ನಳೀನ್ ಕುಮಾರ್ ಕಟೀಲ್ ವಿರುದ್ಧ ಸೋಶಿಯಲ್ ಮೀಡಿಯಾದಲ್ಲಿ ಅಸಮಧಾನ..
ಪ್ರಧಾನಿ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 2 ರಂದು ಮಂಗಳೂರಿಗೆ ಭೇಟಿ ನೀಡಲಿದ್ದಾರೆ. ಪ್ರಧಾನಿ ಸ್ವಾಗತಕ್ಕ ಬಿಜೆಪಿ ಬರದ ಸಿದ್ಧತೆ ನಡೆಸುತ್ತಿದೆ. ಇನ್ನೊಂದೆಡೆ ಸೋಶಿಯಲ್ ಮಿಡಿಯಾಗಳಲ್ಲಿ ದಕ್ಷಿಣ ಕನ್ನಡ ಸಂಸದ ನಳೀನ್ ಕುಮಾರ್ ಕಟೀಲ್ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಯತ್ತಿದೆ. ಕಟೀಲ್ ಮುಂದಿನ ಭಾರಿ ಸಂಸದರಾಗಲು ಅವಕಾಶ ಕೊಡಬಾರದು ಎಂದು ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನ ವ್ಯಕ್ತವಾಗುತ್ತಿದೆ.
ಬಿಜೆಪಿ ರಾಜ್ಯಾಧ್ಯಕ್ಷರಾಗಿ ನಳಿನ್ ಕುಮಾರ್ ಕಟೀಲ್ ಅಧಿಕಾರಾವಧಿ ಇದೇ ತಿಂಗಳಲ್ಲಿ ಕೊನೆಗೊಳ್ಳಲಿದ್ದು, ಪಕ್ಷ ಉತ್ತರಾಧಿಕಾರಿಯ ಹುಡುಕಾಟದಲ್ಲಿದೆ. ಈಗಿರುವ ಅಧ್ಯಕ್ಷರು ಪಕ್ಷದ ಕಾರ್ಯಕರ್ತರನ್ನು ಸರಿಯಾಗಿ ಭೇಟಿ ಮಾಡುತ್ತಿಲ್ಲ, ಅವರ ಅಹವಾಲು ಕೇಳುತ್ತಿಲ್ಲ ಎಂಬುದು ಕಾರ್ಯಕರ್ತರ ಆರೋಪ.
ಇತ್ತೀಚೆಗೆ ಬೆಳ್ಳಾರೆಯಲ್ಲಿ ಹತ್ಯೆಗೀಡಾದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಮನೆಗೆ ಕಟೀಲ್ ತಡವಾಗಿ ಬಂದಾಗ ಪಕ್ಷದ ಕಾರ್ಯಕರ್ತರು ಕಟೀಲ್ ಅವರ ಕಾರಿನ ಮೇಲೆ ದಾಳಿ ನಡೆಸಿದ್ದರು ಮತ್ತು ಅವರ ವಿರುದ್ಧ ಘೋಷಣೆಗಳನ್ನು ಕೂಗಿದ್ದರು.
ಬಿಜೆಪಿ ರಾಜ್ಯಾಧ್ಯಕ್ಷರ ವಿರುದ್ಧ ಸ್ವಪಕ್ಷದ ಕಾರ್ಯಕರ್ತರೇ ತಿರುಗಿಬಿದ್ದಿರುವುದು ನಳೀನ್ ಕುಮಾರ್ ಕಟೀಲ್ ಅವರ ರಾಜಕೀಯ ಹಿನ್ನಡೆಗೆ ಕಾರಣವಾಗಿದೆ.
There is widespread outrage on social media against Dakshina Kannada MP Naleen Kumar Kateel.