ಮೇಕೆದಾಟು ಯೋಜನೆ ವಿಚಾರದಲ್ಲಿ ರಾಜಿ ಪ್ರಶ್ನೆಯೇ ಇಲ್ಲ : ಬೊಮ್ಮಾಯಿ
ಬೆಂಗಳೂರು : ಮೇಕೆದಾಟು ಯೋಜನೆಗೆ ತಮಿಳುನಾಡು ವಿರೋಧ ವ್ಯಕ್ತಪಡಿಸುತ್ತಿದ್ದು, ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮೇಕೆದಾಟು ಯೋಜನೆ ಅನುಷ್ಠಾನ ಮಾಡುವ ವಿಚಾರದಲ್ಲಿ ಯಾವುದೇ ಕಾರಣಕ್ಕೂ ತಮಿಳುನಾಡು ಜೊತೆ ರಾಜಿಯಾಗುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಮೇಕೆದಾಟು ಯೋಜನೆಯನ್ನು ತಮಿಳುನಾಡು ಬಿಜೆಪಿ ಘಟಕದ ಅಧ್ಯಕ್ಷ ಅಣ್ಣಾಮಲೈ ಸೇರಿದಂತೆ ಎಲ್ಲರ ರಾಜಕೀಯ ಪಕ್ಷಗಳು ವಿರೋಧಿಸುತ್ತಿವೆ.
ಈ ಬಗ್ಗೆ ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಿಗೆ ಕುಡಿಯುವ ನೀರು ಪೂರೈಕೆ ಮಾಡುವ ಮೇಕೆದಾಟು ಯೋಜನೆ ಅನುಷ್ಠಾನ ಮಾಡುವ ವಿಚಾರದಲ್ಲಿ ಯಾವುದೇ ಕಾರಣಕ್ಕೂ ತಮಿಳುನಾಡು ಜೊತೆ ರಾಜಿಯಾಗುವ ಪ್ರಶ್ನೆಯೇ ಇಲ್ಲ ಎಂದು ತಿರುಗೇಟು ನೀಡಿದರು.
ಇನ್ನು ಮೇಕೆದಾಟು ಕುಡಿಯುವ ನೀರಿನ ಯೋಜನೆಗಾಗಿ ರಾಜ್ಯ ಸರ್ಕಾರ ಈಗಾಗಲೇ ವಿಸ್ತೃತ ಯೋಜನಾ ವರದಿ ಸಿದ್ದಪಡಿಸಿದೆ.
ಕೇಂದ್ರ ಸರ್ಕಾರದಿಂದ ನಮಗೆ ಸಂಪೂರ್ಣ ಸಹಕಾರ ಸಿಗಲಿದೆ. ತಮಿಳುನಾಡಿನಲ್ಲಿ ಮೇಕೆದಾಟು ವಿಚಾರವನ್ನು ರಾಜಕಾರಣಕ್ಕೆ ಬಳಕೆ ಮಾಡುತ್ತಿದ್ದಾರೆ ಎಂದು ತಮಿಳುನಾಡು ವಿರುದ್ಧ ಕಿಡಿಕಾರಿದರು.