ಬೆಂಗಳೂರು: ನಾನು ಯಾವುದೇ ಕಾರಣಕ್ಕೂ ಬಿಜೆಪಿಗೆ ಹೋಗುವುದಿಲ್ಲ ಎಂದು ಶಾಸಕ ಲಕ್ಷ್ಮಣ್ ಸವದಿ (Laxman Savadi) ಹೇಳಿದ್ದಾರೆ.
ಇಂದು ಜಗದೀಶ್ ಶೆಟ್ಟರ್ (Jagadish Shettar) ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದಾರೆ. ಇದರ ಬೆನ್ನಲ್ಲಿಯೇ ಲಕ್ಷ್ಮಣ ಸವದಿ ಕೂಡ ಬಿಜೆಪಿ ಸೇರುತ್ತಾರೆ ಎಂಬ ಮಾತುಗಳು ಕೇಳಿ ಬಂದಿದ್ದು, ಅವರು ಸ್ಪಷ್ಟನೆ ನೀಡಿದ್ದಾರೆ. ನಾನು, ಅವರು ಒಟ್ಟಿಗೆ ನಿರ್ಧಾರ ಮಾಡಿರಲಿಲ್ಲ. ನಾನು ಮೊದಲು ಕಾಂಗ್ರೆಸ್‍ಗೆ ಬಂದೆ. ಟಿಕೆಟ್ ಸಿಗದ ಕಾರಣ ಅವರು ನಂತರ ಬಂದರು. ಮರಳಿ ಹೋಗಿದ್ದರ ಕಾರಣ ಗೊತ್ತಿಲ್ಲ. ನನ್ನನ್ನು ಬಿಜೆಪಿ ಸಂಪರ್ಕ ಮಾಡಿಲ್ಲ, ಆ ಪ್ರಶ್ನೆಯೇ ಇಲ್ಲ. ಬಿಜೆಪಿಗೆ ಲೋಕಸಭೆ ಅಗತ್ಯ, ಅನಿವಾರ್ಯ ಇದೆ. ಹೀಗಾಗಿ ಎಲ್ಲರನ್ನೂ ಸಂಪರ್ಕ ಮಾಡುತ್ತಿದ್ದಾರೆ. ನಾನು ಮರಳಿ ಹೋಗುವುದಿಲ್ಲ ಎಂದು ಹೇಳಿದ್ದಾರೆ.
ಶೆಟ್ಟರ್ ಹೋಗಿರುವುದರಿಂದಾಗಿ ದೊಡ್ಡ ಬದಲಾವಣೆಯಾಗುವುದಿಲ್ಲ. ಶೆಟ್ಟರ್ ವೈಯಕ್ತಿಕ ವಿಚಾರವಾಗಿ ನಿರ್ಧಾರ ಮಾಡಿದ್ದಾರೆ. ನನ್ನ ನಿರ್ಧಾರ ಸ್ಪಷ್ಟವಾಗಿದೆ. ನಾನು ಎಲ್ಲೂ ಹೋಗಲ್ಲ ಎಂದು ಹೇಳಿದ್ದಾರೆ.