕಾರ ಎಂದು ವಿಪಕ್ಷ ನಾಯಕ ಆರ್. ಅಶೋಕ್ (R. Ashok) ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಎಕ್ಸ್ ನಲ್ಲಿ ಬರೆದುಕೊಂಡು ಆಕ್ರೋಶ ವ್ಯಕ್ತಪಡಿಸಿರುವ ಆರ್. ಅಶೋಕ್, ಕಾಂಗ್ರೆಸ್ (Congress) ಸರ್ಕಾರವು ತಾಲಿಬಾನ್ ಸರ್ಕಾರ ಆಗಿದೆ. ಅಷ್ಟೇ ಅಲ್ಲ ಘಟನೆ ವೇಳೆ ಸರ್ಕಾರಕ್ಕೆ ಸರಣಿ ಪ್ರಶ್ನೆಗಳನ್ನು ಕೇಳಿ ಉತ್ತರಕ್ಕೆ ಆಗ್ರಹಿಸಿದ್ದಾರೆ.
ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ಸಂದರ್ಭದಲ್ಲಿ ನಡೆದಿರುವ ಕೋಮುಗಲಭೆ ಮತ್ತು ಘಟನೆಯ ನಂತರ ಗೃಹ ಸಚಿವರ ಬೇಜವಾಬ್ದಾರಿ ಮತ್ತು ನಿರ್ಲಕ್ಷ್ಯದ ಹೇಳಿಕೆಗಳನ್ನು ಗಮನಿಸಿ ಮಾತನಾಡಿದ್ದಾರೆ. ರಾಜ್ಯದಲ್ಲಿರುವುದು ಮೂಲಭೂತವಾದಿಗಳಿಗೆ ಬೆಂಬಲ ಕೊಡುವ ತಾಲಿಬಾನ್ ಸರ್ಕಾರ ಎಂಬುದು ಮತ್ತೊಮ್ಮೆ ಸಾಬೀತಾಗಿತ್ತದೆ ಎಂದು ಕಿಡಿಕಾರಿದ್ದಾರೆ.
ಹಿಂದೂಗಳನ್ನೇ ಗುರಿಯಾಗಿಸಿಕೊಂಡು, ಗಣೇಶ ವಿಸರ್ಜನೆಯ ಮೆರವಣಿಗೆಗೆ ಕಾದು, ಕಲ್ಲುಗಳ ರಾಶಿ, ಪೆಟ್ರೋಲ್ ಬಾಂಬು, ತಲ್ವಾರ್‌ಗಳನ್ನು ಸಂಗ್ರಹಿಸಿಟ್ಟುಕೊಂಡು ಸಂಪೂರ್ಣ ಪೂರ್ವನಿಯೋಜಿತವಾಗಿ ಈ ದುಷ್ಕೃತ್ಯ ನಡೆಸಲಾಗಿದೆ. ಸ್ಪಷ್ಟವಾಗಿ ಕಾಣುತ್ತಿದ್ದರೂ, ಇದೊಂದು ಆಕಸ್ಮಿಕ ಘಟನೆ, ಸಣ್ಣ ಘಟನೆ ಎಂದು ತಿಪ್ಪೆ ಸಾರಿಸುವಂತೆ ಮಾತನಾಡುತ್ತಿದ್ದಾರೆ. ಈ ರೀತಿ ಮಾತನಾಡಿ ಕಾಂಗ್ರೆಸ್ ಸರ್ಕಾರ, ಮುಸ್ಲಿಂ ಮತಾಂಧರನ್ನು ಓಲೈಕೆ ಮಾಡಲು, ಹಿಂದೂಗಳನ್ನು ಬಲಿಕೊಡಲೂ ಸಿದ್ಧ ಎಂದು ನಿರ್ಧಾರ ಮಾಡಿದಂತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಾಗಮಂಗಲದ ಘಟನೆಯಿಂದ ಹೀಗಾದರೆ ನಮ್ಮ ಗತಿ ಏನು ಎಂದು ಇಡೀ ಹಿಂದೂ ಸಮಾಜ ಆತಂಕಗೊಂಡಿದೆ. ರಾಜ್ಯದ ಹಿಂದೂಗಳ ಮನಸ್ಸಿನಲ್ಲಿ ಕಾಡುತ್ತಿರುವ ಈ ಪ್ರಶ್ನೆಗಳಿಗೆ ಕಾಂಗ್ರೆಸ್ ಸರ್ಕಾರ ಉತ್ತರ ಕೊಡಬೇಕು ಎಂದು ಕಿಡಿಕಾರಿದ್ದಾರೆ. ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೇ, ಸರ್ಕಾರಕ್ಕೆ ಹಲವು ಪ್ರಶ್ನೆಗಳನ್ನು ಕೇಳಿದ್ದಾರೆ.