ಬೆಂಗಳೂರು: ವಿರೋಧ ಪಕ್ಷದ ನಾಯಕರಾಗಿ ಆರ್. ಅಶೋಕ್ ಆಯ್ಕೆಯಾಗುತ್ತಿದ್ದಂತೆ ಯತ್ನಾಳ್ ಹೈಕಮಾಂಡ್ ವಿರುದ್ಧ ಮುನಿಸಿಕೊಂಡಿದ್ದಾರೆ. ಸದ್ಯ ನಾನು ಪಲಾಯನ ಮಾಡುವುದಿಲ್ಲ ಎಂದು ಹೇಳಿದ್ದಾರೆ.
ಎಕ್ಸ್ ಖಾತೆಯಲ್ಲಿ ಈ ಕುರಿತು ಬರೆದುಕೊಂಡಿರುವ ಅವರು, ಯಾವುದೇ ಪರಿಸ್ಥಿತಿ ಬಂದರೂ ನಾನು ಹೆದರುವುದಿಲ್ಲ. ಎಂದಿಗೂ ನನ್ನ ಶತ್ರುಗಳಿಗೆ ತಲೆಬಾಗಲ್ಲ ಎಂದು ಸ್ಪಷ್ಟವಾಗಿ ಸಂದೇಶ ಸಾರಿದ್ದಾರೆ. ನ ದೈನಂ, ನ ಪಲಾಯನಂ. ಒಬ್ಬ ಯೋಧ ಯಾವುದನ್ನೂ ದೂರಲು ಅಥವಾ ವಿಷಾದಿಸಲು ಸಾಧ್ಯವಿಲ್ಲ. ಅವನ ಜೀವನವು ಅಂತ್ಯವಿಲ್ಲದ ಸವಾಲು ಹಾಗೂ ವಾಲುಗಳು ಬಹುಶಃ ಒಳ್ಳೆಯದು ಅಥವಾ ಕೆಟ್ಟದ್ದಾಗಿರಲು ಸಾಧ್ಯವಿಲ್ಲ. ಸವಾಲುಗಳು ಅಂದ್ರೆ ಸರಳವಾಗಿ ಸವಾಲುಗಳೇ ಎಂದು ಅವರು ಬರೆದುಕೊಂಡಿದ್ದಾರೆ.
ಹೈಕಮಾಂಡ್ ಆರ್. ಅಶೋಕ್ ಹೆಸರು ಘೋಷಿಸುತ್ತಿದ್ದಂತೆ, ಬಿಜೆಪಿ ಒಂದೇ ಕುಟುಂಬಕ್ಕೆ ಸೀಮಿತವಾಗಬಾರದು. ಬ್ಲಾಕ್‍ಮೇಲ್ ತಂತ್ರಗಳಿಗೆ ಮಣಿಯಬಾರದು. ಚೇಲಗಳ ಮಾತು ಕೇಳಿ ಕೇಂದ್ರ ನಾಯಕರು ತೀರ್ಮಾನ ಮಾಡಬಾರದು. ನಾನು ಯಾವುದೇ ಕಾರಣಕ್ಕೂ ಕಾಂಪ್ರಮೈಸ್ ಆಗಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.