ಕೊರೊನಾ ನಾಲ್ಕನೇ ಅಲೆಗೆ ಭಯ ಪಡುವ ಅವಶ್ಯಕತೆ ಇಲ್ಲ : ಸಿಎಂ ಬೊಮ್ಮಾಯಿ
ವಿಜಯಪುರ: ಕೊರೊನಾ ನಾಲ್ಕನೇ ಅಲೆಗೆ ಜನರು ಭಯ ಪಡುವ ಅವಶ್ಯಕತೆ ಇಲ್ಲ ಎಂದು ಮುಖ್ಯಮಂತ್ರಿ ಬಸವಾರಾಜ ಬೊಮ್ಮಾಯಿ ಅಭಯ ನೀಡಿದ್ದಾರೆ.
ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕೊರೊನಾ ನಾಲ್ಕನೇ ಅಲೆಯಲ್ಲಿ ಆಸ್ಪತ್ರೆಗೆ ಸೇರುವವರ ಪ್ರಮಾಣ ಜಾಸ್ತಿಯಿರುವುದಿಲ್ಲ. ಆದರೂ ಜಾಗೃತಿ ವಹಿಸಬೇಕಿದೆ ಎಂದು ಮನವಿ ಮಾಡಿದರು.
ಇನ್ನೂ ಗಡಿಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಾಳೆ ಪ್ರಧಾನಿಯವರೊಂದಿಗೆ ಸಭೆ ಇದೆ. ಸಭೆಯ ಬಳಿಕ ಪರಿಸ್ಥಿತಿ ಅವಲೋಕಿಸಿ ನಿರ್ಣಯ ಕೈಗೊಳ್ಳಲಾಗುವುದು. ಏರ್ ಪೋರ್ಟ್, ರಾಜ್ಯದ ಗಡಿಗಳಲ್ಲಿ, ಅದರಲ್ಲೂ ಮಹಾರಾಷ್ಟ್ರ ಹಾಗೂ ಕೆರಳ ಗಡಿಯಲ್ಲಿ ಸೂಕ್ತ ಮುಂಜಾಗ್ರತೆ ವಹಿಸಲಾಗುವುದು ಎಂದರು.
ಸಂಪುಟ ವಿಸ್ತರಣೆ ಕುರಿತು: ಮತ್ತೊಮ್ಮೆ ಹೈಕಮಾಂಡ್ ಭೇಟಿಯಾಗಿ ಸಂಪುಟ ವಿಸ್ತರಣೆ ಮಾಡಲಾಗುವುದು. ವಿಜಯಪುರ ಜಿಲ್ಲೆ ಸೇರಿದಂತೆ ಹಲವು ಜಿಲ್ಲೆಗಳಿಗೆ ಸಚಿವ ಸ್ಥಾನ ಲಭಿಸಿಲ್ಲ, ಮುಂದಿನ ದಿನಗಳಲ್ಲಿ ಎಲ್ಲ ಜಿಲ್ಲೆಗೂ ಸಮಾನ ಸ್ಥಾನ ನೀಡಲಾಗುವುದು ಎಂದು ಸ್ಪಷ್ಟಪಡಿಸಿದರು.