ಕಲ್ಲಿದ್ದಲು ವಿಚಾರಕ್ಕೆ ರಾಜ್ಯದಲ್ಲಿ ವಿದ್ಯುತ್ ಕೊರತೆ ಉಂಟಾಗಿಲ್ಲ
ಬಾಗಲಕೋಟೆ: ಕಲ್ಲಿದ್ದಲು ವಿಚಾರಕ್ಕೆ ರಾಜ್ಯದಲ್ಲಿ ವಿದ್ಯತ್ ಕೊರತೆ ಉಂಟಾಗಿಲ್ಲ, ಲೋಡ್ ಶೆಡ್ಡಿಂಗ್ ಕೂಡ ಅಗತ್ಯವಿಲ್ಲ ಎಂದು ಇಂಧನ ಸಚಿವ ಸುನಿಲ್ ಕುಮಾರ ಹೇಳಿದ್ದಾರೆ.
ಬಾಗಲಕೋಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕಳೆದ ಮೂರು ದಿನಗಳಿಂದ ಅಕಾಲಿಕ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ರೈತರ ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯತ್ ಬೇಡಿಕೆಯಾಗಿತ್ತು. ಹೀಗಾಗಿ ಮೂರು ಘಟಕಗಳಲ್ಲಿ ಉತ್ಪಾದನೆ ಸ್ಥಗಿತಗೊಳಿಸಲಾಗಿದೆ ಎಂದು ಹೇಳಿದರು.
ಅಲ್ಲದೇ ವಿದ್ಯುತ್ ವಿಚಾರದಲ್ಲಿ ರಾಜ್ಯದ ಜನರು ತಪ್ಪು ಅಭಿಪ್ರಾಯಕ್ಕೆ ಬರುವುದು ಬೇಡ. ಕಲ್ಲಿದ್ದಲು ಕೊರತೆ ಕಾರಣಕ್ಕೆ ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆ ಕಡಿಮೆ ಮಾಡಿಲ್ಲ. ಇನ್ನೂ ಕರ್ನಾಟಕದಲ್ಲಿ ಲೋಡ್ ಶೆಡಿಂಗ್ ನ ಅಗತ್ಯವೇ ಬೀಳುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಇನ್ನೂ ಕಮೀಷನ್ ವಿಚಾರವಾಗಿ ಸಿದ್ದರಾಮಯ್ಯ ನೀಡಿರುವ ಹೇಳಿಕೆ ಕುರಿತು ಪ್ರತಿಕ್ರಯಿಸಿ ಸಿದ್ದರಾಮಯ್ಯ ಈ ಬಗ್ಗೆ ಮಾತನಾಡುವ ಅಗತ್ಯವಿಲ್ಲ. ಕಮಿಷನ್ ರಾಜಕಾರಣದಿಂದಾಗಿಯೇ ಕಾಂಗ್ರೆಸ್ ಪಕ್ಷವು ಇಂದು ವಿಸರ್ಜನೆಯ ಹಂತಕ್ಕೆ ಹೋಗಿದೆ ಎಂದು ಹೇಳಿದರು.









