ರಾಮನಗರ : ಕುಮಾರಸ್ವಾಮಿ ಅವರು ರಾಮನಗರ (Ramanagara) ಜಿಲ್ಲೆ ಬಿಟ್ಟು ಹೋಗುವ ಮಾತೇ ಇಲ್ಲ. ಅವರು ರಾಮನಗರವನ್ನು ಜಿಲ್ಲಾ ಕೇಂದ್ರವನ್ನಾಗಿ ಮಾಡಿದ್ದಾರೆ. ಇಲ್ಲಿನ ಜನರ ಪ್ರೀತಿ, ವಿಶ್ವಾಸ ಅವರ ಮೇಲಿದೆ. ಹೀಗಾಗಿ ಅವರು ಈ ಕ್ಷೇತ್ರವನ್ನು ಬಿಟ್ಟು ಹೋಗುವ ಪ್ರಶ್ನೆಯೇ ಇಲ್ಲ ಎಂದು ರಾಮನಗರ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಹೇಳಿದ್ದಾರೆ.
ಮಂಡ್ಯದಲ್ಲಿ (Mandya) ಕುಮಾರಸ್ವಾಮಿ (H.D.Kumaraswamy) ಸ್ಪರ್ಧೆ ಮಾಡುವ ವಿಚಾರವಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಅವರು ಚನ್ನಪಟ್ಟಣ ಬಿಟ್ಟು ಮಂಡ್ಯದಲ್ಲಿ ಸ್ಪರ್ಧೆ ಮಾಡುವುದಿಲ್ಲ. ಅವರು ಚನ್ನಪಟ್ಟಣ ಬಿಟ್ಟು ಹೋಗುವ ಪ್ರಶ್ನೆಯೇ ಇಲ್ಲ. ಇನ್ನೊಂದು ದಿನ ಎಲ್ಲವೂ ಗೊತ್ತಾಗುತ್ತದೆ, ಕಾದು ನೋಡಿ. ಇದರ ಬಗ್ಗೆ ನಿತ್ಯ ಚರ್ಚೆ ನಡೆಯುತ್ತಿದೆ. ಇದಕ್ಕೆ ತೆರೆ ಎಳೆಯಬೇಕು ಎಂದು ಹೇಳಿದ್ದಾರೆ.
ರಾಮನಗರದಲ್ಲಿ ಉತ್ತಮ ವಾತಾವರಣವಿದೆ. 30 ವರ್ಷಗಳಿಂದ ರಾಮನಗರದಲ್ಲಿ ನಮ್ಮ ಪರ ವಾತಾವರಣವಿದೆ. ಅನೇಕ ದಿನಗಳಿಂದ ಒಡನಾಟ ಇಟ್ಟುಕೊಂಡಿದ್ದೇನೆ. ಹಳ್ಳಿ ಹಳ್ಳಿಗೂ ಎರಡು ಬಾರಿ ಓಡಾಡಿದ್ದೇನೆ. ಈಗಲೂ ಪ್ರಚಾರ ಮಾಡುತ್ತಿದ್ದೇನೆ. ಜನರ ಸೇವೆ ಮಾಡಿದ್ದೇವೆ. ಜನ ನಮ್ಮ ಕೈ ಬಿಡುವುದಿಲ್ಲ ಎಂದು ಹೇಳಿದ್ದಾರೆ.
ಕಾನೂನು ಪ್ರಕಾರ ದಾಖಲೆ ಸರಿ ಇದ್ದವರಿಗೆ ಭೂ ಗ್ಯಾರಂಟಿ – CM ಡಿ.ಕೆ. ಶಿವಕುಮಾರ್
ಕಾನೂನು ಪ್ರಕಾರ ದಾಖಲೆ ಸರಿ ಇದ್ದವರಿಗೆ ಭೂ ಗ್ಯಾರಂಟಿ - CM ಡಿ.ಕೆ. ಶಿವಕುಮಾರ್ ಸರ್ಕಾರ ಆರನೇ ಗ್ಯಾರಂಟಿಯಾಗಿ ಭೂ ಗ್ಯಾರಂಟಿ ನೀಡುತ್ತಿರುವುದರ ಬಗ್ಗೆ ಕೇಳಿದಾಗ, "ಈ...








