ವಾಲ್ಮೀಕಿ ನಿಗಮದ (Karnataka Maharshi Valmiki Scheduled Tribe Development Corporation Ltd) ಭ್ರಷ್ಟಾಚಾರ ಪ್ರಕರಣದಲ್ಲಿ ಸಚಿವ ನಾಗೇಂದ್ರ (Nagendra) ರಾಜೀನಾಮೆ (Resignation) ನೀಡುವ ಅವಶ್ಯಕತೆ ಇಲ್ಲ ಎಂದು ಸಚಿವ ಮಹದೇವಪ್ಪ (Mahadevappa) ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಂದ್ರಶೇಖರನ್ ಒಳ್ಳೆಯ ಅಧಿಕಾರಿ. ಆತ್ಮಹತ್ಯೆಯಿಂದ ತುಂಬ ದು:ಖವಾಗಿದೆ. ಡೆತ್‌ನೋಟ್‌ನಲ್ಲಿ ಕೆಲ ಆರೋಪಗಳನ್ನು ಮಾಡಿದ್ದಾರೆ. ಸರ್ಕಾರ ಕೂಡಲೇ ಈಗಾಗಲೇ ತನಿಖೆ ಆರಂಭಿಸಿದೆ. ಸದ್ಯದಲ್ಲಿಯೇ ತನಿಖೆಯ ಸತ್ಯಾಸತ್ಯತೆ ಹೊರ ಬರಲಿದೆ.
ದಲಿತರು, ದಲಿತೇತರ ಹಣ ಅಂತಲ್ಲ.ಅದು ಸರ್ಕಾರದ ಹಣ. ಅಂತೆ ಕಂತೆಗಳ ಮೇಲೆ ಮಾತನಾಡಲು ಆಗುವುದಿಲ್ಲ. ರಾಜಕೀಯಕರಣಗೊಳಿಸಿದ ತಕ್ಷಣ ಮಾತಾಡಲು ಆಗುವುದಿಲ್ಲ. ಈಶ್ವರಪ್ಪ ಪ್ರಕರಣವೇ ಬೇರೆ, ನಿಗಮದ ಹಣ ವರ್ಗಾವಣೆ ಪ್ರಕರಣವೇ ಬೇರೆ. ಅದಕ್ಕೂ ಇದಕ್ಕೂ ಹೋಲಿಕೆ ಸರಿಯಲ್ಲ ಎಂದು ಹೇಳಿದ್ದಾರೆ.