ವಿಧಾನಸಭೆಯ ಕಟ್ಟಡದಲ್ಲಿ ವಾಸ್ತು ದೋಷವಿದೆ :ಪ್ರತಾಪ್ ಸಿಂಹ Pratap simha saaksha tv
ಮೈಸೂರು : ವಿಧಾನಸಭೆಯ ಕಟ್ಟಡದಲ್ಲಿ ವಾಸ್ತು ದೋಷವಿದೆ. ಸಿಎಂ ಬಿಟ್ಟು ಉಳಿದ 223 ಜನರಿಗೂ ಮುಖ್ಯಮಂತ್ರಿ ಆಗಬೇಕು ಎಂಬ ಆಸೆ ಇರುತ್ತದೆ ಎಂದು ಸಂಸದ ಪ್ರತಾಪ್ ಸಿಂಹ ವಾದಿಸಿದ್ದಾರೆ.
ಸಿಎಂ ಬದಲಾವಣೆ ಬಗ್ಗೆ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರತಾಪ್ ಸಿಂಹ, ವಿಧಾನಸಭೆಯ ಕಟ್ಟಡದಲ್ಲಿ ವಾಸ್ತು ದೋಷವಿದೆ. ಸಿಎಂ ಬಿಟ್ಟು ಉಳಿದ 223 ಜನರಿಗೂ ಸಿಎಂ ಆಗಬೇಕೆಂಬ ಆಸೆ ಇರುತ್ತದೆ. ಇದೇ ಕಾರಣಕ್ಕೆ ಇಂತಹ ಮಾತುಗಳು ಕೇಳಿ ಬರುತ್ತವೆ ಎಂದರು.
ಮಂಡಿ ನೋವು ಅಂತಾ ಸಿಎಂ ಬದಲಾಯಿಸಲು ಸಾಧ್ಯವಿಲ್ಲ. ಮಂಡಿ ನೋವಿಗೆ ಚಿಕಿತ್ಸೆ ಕೊಡಿಸುತ್ತೇವೆ, ಸಿಎಂ ಬದಲಾಯಿಸುವುದಿಲ್ಲ. ವಾಜಪೇಯಿ ಅವರಿಗೆ ಎರಡು ಮಂಡಿ ನೋವಿತ್ತು. ಪ್ರಧಾನಿಯನ್ನೇ ಬದಲಾಯಿಸದ ನಾವು ಸಿಎಂ ಬದಲಾಯಿಸುತ್ತೇವಾ.? ಇದೆಲ್ಲಾ ಕೇವಲ ಊಹಾಪೋಹ ಅಷ್ಟೇ ಎಂದು ಸ್ಪಷ್ಟಪಡಿಸಿದರು.
ಇದೇ ವೇಳೆ ರಂಗಾಯಣ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ವಜಾ ಒತ್ತಾಯ ವಿಚಾರವಾಗಿ ಮಾತನಾಡಿದ ಅವರು, ರಂಗಾಯಣದಲ್ಲಿ ಬಹು ಕಾಲದಿಂದಲೂ ಎಡಚರ ಹಾವಳಿ ಆಗಿತ್ತು. ಇದು ಎಡಪಂಥೀಯರ ಸ್ವತ್ತು ಅನ್ನುವ ರೀತಿಯ ಆಗಿತ್ತು. ಮಾರ್ಕ್ಸ್ ವಾದ, ಟೆರಿಸ್ಟ್ ಮನಸ್ಥಿತಿಯನ್ನು ಬಿಡಿ. ಈ ರೀತಿಯ ಅಪಪ್ರಚಾರ ಮಾಡಬೇಡಿ. ನಿಮಗೆ ಅವಕಾಶ ಸಿಕ್ಕುತ್ತಿಲ್ಲ ಅಂದರೆ ಅವಕಾಶ ಕೊಡಿಸುತ್ತೇವೆ. ರಂಗಾಯಣದಲ್ಲಿ ಎಡಪಂಥ ಬಲಫಂಥ ಮಧ್ಯಪಂಥ ಎಲ್ಲದಕ್ಕೂ ಅವಕಾಶ ಸಿಗಬೇಕು ಎಂದು ಹೇಳಿದರು.
ಇನ್ನು ರಂಗಾಯಣದ ನಿರ್ದೇಶಕರ ವಿರುದ್ಧ ಪ್ರತಿಭಟನೆಗೆ ಕಾಂಗ್ರೆಸ್ ನಾಯಕರ ಬೆಂಬಲ ವಿಚಾರವಾಗಿ ಮಾತನಾಡಿ, ಟೆರರಿಸ್ಟ್ ಗಳಿಗೆ ಬೆಂಬಲ ಕೊಟ್ಟವರು ಇವರಿಗೆ ಕೊಡದೆ ಇರುತ್ತಾರಾ.? ಎಲ್ಲಾ ದೇಶ ವಿರೋಧಿ ಚಟುವಟಿಕೆ ಹಿಂದೆ ಕಾಂಗ್ರೆಸ್ ಇರುತ್ತದೆ. ಅಡ್ಡಂಡ ಕಾರ್ಯಪ್ಪ ಬಂದ ಮೇಲೆ ರಂಗಾಯಣ ಕ್ರಿಯಾ ಶೀಲವಾಗಿದೆ ಎಂದು ಕಿಡಿಕಾರಿದರು.









