ಸಾಮಾಜಿಕ ಅಂತರವಿಲ್ಲ, ಮಾಸ್ಕ್ ಧರಿಸಿಲ್ಲ , ನಿಯಮಗಳನ್ನು ಗಾಳಿಗೆ ತೂರಿದ ರಾಜ್ಯ ಕಾಂಗ್ರೆಸ್

ಬೆಂಗಳೂರು : ರಾಜ್ಯದಲ್ಲಿ ಒಂದೆಡೆ ಕೊರೊನಾ ಸೋಂಕು ಹೆಚ್ಚಾಗುತ್ತಿದೆ. ಹಾಗಾಗಿ ಸರ್ಕಾರ ಕೊರೊನಾ ನಿಯಂತ್ರಣ ಮಾಡಲು ಹರಸಾಹಸ ಪಡುತ್ತಿದೆ. ಇನ್ನೊಂದೆಡೆ ಕೊರೊನಾ ನಿಯಂತ್ರಣದಲ್ಲಿ ಸರ್ಕಾರ ವಿಫಲವಾಗಿದೆ ಎಂದು ಆರೋಪ ಮಾಡುತ್ತಿದ್ದ ಕಾಂಗ್ರೆಸ್ ಪಕ್ಷವೇ ಇಂದು ನಿಯಮ ಉಲ್ಲಂಘನೆ ಮಾಡಿದ್ದಾರೆ.

ಕೊರೊನಾ ಸೋಂಕು ಹರಡುವಿಕೆ ತಡೆಯಲು ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು, ಮಾಸ್ಕ್ ಧರಿಸಬೇಕು, ಜೊತೆಗೆ ಸ್ಯಾನಿಟೈಜರ್ ಬಳಸಬೇಕು ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿತ್ತು. ಆದರೆ ರಾಜ್ಯ ಜವಬ್ದಾರಿ ವಿರೋಧ ಪಕ್ಷ ಇಂದು ನಿಯಮ ಉಲ್ಲಂಘನೆ ಮಾಡಿ ಪ್ರತಿಭಟನೆ ನಡೆಸಿದೆ.

ಪೆಟ್ರೋಲ್, ಡೀಸೆಲ್ ದರ ಏರಿಸುತ್ತಿರುವ ಕೇಂದ್ರ ಸರ್ಕಾರದ ನಿಲುವು ವಿರೋಧಿಸಿ ಕೆಪಿಸಿಸಿ ಸೈಕಲ್ ಚಳುವಳಿ  ಹಮ್ಮಿಕೊಂಡಿತ್ತು. ಹಾಗಾಗಿ ಕಾಂಗ್ರೆಸ್ ಹಿರಿಯ ನಾಯಕರು ಸೈಕಲ್ ಜಾಥ ನಡೆಸಿದರು. ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಿಂದ ಮೀನ್ಸ್  ಸ್ಕ್ವೆರ್ ವೃತ್ತದಲ್ಲಿರುವ ಆದಾಯ ತೆರಿಗೆ ಕಟ್ಟಡದ ಕಡೆ  ಸೈಕಲ್ ಜಾಥ ನಡೆಸಿದರು. ಈ ಸಮಯದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕಾರ್ಯಾಧ್ಯಕ್ಷರಾದ ಸಲೀಂ ಅಹಮದ್, ವಿಧಾನ ಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್, ಅನೇಕ ಶಾಸಕರು ಹಾಗೂ ಕಾರ್ಯಕರ್ತರು ಭಾಗವಹಿಸಿದರು.

ಆದರೆ ಕಾಂಗ್ರೆಸ್ ಪಕ್ಷ ನಡೆಸಿದ ಜಾಥದಲ್ಲಿ ಸಾಮಾಜಿಕ ಅಂತರ ಎಂಬ ನಿಯಮವನ್ನು ಗಾಳಿಗೆ ತೂರಿದ್ದಾರೆ. 200 ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ. ಕೆಲವರು ಮಾಸ್ಕ್ ಧರಿಸಿಲ್ಲ. ಸಾಮಾಜಿಕ ಅಂತರವಂತು  ಸಾಧ್ಯವೇ ಇಲ್ಲ ಎಂಬಂತೆ ಕಾಂಗ್ರೆಸ್ ವರ್ತಿಸುತ್ತಿದೆ.

ಇನ್ನೂ ರಾಜ್ಯದಲ್ಲಿ ಕೊರೊನಾ ನಿಯಂತ್ರಣ ಮಾಡಲು ರಾಜ್ಯ ಸರ್ಕಾರ ವಿಫಲವಾಗಿದೆ. ಬೆಂಗಳೂರಿನಲ್ಲಿ ಕೊರೊನಾ ದಿನ ದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ನಿಯಮಗಳನ್ನು ಗಾಳಿಗೆ ತೂರಿ ಕಾಂಗ್ರೆಸ್ ಪಕ್ಷ ನಡೆಸುತ್ತಿರುವ ಪ್ರತಿಭಟನೆಯನ್ನು ನಿಯಂತ್ರಣ ಮಾಡಲು ಸರ್ಕಾರ ವಿಫಲವಾಗಿದೆ.

ನಿಯಮ ಉಲ್ಲಂಘನೆ ಸಾಮಾನ್ಯ ಜನರಿಂದ ಆಗಿದ್ದರೇ ಅವರ ಮೇಲೆ ಲಾಠ ಪ್ರಹಾರ ಮಾಡಲಾಗುತ್ತಿತ್ತು. ಆದರೆ ನಿಯಮ ಉಲ್ಲಂಘನೆ ಮಾಡಿದ ಜನಪ್ರತಿನಿಧಿಗಳ ಮೇಲೆ ಯಾವುದೇ ರೀತಿಯ ಕ್ರಮವಿಲ್ಲ. ಪ್ರತಿಭಟನೆಯ ಉದ್ದೇಶ ಉತ್ತಮವಾಗಿದೆ. ಆದರೆ ನಿಯಮಗಳ ಬಗ್ಗೆ ಜವಬ್ದಾರಿ ಇರಬೇಕಿತ್ತು ಎಂಬ ಮಾತುಗಳು ಸಾರ್ವಜನಿಕ ವಲಯದಲ್ಲಿ ಕೇಳಿ ಬಂದಿದೆ.

Leave a Reply

Your email address will not be published. Required fields are marked *

Recent Posts

YOU MUST READ

Pin It on Pinterest

Share This