ಮುಂದಿನ ದಿನಗಳಲ್ಲಿ ಜೆಡಿಎಸ್ ಗೆ ಯಾವುದೇ ಭವಿಷ್ಯವಿಲ್ಲ : ಜಮೀರ್

1 min read
eye-donate saaksha tv

ಮುಂದಿನ ದಿನಗಳಲ್ಲಿ ಜೆಡಿಎಸ್ ಗೆ ಯಾವುದೇ ಭವಿಷ್ಯವಿಲ್ಲ : ಜಮೀರ್

ಬೆಂಗಳೂರು : ಮುಂದಿನ ದಿನಗಳಲ್ಲಿ ಜೆಡಿಎಸ್ ಗೆ ಯಾವುದೇ ಭವಿಷ್ಯ ಇಲ್ಲ ಎನ್ನುವುದನ್ನು ಈ ಫಲಿತಾಂಶದ ಮೂಲಕ ಅರ್ಥ ಮಾಡಿಕೊಳ್ಳಬೇಕು ಎಂದು ಶಾಸಕ ಜಮೀರ್ ಖಾನ್ ಹೇಳಿದ್ದಾರೆ.

ಉಪಚುನಾವಣೆ ಫಲಿತಾಂಶದ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜಮೀರ್, ಜೆಡಿಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ಉಪಚುನಾವಣೆ ಫಲಿತಾಂಶ ಗಮನಿಸಿದಾಗ ಅಲ್ಪಸಂಖ್ಯಾತರು ಜೆಡಿಎಸ್ ಪಕ್ಷವನ್ನು ನಂಬುತ್ತಿಲ್ಲ ಎನ್ನುವುದು ಸಾಬೀತಾಗಿದೆ.

ಹಾನಗಲ್ ಹಾಗೂ ಸಿಂದಗಿ 2 ಕ್ಷೇತ್ರದಲ್ಲಿಯೂ ಜೆಡಿಎಸ್ ಪಕ್ಷ ಠೇವಣಿ ಕಳೆದುಕೊಂಡಿದೆ.

JDS Zamir ahmad

ವಿಪರ್ಯಾಸ ಎಂದರೆ ಹಾನಗಲ್ ನಲ್ಲಿ ಪಕ್ಷೇತರ ಅಭ್ಯರ್ಥಿಗಿಂತ ಕಡಿಮೆ ಮತ ಪಡೆದು ಜೆಡಿಎಸ್ ನಾಲ್ಕನೇ ಸ್ಥಾನಕ್ಕೆ ಕುಸಿದಿದೆ ಎಂದು ಟೀಕೆ ಮಾಡಿದರು.

ಮುಂದಿನ ದಿನಗಳಲ್ಲಿ ಜೆಡಿಎಸ್ ಗೆ ಯಾವುದೇ ಭವಿಷ್ಯ ಇಲ್ಲ ಎನ್ನುವುದನ್ನು ಈ ಫಲಿತಾಂಶದ ಮೂಲಕ ಅರ್ಥ ಮಾಡಿಕೊಳ್ಳಬೇಕು ಎಂದು ಜಮೀರ್ ಖಾನ್ ಅಭಿಪ್ರಾಯಪಟ್ಟಿದ್ದಾರೆ.

ಇದೇ ವೇಳೆ ಕಾಂಗ್ರೆಸ್ ಗೆಲುವಿನ ಬಗ್ಗೆ ಮಾತನಾಡಿದ ಅವರು, ಪಕ್ಷದ ಎಲ್ಲ ನಾಯಕರು ಒಂದಾಗಿ ಪ್ರಚಾರ ಕಾರ್ಯದಲ್ಲಿ ನಿರತರಾಗುವ ಮೂಲಕ ಒಗ್ಗಟ್ಟಿನ ಮಂತ್ರ ಜಪಿಸಿದ್ದರು. ಇದರಿಂದಲೇ ಗೆಲುವು ಸಾಧ್ಯವಾಯಿತು ಎಂದಿದ್ದಾರೆ.

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd