ADVERTISEMENT
Thursday, October 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಪ್ರಧಾನಿ ನರೇಂದ್ರ ಮೋದಿಯವರಿಗಿಂತ ದೊಡ್ಡ ಅಹಿಂದ ನಾಯಕರಿಲ್ಲ : ಡಾ.ಕೆ.ಸುಧಾಕರ್

Mahesh M Dhandu by Mahesh M Dhandu
November 18, 2021
in Newsbeat, Politics, ರಾಜಕೀಯ
Minister Dr. K. Sudhakar Distribution of compensation to the victims after the survey saaksha tv

Minister Dr. K. Sudhakar Distribution of compensation to the victims after the survey saaksha tv

Share on FacebookShare on TwitterShare on WhatsappShare on Telegram

ಪ್ರಧಾನಿ ನರೇಂದ್ರ ಮೋದಿಯವರಿಗಿಂತ ದೊಡ್ಡ ಅಹಿಂದ ನಾಯಕರಿಲ್ಲ : ಡಾ.ಕೆ.ಸುಧಾಕರ್

ದಾವಣಗೆರೆ : ಪ್ರಧಾನಿ ನರೇಂದ್ರ ಮೋದಿಯವರಿಗಿಂತ ದೊಡ್ಡ ಅಹಿಂದ ನಾಯಕರು ಇಡೀ ದೇಶದಲ್ಲೇ ಇಲ್ಲ ಎಂಬುದನ್ನು ಕಾಂಗ್ರೆಸ್ ನಾಯಕರು ಮೊದಲು ಅರಿಯಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.

Related posts

ಕಾಂಗ್ರೆಸ್ ಅಧ್ಯಕ್ಷ ಬಿ ಕೆ ಹರಿಪ್ರಸಾದ್ ಅವರ ಮಾತಿಗೆ ಕವಡೆಕಾಸಿನ ಕಿಮ್ಮತ್ತಿಲ್ಲ: ವೋಟ್ ಬ್ಯಾಂಕ್ ಗಾಗಿ ದೇಶದ್ರೋಹಿಗಳಿಗೆ ಕಾಂಗ್ರೆಸ್ ರಕ್ಷಣೆ ಎಂದು ಛಲವಾದಿ ಆಕ್ರೋಶ

ಕಾಂಗ್ರೆಸ್ ಅಧ್ಯಕ್ಷ ಬಿ ಕೆ ಹರಿಪ್ರಸಾದ್ ಅವರ ಮಾತಿಗೆ ಕವಡೆಕಾಸಿನ ಕಿಮ್ಮತ್ತಿಲ್ಲ: ವೋಟ್ ಬ್ಯಾಂಕ್ ಗಾಗಿ ದೇಶದ್ರೋಹಿಗಳಿಗೆ ಕಾಂಗ್ರೆಸ್ ರಕ್ಷಣೆ ಎಂದು ಛಲವಾದಿ ಆಕ್ರೋಶ

September 30, 2026
ಜನರ ಕೈಗೆ ಸಿಗದ ಶಾಸಕ ನಮಗೆ ಬೇಡ: ಪ್ರದೀಪ್ ಈಶ್ವರ್ ವಿರುದ್ಧ ಸಿಡಿದೆದ್ದ ಕಾರ್ಯಕರ್ತರು, 2028 ಕ್ಕೆ ಟಿಕೆಟ್ ಕಟ್ ಮಾಡಲು ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ್ ಅವರಿಗೆ ಕಾಂಗ್ರೆಸ್ ಮುಖಂಡರ ಪಟ್ಟು

ಜನರ ಕೈಗೆ ಸಿಗದ ಶಾಸಕ ನಮಗೆ ಬೇಡ: ಪ್ರದೀಪ್ ಈಶ್ವರ್ ವಿರುದ್ಧ ಸಿಡಿದೆದ್ದ ಕಾರ್ಯಕರ್ತರು, 2028 ಕ್ಕೆ ಟಿಕೆಟ್ ಕಟ್ ಮಾಡಲು ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ್ ಅವರಿಗೆ ಕಾಂಗ್ರೆಸ್ ಮುಖಂಡರ ಪಟ್ಟು

September 30, 2026

ಬಿಜೆಪಿ-ಕರ್ನಾಟಕ ವತಿಯಿಂದ ದಾವಣಗೆರೆಯಲ್ಲಿ ನಡೆದ ಜನಸ್ವರಾಜ್ ಯಾತ್ರೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ವಿರೋಧ ಪಕ್ಷದ ಇಬ್ಬರು ನಾಯಕರು, ದಲಿತರು ಹಾಗೂ ಅಲ್ಪಸಂಖ್ಯಾತರು ಸೇರಿದರೆ ಬಿಜೆಪಿಯನ್ನು ಸೋಲಿಸಬಹುದು ಎಂದು ಹೇಳಿದ್ದಾರೆ.

ದೇಶ ವಿಭಜನೆ ಮಾಡಲು ಜಾತಿ ವಿಷಬೀಜ ಬಿತ್ತುವುದು, ಧರ್ಮಗಳ ನಡುವೆ ವಿವಾದ ತರುವುದು ಕಾಂಗ್ರೆಸ್ ಪಕ್ಷದ ಪ್ರತೀತಿ.

ಕೆಲ ನಾಯಕರು ಅಹಿಂದ ಎಂದು ಹೇಳಿಕೊಳ್ಳುತ್ತಿದ್ದಾರೆ. ಇದು, ಸಂವಿಧಾನ ಹಾಗೂ ಪ್ರಜಾಪ್ರಭುತ್ವದ ಮೂಲ ಆಶಯಗಳಿಗೆ ಚ್ಯುತಿ ತರುವ ಆಲೋಚನೆಯಾಗಿದೆ.

ಪ್ರಧಾನಿ ನರೇಂದ್ರ ಮೋದಿಯವರಿಗಿಂತ ದೊಡ್ಡ ಅಹಿಂದ ನಾಯಕ ಇಡೀ ದೇಶದಲ್ಲೇ ಇಲ್ಲ ಎಂಬುದನ್ನು ಅಹಿಂದ ಎಂದು ಹೇಳುವ ರಾಜ್ಯದ ನಾಯಕರು ತಿಳಿದುಕೊಳ್ಳಬೇಕು ಎಂದರು.

ಪ್ರಧಾನಿ ನರೇಂದ್ರ ಮೋದಿಯವರು 20 ವರ್ಷಕ್ಕೂ ಅಧಿಕ ಕಾಲ ಆಡಳಿತ ನಡೆಸಿದ್ದಾರೆ.

ಆದರೂ ಅವರು ಜಾತೀಯತೆಯನ್ನು ಮಾಡಲಿಲ್ಲ.

ಸಬ್ ಕಾ ವಿಶ್ವಾಸ್ ಎಂದು ಎಲ್ಲರ ವಿಶ್ವಾಸ ಗಳಿಸಿದರು. ಆದರೆ ಇಲ್ಲಿ ಕಾಂಗ್ರೆಸ್ ನವರು ಹಿಂದುಳಿದವರು, ದಲಿತರು, ವೀರಶೈವ ಲಿಂಗಾಯತರನ್ನು ಒಡೆಯುತ್ತಿದ್ದಾರೆ ಎಂದರು.

Narendra Modi saaksha tv

ಬಿಜೆಪಿ ಸರ್ಕಾರ ಇಡೀ ದೇಶದಲ್ಲಿ ಅತಿ ಹೆಚ್ಚು ಜನರಿಗೆ ಲಸಿಕೆ ನೀಡಿದೆ.

ಹಿಂದಿನ ಸಿಎಂ ಬಿ.ಎಸ್.ಯಡಿಯೂರಪ್ಪ ಕೋವಿಡ್ ಸಮಯದಲ್ಲಿ ಜನರ ಆರೋಗ್ಯಕ್ಕೆ ಸ್ಪಂದಿಸುವ ಕೆಲಸ ಮಾಡಿದ್ದಾರೆ.

ಈಗಿನ ಸಿಎಂ ಬಸವರಾಜ ಬೊಮ್ಮಾಯಿ ‘ಕಾಮನ್ ಮ್ಯಾನ್’ ಆಗಿ ಆಡಳಿತ ನಡೆಸುತ್ತಿದ್ದಾರೆ.

ಬಾಯಿಮಾತಿನಲ್ಲಿ ರೈತರ ಬಗ್ಗೆ ಮಾತನಾಡುವವರು ಅವರೆಲ್ಲ ಜೀತದಾಳಾಗಿ ಇರಲಿ ಎಂದು ಬಯಸುತ್ತಾರೆ.

ಅಲ್ಪಸಂಖ್ಯಾತರ ಬಗ್ಗೆ ಮಾತನಾಡುವವರು ಅವರ ಉದ್ಧಾರಕ್ಕಾಗಿ ಏನೂ ಮಾಡಿಲ್ಲ. ಆದರೆ ಪ್ರಧಾನಿಗಳು ಮುದ್ರಾ ಯೋಜನೆ ತಂದು ಹಿಂದುಳಿದವರು ಹಾಗೂ ಅಲ್ಪಸಂಖ್ಯಾತರಿಗೆ ನೆರವಾಗಿದ್ದಾರೆ ಎಂದರು.

ಗ್ರಾಮ ಪಂಚಾಯಿತಿಗಳಲ್ಲಿ ಚುನಾಯಿತರಾಗುವುದು ಬಹಳ ಕಷ್ಟ. ಜನರಿಗೆ ಹೇಗೆ ಸ್ಪಂದಿಸುತ್ತಾರೆ, ಹೇಗೆ ಕೆಲಸ ಮಾಡುತ್ತಾರೆ ಎಂಬುದನ್ನು ಗ್ರಾಮದ ಮತದಾರರು ನೋಡುತ್ತಾರೆ.

ಈ ಸವಾಲು ಎದುರಿಸಿದ ಆಯ್ಕೆಯಾದ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳು ವಿಧಾನಪರಿಷತ್ ಸದಸ್ಯರನ್ನು ಆಯ್ಕೆ ಮಾಡುವ ಚುನಾವಣೆ ಈಗ ನಡೆಯುತ್ತಿದೆ.

ವಿಧಾನಸಭೆಯಲ್ಲಿ ಬಿಜೆಪಿಗೆ ಬಹುಮತ ಇದೆ. ಯಾವುದೇ ಕಾಯ್ದೆಯ ತಿದ್ದುಪಡಿ, ರಚನೆ ಆಗಬೇಕೆಂದರೆ ಎರಡೂ ಮನೆಗಳಲ್ಲಿ ಬೆಂಬಲ ಪಡೆಯಬೇಕು.

ಬಿಜೆಪಿ ವಿಧಾನಪರಿಷತ್ ನಲ್ಲಿ ಹೆಚ್ಚಿನ ಸಂಖ್ಯೆ ಪಡೆಯಲು ಅವಕಾಶ ಒದಗಿಬಂದಿದೆ. ಗ್ರಾಮ ಪಂಚಾಯಿತಿಗಳ ಪ್ರತಿನಿಧಿಗಳು ವಿಧಾನಪರಿಷತ್ ಗೆ ಉತ್ತಮರನ್ನು ಆಯ್ಕೆ ಮಾಡಬೇಕು.

ಆಮಿಷದ ಮತಾಂತರ ತಡೆಯಲು ಕಾಯ್ದೆ ತರಬೇಕಿದೆ. ಇಂತಹ ಕಾನೂನು ತರಲು ಮೇಲ್ಪನೆಯಲ್ಲಿ ಹೆಚ್ಚಿನ ಬಲ ಬೇಕಿದೆ ಎಂದರು.

ವಿಧಾನಪರಿಷತ್ ಚುನಾವಣೆ ಸ್ವಾಭಿಮಾನದ ಪ್ರಶ್ನೆಯಾಗಿದೆ. ಗ್ರಾಮ ಪಂಚಾಯಿತಿ ಸದಸ್ಯರು ಕೂಡ ಸ್ವಾಭಿಮಾನದಿಂದ ಗೆದ್ದಿರುತ್ತಾರೆ.

ಯಾವುದೇ ಆಸೆ, ಆಮಿಷಕ್ಕೆ ಬಲಿಯಾಗದೆ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಬೇಕು. ಇದರಿಂದ ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಕೈ ಬಲಪಡಿಸಿದಂತಾಗುತ್ತದೆ ಎಂದರು.

Tags: #Saaksha TVCongressdavanagereDr K Sudakar
ShareTweetSendShare
Join us on:

Related Posts

ಕಾಂಗ್ರೆಸ್ ಅಧ್ಯಕ್ಷ ಬಿ ಕೆ ಹರಿಪ್ರಸಾದ್ ಅವರ ಮಾತಿಗೆ ಕವಡೆಕಾಸಿನ ಕಿಮ್ಮತ್ತಿಲ್ಲ: ವೋಟ್ ಬ್ಯಾಂಕ್ ಗಾಗಿ ದೇಶದ್ರೋಹಿಗಳಿಗೆ ಕಾಂಗ್ರೆಸ್ ರಕ್ಷಣೆ ಎಂದು ಛಲವಾದಿ ಆಕ್ರೋಶ

ಕಾಂಗ್ರೆಸ್ ಅಧ್ಯಕ್ಷ ಬಿ ಕೆ ಹರಿಪ್ರಸಾದ್ ಅವರ ಮಾತಿಗೆ ಕವಡೆಕಾಸಿನ ಕಿಮ್ಮತ್ತಿಲ್ಲ: ವೋಟ್ ಬ್ಯಾಂಕ್ ಗಾಗಿ ದೇಶದ್ರೋಹಿಗಳಿಗೆ ಕಾಂಗ್ರೆಸ್ ರಕ್ಷಣೆ ಎಂದು ಛಲವಾದಿ ಆಕ್ರೋಶ

by Shwetha
September 30, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರ ನಡುವಿನ ವಾಗ್ಯುದ್ಧ ಈಗ ತಾರಕಕ್ಕೇರಿದ್ದು, ಪರಸ್ಪರ ವೈಯಕ್ತಿಕ ನಿಂದನೆ ಮತ್ತು ಗಂಭೀರ ಆರೋಪಗಳ ಸುರಿಮಳೆಯೇ ನಡೆಯುತ್ತಿದೆ. ಕೆಪಿಸಿಸಿ...

ಜನರ ಕೈಗೆ ಸಿಗದ ಶಾಸಕ ನಮಗೆ ಬೇಡ: ಪ್ರದೀಪ್ ಈಶ್ವರ್ ವಿರುದ್ಧ ಸಿಡಿದೆದ್ದ ಕಾರ್ಯಕರ್ತರು, 2028 ಕ್ಕೆ ಟಿಕೆಟ್ ಕಟ್ ಮಾಡಲು ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ್ ಅವರಿಗೆ ಕಾಂಗ್ರೆಸ್ ಮುಖಂಡರ ಪಟ್ಟು

ಜನರ ಕೈಗೆ ಸಿಗದ ಶಾಸಕ ನಮಗೆ ಬೇಡ: ಪ್ರದೀಪ್ ಈಶ್ವರ್ ವಿರುದ್ಧ ಸಿಡಿದೆದ್ದ ಕಾರ್ಯಕರ್ತರು, 2028 ಕ್ಕೆ ಟಿಕೆಟ್ ಕಟ್ ಮಾಡಲು ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ್ ಅವರಿಗೆ ಕಾಂಗ್ರೆಸ್ ಮುಖಂಡರ ಪಟ್ಟು

by Shwetha
September 30, 2026
0

ಬೆಂಗಳೂರು: ರಾಜಕೀಯ ಅಖಾಡದಲ್ಲಿ ಯಾವಾಗಲೂ ಸುದ್ದಿಯಲ್ಲಿರುವ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರಿಗೆ ಈಗ ಸ್ವಪಕ್ಷೀಯರಿಂದಲೇ ಭಾರಿ ವಿರೋಧ ವ್ಯಕ್ತವಾಗಿದೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಪ್ರದೀಪ್ ಈಶ್ವರ್...

ಪ್ರಿಯಾಂಕ್ ಖರ್ಗೆ ಮೋಸ್ಟ್ ಕರಪ್ಟ್ ಪರ್ಸನ್ :: ಗೃಹ ಸಚಿವರ ರಾಜೀನಾಮೆಗೆ ಆಗ್ರಹಿಸಿ ಭ್ರಷ್ಟಾಚಾರದ ಬಾಂಬ್ ಸಿಡಿಸಿದ ಛಲವಾದಿ ನಾರಾಯಣಸ್ವಾಮಿ

ಪ್ರಿಯಾಂಕ್ ಖರ್ಗೆ ಮೋಸ್ಟ್ ಕರಪ್ಟ್ ಪರ್ಸನ್ :: ಗೃಹ ಸಚಿವರ ರಾಜೀನಾಮೆಗೆ ಆಗ್ರಹಿಸಿ ಭ್ರಷ್ಟಾಚಾರದ ಬಾಂಬ್ ಸಿಡಿಸಿದ ಛಲವಾದಿ ನಾರಾಯಣಸ್ವಾಮಿ

by Shwetha
September 30, 2026
0

ಮೈಸೂರು: ರಾಜ್ಯದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಮೈಸೂರಿನಲ್ಲಿ ಭಾರಿ ವಾಗ್ದಾಳಿ ನಡೆಸಿದ್ದಾರೆ. ಪ್ರಿಯಾಂಕ್ ಖರ್ಗೆ...

ಹೀರೋ ಆಗದಿದ್ರೆ ರಾಪಿಡೋ ಡ್ರೈವರ್ ಆಗ್ತಿದ್ದೆ ಎಂದ ನಾನಿ: ನಾನಿ ಅಣ್ಣಾ ಹೇಳೋದಕ್ಕೂ ಒಂದು ಲಾಜಿಕ್ ಇರಲಿ- ರಾಪಿಡೋ ಡ್ರೈವರ್ ಆಗ್ತಿದ್ದೆ ಎಂದ ಹೀರೋಗೆ ನೆಟ್ಟಿಗರ ವ್ಯಂಗ್ಯದ ಗುದ್ದು

ಸಿಎಂ ಡಿಕೆಶಿ ಆಸ್ತಿ ವಿವರ ಬಿಡುಗಡೆ ಮಾಡಿದ ಎಚ್.ಡಿ. ಕುಮಾರಸ್ವಾಮಿ

by Shwetha
September 30, 2026
0

ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಆಸ್ತಿ ವಿವರಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಬಿಡುಗಡೆ ಮಾಡಿ, ನೈಸ್‌ (NICE)...

ಆರ್ ಎಸ್ ಎಸ್ ಮುಗಿಸಲು ನಿಮ್ಮ ಅಪ್ಪನಿಂದಲೂ ಆಗಿಲ್ಲ ಇನ್ನು ನಿನ್ನಿಂದ ಸಾಧ್ಯವೇ? ದಲಿತರ ಹೆಸರಲ್ಲಿ ಬರೀ ಆಸ್ತಿ ಮಾಡಿದ್ದೇ ಖರ್ಗೆ ಸಾಧನೆ: ಗೃಹ ಸಚಿವರ ವಿರುದ್ಧ ಛಲವಾದಿ ನಾರಾಯಣಸ್ವಾಮಿ ಕೆಂಡಾಮಂಡಲ

ಆರ್ ಎಸ್ ಎಸ್ ಮುಗಿಸಲು ನಿಮ್ಮ ಅಪ್ಪನಿಂದಲೂ ಆಗಿಲ್ಲ ಇನ್ನು ನಿನ್ನಿಂದ ಸಾಧ್ಯವೇ? ದಲಿತರ ಹೆಸರಲ್ಲಿ ಬರೀ ಆಸ್ತಿ ಮಾಡಿದ್ದೇ ಖರ್ಗೆ ಸಾಧನೆ: ಗೃಹ ಸಚಿವರ ವಿರುದ್ಧ ಛಲವಾದಿ ನಾರಾಯಣಸ್ವಾಮಿ ಕೆಂಡಾಮಂಡಲ

by Shwetha
September 30, 2026
0

ಬೆಂಗಳೂರು: ರಾಜ್ಯದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ನಡುವಿನ ವಾಕ್ಸಮರ ಈಗ ತಾರಕಕ್ಕೇರಿದೆ. ಪ್ರಿಯಾಂಕ್ ಖರ್ಗೆ ಅವರ ಕಾರ್ಯವೈಖರಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram