ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆ ಇಲ್ಲ : ಶಿವರಾಂ ಹೆಬ್ಬಾರ್
ಉತ್ತರಕನ್ನಡ : ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆ ಇಲ್ಲ ಎಂದು ಸಚಿವ ಶಿವರಾಂ ಹೆಬ್ಬಾರ್ ಸ್ಪಷ್ಟನೆ ನೀಡಿದ್ದಾರೆ.
ರಾಜ್ಯದಲ್ಲಿ ಸಿಎಂ ಬದಲಾವಣೆ ಬಗ್ಗೆ ಬಿಸಿ ಬಿಸಿ ಚರ್ಚೆ ನಡೆಯುತ್ತಿದ್ದು, ಈ ಬಗ್ಗೆ ಯಲ್ಲಾಪುರದಲ್ಲಿ ಮಾತನಾಡಿದ ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್, ಸಚಿವ ಸಿ.ಪಿ.ಯೋಗೀಶ್ವರ ಹೇಳಿಕೆಗೆ ನನ್ನ ಸಹಮತ ಇಲ್ಲ.
ಸರಕಾರದಲ್ಲಿ ಇದ್ದುಕೊಂಡು ಈ ರೀತಿಯ ಹೇಳಿಕೆ ನೀಡುವುದು ಶೋಭೆ ತರುವುದಿಲ್ಲ. ಮುಂದಿನ ಚುನಾವಣೆ ಕೂಡಾ ಯಡಿಯೂರಪ್ಪ ನೇತೃತ್ವದಲ್ಲಿ ನಡೆಯಲಿದೆ ಎಂದು ಹೇಳಿದರು.
ಇನ್ನು ಮುಖ್ಯಮಂತ್ರಿ ಬದಲಾವಣೆ ಕುರಿತು ಚರ್ಚೆ ನಡೆದಿದ್ದಾಗಿ ಸಚಿವ ಅಶೋಕ್ ಹೇಳಿದ್ದು ನಿಜ, ಆದ್ರೆ ಮುಖ್ಯಮಂತ್ರಿ ಬದಲಾವಣೆ ಮಾಡುತ್ತೇವೆ ಎಂದು ಹೇಳಿಲ್ಲ ಎಂದು ಸಚಿವ ಶಿವರಾಮ ಹೆಬ್ಬಾರ್ ಸ್ಪಷ್ಟನೆ ಕೊಟ್ಟಿದ್ದಾರೆ.