ಅಯೋಧ್ಯೆ: ಅಯೋಧ್ಯೆಯಲ್ಲಿ ಬುಧವಾರ ನಡೆಯಲಿರುವ ರಾಮಮಂದಿರ ಶಿಲಾನ್ಯಾಸ ದಿನಾಂಕ ಮುಂದೂಡುವ ಪ್ರಶ್ನೆಯೇ ಇಲ್ಲ ಎಂದು ಸಂಘಟಕರು ಸ್ಪಷ್ಟನೆ ನೀಡಿದ್ದಾರೆ.
ಶಿಲಾನ್ಯಾಸ ಕಾರ್ಯಕ್ರಮಕ್ಕೆ 175 ಮಂದಿ ಪ್ರಮುಖರಿಗೆ ಮಾತ್ರ ಆಹ್ವಾನ ನೀಡಲಾಗಿದೆ. ಬುಧವಾರ 12.30ಕ್ಕೆ ಭೂಮಿ ಪೂಜೆ ಕಾರ್ಯ ನಡೆಯಲಿದೆ. 40 ಕೆ.ಜಿ ಬೆಳ್ಳಿಯ ಇಟ್ಟಿಗೆಯನ್ನು ಇಡುವ ಮೂಲಕ ಪ್ರಧಾನಿ ನರೇಂದ್ರ ಶಂಕು ಸ್ಥಾಪನೆ ನೆರವೇರಿಸಲಿದ್ದಾರೆ.
ರಾಮಮಂದಿರಕ್ಕೆ ಶಂಕುಸ್ಥಾಪನೆ ದಿನಾಂಕ ಹಾಗೂ ಮುಹೂರ್ತ ನಿಗಧಿಪಡಿಸಿರುವುದು ಪ್ರಧಾನಿ ಕಚೇರಿಯಾಗಲೀ, ಉತ್ತರ ಪ್ರದೇಶ ಮುಖ್ಯಮಂತ್ರಿಯಾಗಲಿ ಅಥವಾ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಆಗಲಿ ಅಲ್ಲ. ಅದು ಸಾಧು, ಸನ್ಯಾಸಿಗಳು ನೀಡಿದ ಮೂಹೂರ್ತ. ಹೀಗಾಗಿ ಶಂಕುಸ್ಥಾಪನೆ ಮುಹೂರ್ತ ಮುಂದೂಡುವ ಯಾವುದೇ ಪ್ರಸ್ತಾಪ ನಮ್ಮ ಮುಂದೆ ಇಲ್ಲ ಎಂದು ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಜ್ ಸ್ಪಷ್ಟನೆ ನೀಡಿದ್ದಾರೆ.
ಕಾರ್ಯಕ್ರಮದ ಪ್ರಮುಖ ವೇದಿಕೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಆರ್‍ಎಸ್‍ಎಸ್ ಮುಖ್ಯಸ್ಥ ಮೋಹನ್ ಭಾಗವತ್, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿ ಪ್ರಮುಖರು ಇರಲಿದ್ದಾರೆ. ಕೇವಲ 175 ಮಂದಿಗೆ ಮಾತ್ರ ಆಹ್ವಾನ ನೀಡಲಾಗಿದೆ. ಒತ್ತಡಕ್ಕೆ ಮಣಿದು ಈ ಸಂಖ್ಯೆಯನ್ನು ಹೆಚ್ಚಿಸುವುದಿಲ್ಲ. ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಇದಕ್ಕಿಂತ ಹೆಚ್ಚು ಜನರಿಗೆ ಶಿಲಾನ್ಯಾಸ ಕಾರ್ಯಕ್ರಮಕ್ಕೆ ಆಹ್ವಾನ ನೀಡುತ್ತಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಜೀವನದಲ್ಲಿ ಅದೆಷ್ಟೇ ದಾರಿದ್ರವಿದ್ದರೂ ಕಷ್ಟವಿದ್ರು ಈ ಶಕ್ತಿಶಾಲಿ ನರಸಿಂಹ ಸ್ವಾಮಿ ಮಂತ್ರವನ್ನು ನಿತ್ಯ 21 ಬಾರಿ ಪಠಿಸಿ ಚಮತ್ಕಾರ ನೋಡಿ
ಜೀವನದಲ್ಲಿ ಅದೆಷ್ಟೇ ದಾರಿದ್ರವಿದ್ದರೂ ಕಷ್ಟವಿದ್ರು ಈ ಶಕ್ತಿಶಾಲಿ ನರಸಿಂಹ ಸ್ವಾಮಿ ಮಂತ್ರವನ್ನು ನಿತ್ಯ 21 ಬಾರಿ ಪಠಿಸಿ ಚಮತ್ಕಾರ ನೋಡಿ ಪ್ರತಿರಾತ್ರಿ ಮಲಗುವ ಮುನ್ನ ಈ ಒಂದು...