ರಮೇಶ್ ಜಾರಕಿಹೊಳಿ ರಾಜೀನಾಮೆ ಪ್ರಶ್ನೆಯೇ ಇಲ್ಲ : ಅಶ್ವಥ್ ನಾರಾಯಣ್
1 min read
ರಮೇಶ್ ಜಾರಕಿಹೊಳಿ ರಾಜೀನಾಮೆ ಪ್ರಶ್ನೆಯೇ ಇಲ್ಲ : ಅಶ್ವಥ್ ನಾರಾಯಣ್
ಶಿವಮೊಗ್ಗ : ರಮೇಶ್ ಜಾರಕಿಹೊಳಿ ವಿರುದ್ಧ ರಾಜಕೀಯ ಷಡ್ಯಂತ್ರ ನಡೆದಿದೆ. ಹೀಗಾಗಿ ರಮೇಶ್ ಜಾರಕಿಹೊಳಿಯ ರಾಜೀನಾಮೆಯ ಪ್ರಶ್ನೆ ಉದ್ಭವಿಸಲ್ಲ ಅಂತಾ ಡಿಸಿಎಂ ಅಶ್ವಥ್ ನಾರಾಯಣ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ರಮೇಶ್ ಜಾರಕಿಹೊಳಿ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಪಕ್ಷಗಳು ರಮೇಶ್ ಜಾರಕಿಹೊಳಿ ರಾಜೀನಾಮೆಗೆ ಒತ್ತಾಯಿಸುತ್ತಿವೆ.
ಈ ಬಗ್ಗೆ ಶಿವಮೊಗ್ಗದಲ್ಲಿ ಮಾತನಾಡಿ ಡಿಸಿಎಂ ಅಶ್ವಥ್ ನಾರಾಯಣ್, ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ಹಿಂದೆ ಷಡ್ಯಂತ್ರ ಇದೆ.
ಹೀಗಾಗಿ ಪ್ರಕರಣದ ಕುರಿತು ತನಿಖೆ ನಡೆದ ನಂತರವಷ್ಟೆ ನಿಜ ಹೊರಬರಲು ಸಾಧ್ಯ. ಈ ಹಿನ್ನಲೆಯಲ್ಲಿ ರಮೇಶ್ ಜಾರಕಿಹೊಳಿ ಅವರ ರಾಜೀನಾಮೆ ಪ್ರಶ್ನೆ ಉದ್ಭವಿಸಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಸಿಡಿ ಪ್ರಕರಣದ ಮೂಲಕ ರಮೇಶ್ ಜಾರಕಿಹೊಳಿ ಅವರನ್ನ ಸಿಲುಕಿಸುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿದ ಅಶ್ವಥ್ ನಾರಾಯಣ್,
ಮೇಲ್ನೋಟಕ್ಕೆ ಇದು ಸತ್ಯಕ್ಕೆ ದೂರವಾದ ಘಟನೆ ಎಂದು ಅನಿಸುತ್ತಿದೆ. ಹೀಗಾಗಿ ಸಚಿವ ಸ್ಥಾನಕ್ಕೆ ರಮೇಶ್ ಜಾರಕಿಹೊಳಿ ರಾಜೀನಾಮೆ ಕೊಡೋ ಪ್ರಶ್ನೆ ಇಲ್ಲ ಎಂದಿದ್ದಾರೆ.
