ಬೆಂಗಳೂರು: ಕೆಫೆ ಬಾಂಬ್ ಬ್ಲಾಸ್ಟ್ ಆರೋಪಿಯನ್ನು ಯಾವುದೇ ಕಾರಣಕ್ಕೂ ಬಿಡುವ ಮಾತೇ ಇಲ್ಲ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ.
ಸುದ್ದಿವರೊಂದಿಗೆ ಮಾತನಾಡಿದ ಅವರು, ಈ ಘಟನೆ ಕುರಿತು ಆಳವಾದ ತನಿಖೆ ನಡೆಸಲಾಗುತ್ತಿದೆ. ಈ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಳ್ಳಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕುರುಹುಗಳು ಸಿಕ್ಕಿವೆ. ಸಿಸಿಟಿವಿಯಲ್ಲಿ ಕೆಲವು ಸಾಕ್ಷ್ಯಗಳು ಸಿಕ್ಕಿವೆ. ಸುಮಾರು 28 ಬಸ್ ಗಳು ಒಡಾಡಿವೆ. ಬಸ್ ನಲ್ಲಿ ಆತ ಬರುವ ಸಾಧ್ಯತೆ ಇವೆ. ಬಸ್‌ಗಳಲ್ಲಿ ಸಿಸಿಟಿವಿ ಕ್ಯಾಮೆರಾ ಇದೆ. ಆತನನ್ನು ಯಾವ ಕಾರಣಕ್ಕೂ ಬಿಡುವುದಿಲ್ಲ ಎಂದು ಹೇಳಿದ್ದಾರೆ.
ಈ ಘಟನೆ ವೈಯಕ್ತಿಕವೋ? ಅಥವಾ ಇನ್ನಾವುದೋ ಹುನ್ನಾರ ಇದೆಯೋ? ಎಂಬ ಕುರಿತು ತನಿಖೆ ನಡೆಯುತ್ತಿದೆ. ಈ ಕುರಿತು ಎಲ್ಲ ಆಯಾಮಗಳಲ್ಲಿ ತನಿಖೆ ನಡೆಯುತ್ತಿದೆ ಎಂದು ಹೇಳಿದ್ದಾರೆ. ಬೆಂಗಳೂರು ಶುಡ್ ಬಿ ಸೇಫ್ ನಿಟ್ಟಿನಲ್ಲಿ ಅನೇಕ ಕಾರ್ಯಕ್ರಮ ಮಾಡಿದ್ದೇವೆ. ಆ ಭಾಗದಲ್ಲಿರುವ ಸಿಸಿಟಿವಿ ದೃಶ್ಯಾವಳಿ ಸಂಗ್ರಹಿಸಲಾಗಿದೆ. ನಮ್ಮಲ್ಲಿ ಸಮರ್ಥ ಪೊಲೀಸರು ಇದ್ದಾರೆ. ಎಫ್‌ಎಸ್‌ಎಲ್ ಅವರು ಎಲ್ಲರೂ ಮುಂದೆ ಇದ್ದಾರೆ. ದೊಡ್ಡ ತಂಡದಿಂದ ಸ್ಯಾಂಪಲ್ ಸಂಗ್ರಹಿಸಿದ್ದಾರೆ ಎಂದು ಹೇಳಿದ್ದಾರೆ.








