ನವದೆಹಲಿ, ಮೇ 23 : ನಾಳೆ (ಮೇ 24) ರಂಜಾನ್ ಆಚರಣೆ ಇಲ್ಲ, ಇಂದು ಚಂದ್ರನ ದರ್ಶನವಾಗಿಲ್ಲ. ಆದುದರಿಂದ ಮೇ 25ರಂದು ರಂಜಾನ್ ಆಚರಣೆ ಮಾಡಲಾಗುತ್ತದೆ ಎಂದು ದೆಹಲಿಯ ಜಾಮಾ ಮಸೀದಿ ಶಾಹಿ ಇಮಾಮ್ ಸೈಯದ್ ಅಹ್ಮದ್ ಬುಖಾರಿ ಹೇಳಿದ್ದಾರೆ.
ದೆಹಲಿಯ ಜಾಮಾ ಮಸೀದಿಯ ಶಾಹಿ ಇಮಾಮ್ ಸೈಯದ್ ಅಹ್ಮದ್ ಬುಖಾರಿ ಅವರು ರಂಜಾನ್ ಆಚರಣೆಯ ಬಗ್ಗೆ ಹೇಳಿಕೆ ನೀಡಿದ್ದು, ಇಂದು ಚಂದ್ರ ದರ್ಶನವಾಗದ ಹಿನ್ನೆಲೆಯಲ್ಲಿ ನಾಳೆ ರಂಜಾನ್ ಆಚರಣೆ ಮಾಡುತ್ತಿಲ್ಲ. ಮೇ 25ರಂದು ರಂಜಾನ್ ಆಚರಣೆ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.
ಎಲ್ಲಾ ಮುಸ್ಲಿಂ ಬಾಂಧವರೂ ಕೊರೋನಾ ವೈರಸ್ ಸೋಂಕಿನ ಮಾರ್ಗಸೂಚಿ ಪಾಲಿಸುವಂತೆ ಮನವಿ ಮಾಡಿದ ಅವರು ಕೊರೋನಾ ವೈರಸ್ ಸೋಂಕನ್ನು ತಡೆಗಟ್ಟುವ ನಿಟ್ಟಿನಲ್ಲಿ ಎಲ್ಲರೂ ಕೇಂದ್ರ ಸರ್ಕಾರ ನೀಡಿರುವ ಮಾರ್ಗಸೂಚಿಗಳನ್ನು ಪಾಲಿಸಲೇಬೇಕಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಮುಖ್ಯವಾಗಿದೆ ಎಂದು ಹೇಳಿದ್ದಾರೆ.







