ನವದೆಹಲಿ : ಡಿ.ಜೆ. ಹಳ್ಳಿ ಪ್ರಕರಣದಲ್ಲಿ ಯಾವ ರಾಜಕೀಯವೂ ಇಲ್ಲ. ಸರ್ಕಾರ ಜನರನ್ನು ದಾರಿ ತಪ್ಪಿಸಲು ಪ್ರಯತ್ನಿಸುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತ, ಡಿ.ಜೆ. ಹಳ್ಳಿ- ಕೆ.ಜಿ. ಹಳ್ಳಿ ಗಲಭೆ ಪ್ರಕರಣ ಸಂಬಂಧ ಮಾತನಾಡಿ, ಬಿಜೆಪಿಯವರಿಗೆ ಅಧಿಕಾರಿಗಳ ಮೇಲೆ ವಿಶ್ವಾಸವಿಲ್ಲ. ಸಿಎಂ ಯಡಿಯೂರಪ್ಪ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಪೊಲೀಸ್ ಕಮಿಷನರ್ ಮೇಲೆ ತನಿಖೆ ಮಾಡುತ್ತಿದ್ದಾರೆ. ಅರವಿಂದ ಲಿಂಬಾವಳಿ ನೇತೃತ್ವದಲ್ಲಿ ತನಿಖೆ ಮಾಡಲು ಹೊರಟಿದ್ದಾರೆ. ಇದಕ್ಕಿಂತ ಇನ್ನೊಂದು ದುರಂತ ಇನ್ನೊಂದಿಲ್ಲ. ಇದನ್ನೆಲ್ಲ ನೋಡಿದ್ರೆ ಸರ್ಕಾರದ ವೈಫಲ್ಯಕ್ಕೆ ಇದಕ್ಕಿಂತ ಉತ್ತಮ ಉದಾಹರಣೆ ಬೇಕಿಲ್ಲ ಎಂದು ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಡಿ.ಜೆ. ಹಳ್ಳಿ ಪ್ರಕರಣದಲ್ಲಿ ಯಾವ ರಾಜಕೀಯವೂ ಇಲ್ಲ. ಸರ್ಕಾರ ಜನರನ್ನು ದಾರಿ ತಪ್ಪಿಸಲು ಪ್ರಯತ್ನಿಸುತ್ತಿದೆ. ಕಾರ್ಪೊರೇಟರ್ ಗಳಿಗೂ ಗಲಭೆಗೂ ಸಂಬಂಧ ಇಲ್ಲ, ಪ್ರಸನ್ನ ಕುಮಾರ್, ಅಖಂಡ ನಡುವೆ ಕೂಡ ಏನಿಲ್ಲ ಕಥೆ ಕಟ್ಟುವ ಕೆಲಸ ಮಾಡಲಾಗುತ್ತಿದೆ ಎಂದು ಡಿ.ಕೆ.ಶಿವಕುಮಾರ್ ಆರೋಪಿಸಿದರು.








