ADVERTISEMENT
Tuesday, February 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ರಾಜ್ಯ

ರಾಜ್ಯ ರಾಜಕೀಯದ ಬಗ್ಗೆ ನಮ್ಮ ಮನೆಯಲ್ಲೇ 2 ಗಂಟೆ ಚರ್ಚೆ ನಡೆದಿದೆ: ಪ್ರಿಯಾಂಕ್ ಖರ್ಗೆ ಸ್ಫೋಟಕ ಹೇಳಿಕೆ

There was a 2-hour discussion about state politics in our house: Priyank Kharge's explosive statement

Shwetha by Shwetha
January 21, 2026
in ರಾಜ್ಯ, Newsbeat, Politics, State, ರಾಜಕೀಯ
Share on FacebookShare on TwitterShare on WhatsappShare on Telegram

ಬೆಂಗಳೂರು: ಕರ್ನಾಟಕ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸುವಂತಹ ಹೇಳಿಕೆಯನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್ ಖರ್ಗೆ ನೀಡಿದ್ದಾರೆ. ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಮತ್ತು ದಲಿತ ಮುಖ್ಯಮಂತ್ರಿ ವಿಚಾರವಾಗಿ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ, ಖರ್ಗೆ ಅವರು ತಮ್ಮ ನಿವಾಸದಲ್ಲಿ ನಡೆದ ಮಹತ್ವದ ಸಭೆಯ ಗುಟ್ಟು ಬಿಟ್ಟುಕೊಟ್ಟಿದ್ದಾರೆ.

ನಮ್ಮ ಮನೆಯಲ್ಲೇ ರಾಜ್ಯ ರಾಜಕೀಯದ ಆಗುಹೋಗುಗಳ ಕುರಿತು ಸುಮಾರು ಎರಡು ಗಂಟೆಗಳ ಕಾಲ ಸುದೀರ್ಘ ಚರ್ಚೆ ನಡೆದಿದೆ ಎಂದು ಸಚಿವರು ತಿಳಿಸಿದ್ದು, ಈ ಮೂಲಕ ರಾಜ್ಯ ಕಾಂಗ್ರೆಸ್ ವಲಯದಲ್ಲಿ ಕುತೂಹಲ ಮೂಡಿಸಿದ್ದಾರೆ.

Related posts

Hey..Pak..! You can't win me... You know what you're doing... Stop playing the hypocritical game..!

ಹೇ..ಪಾಕ್..! ನನ್ನ ನೀನು ಗೆಲ್ಲಲಾರೆ… ತಿಳಿದು ತಿಳಿದು ಛಲವೇತಕೆ…ಕಪಟ ನಾಟಕವನ್ನು ಬಿಟ್ಟು ಬಿಡು..!

February 3, 2026
Carrying these two items while going to the temple of the ancestral deity can help us move to the next stage of progress in our lives

ಕುಲದೇವರ ದೇವಸ್ಥಾನಕ್ಕೆ ಹೋಗುವಾಗ ಈ ಎರಡು ವಸ್ತುಗಳನ್ನು ಹೊತ್ತುಕೊಂಡರೆ ನಮ್ಮ ಜೀವನದಲ್ಲಿ ಮುಂದಿನ ಪ್ರಗತಿಯ ಹಂತಕ್ಕೆ ಹೋಗಬಹುದು.

February 3, 2026

ರಾಹುಲ್ ಗಾಂಧಿ ನೇರ ಸಂಪರ್ಕ

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೈಕಮಾಂಡ್ ನಾಯಕರು ಮತ್ತು ರಾಜ್ಯ ನಾಯಕರ ನಡುವಿನ ಸಂಪರ್ಕದ ಬಗ್ಗೆ ಸ್ಪಷ್ಟನೆ ನೀಡಿದರು. ಅಗತ್ಯವಿದ್ದಾಗಲೆಲ್ಲಾ ರಾಹುಲ್ ಗಾಂಧಿ ಅವರು ನೇರವಾಗಿ ಕರೆ ಮಾಡಿ ಮಾತನಾಡುತ್ತಾರೆ. ಪಕ್ಷದ ಆಂತರಿಕ ವಿಚಾರಗಳು ಮತ್ತು ಆಡಳಿತದ ಬಗ್ಗೆ ಅವರಿಗೆ ಸಂಪೂರ್ಣ ಮಾಹಿತಿಯಿದೆ. ಹೀಗಿರುವಾಗ ಊಹಾಪೋಹಗಳಿಗೆ ಉತ್ತರಿಸುವ ಅವಶ್ಯಕತೆ ಇಲ್ಲ ಎಂದು ಪರೋಕ್ಷವಾಗಿ ಭಿನ್ನಮತೀಯರಿಗೆ ಟಾಂಗ್ ನೀಡಿದರು.

ನಾಯಕತ್ವ ಬದಲಾವಣೆಯ ಚರ್ಚೆ ಅಪ್ರಸ್ತುತ

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಆಗಲಿದೆ ಎಂಬ ಬಿಜೆಪಿಯ ಆರೋಪ ಮತ್ತು ಮಾಧ್ಯಮಗಳಲ್ಲಿನ ವರದಿಗಳನ್ನು ಪ್ರಿಯಾಂಕ್ ಖರ್ಗೆ ತಳ್ಳಿಹಾಕಿದರು. ಈ ವಿಚಾರವಾಗಿ ಈಗಾಗಲೇ ಎಐಸಿಸಿ ನಾಯಕರು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅತ್ಯಂತ ಸ್ಪಷ್ಟವಾಗಿ ಮಾತನಾಡಿದ್ದಾರೆ. ಹಿರಿಯ ನಾಯಕರೇ ಸ್ಪಷ್ಟನೆ ನೀಡಿದ ಮೇಲೆ ನಾವು ಅಥವಾ ಇನ್ಯಾರೇ ಮಾತನಾಡಿದರೂ ಅದು ಅಪ್ರಸ್ತುತವಾಗುತ್ತದೆ. ಬಿಜೆಪಿಯವರಿಗೆ ವಿರೋಧ ಪಕ್ಷವಾಗಿ ಮಾಡಲು ಕೆಲಸವಿಲ್ಲ, ಹೀಗಾಗಿ ಆರೆಸ್ಸೆಸ್‌ ನಾಯಕರ ಮುಂದೆ ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು ಇಂತಹ ಪೈಪೋಟಿ ನಡೆಸುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.

ದಲಿತ ಮುಖ್ಯಮಂತ್ರಿ ಕೂಗು ಮತ್ತು ಹೈಕಮಾಂಡ್ ನಿರ್ಧಾರ

ದಲಿತ ಮುಖ್ಯಮಂತ್ರಿ ವಿಚಾರವಾಗಿ ಕೇಳಲಾದ ಪ್ರಶ್ನೆಗೆ ಬಹಳ ಎಚ್ಚರಿಕೆಯ ಉತ್ತರ ನೀಡಿದ ಸಚಿವರು, ಪ್ರಜಾಪ್ರಭುತ್ವದಲ್ಲಿ ಎಲ್ಲ ಸಮುದಾಯದವರಿಗೂ ಅಧಿಕಾರದ ಆಸೆ ಮತ್ತು ಬೇಡಿಕೆ ಇರುವುದು ಸಹಜ. ಅದರಲ್ಲಿ ತಪ್ಪೇನಿಲ್ಲ. ಆದರೆ, ಅಂತಿಮವಾಗಿ ಮುಖ್ಯಮಂತ್ರಿ ಯಾರಾಗಬೇಕು ಎನ್ನುವುದನ್ನು ಹೈಕಮಾಂಡ್ ತೀರ್ಮಾನಿಸುತ್ತದೆ. ಪಕ್ಷದ ಶಿಸ್ತಿಗೆ ನಾವೆಲ್ಲರೂ ಬದ್ಧ ಎಂದು ಹೇಳಿದರು.

ಅಬಕಾರಿ ಇಲಾಖೆ ಭ್ರಷ್ಟಾಚಾರ: ದಾಖಲೆ ಇದ್ದರೆ ಕೊಡಿ

ಅಬಕಾರಿ ಇಲಾಖೆಯಲ್ಲಿ ಕೋಟ್ಯಂತರ ರೂಪಾಯಿ ಭ್ರಷ್ಟಾಚಾರ ನಡೆದಿದೆ ಎಂಬ ವಿಪಕ್ಷಗಳ ಆರೋಪಕ್ಕೆ ಸಚಿವರು ಸವಾಲು ಹಾಕಿದರು. ಕೇವಲ ಆರೋಪ ಮಾಡುವುದರಿಂದ ಪ್ರಯೋಜನವಿಲ್ಲ. ಬಿಜೆಪಿಯವರ ಬಳಿ ಭ್ರಷ್ಟಾಚಾರದ ಬಗ್ಗೆ ನಿಖರವಾದ ದಾಖಲೆಗಳಿದ್ದರೆ ಕೂಡಲೇ ಬಿಡುಗಡೆ ಮಾಡಲಿ ಅಥವಾ ಸದನದಲ್ಲಿ ಮಂಡಿಸಲಿ. ನಾವು ಚರ್ಚೆಗೆ ಸಿದ್ಧರಿದ್ದೇವೆ. ಲೋಕಾಯುಕ್ತ ದಾಳಿ ವೇಳೆ ತಪ್ಪು ಮಾಡಿದ ಅಧಿಕಾರಿಗಳು ಸಿಕ್ಕಿಬಿದ್ದಿದ್ದಾರೆ. ತಪ್ಪು ಮಾಡಿದವರು ಯಾರೇ ಆಗಿರಲಿ, ಉಪ್ಪು ತಿಂದವರು ನೀರು ಕುಡಿಯಲೇಬೇಕು ಎಂದು ಖಡಕ್ ಎಚ್ಚರಿಕೆ ನೀಡಿದರು.

ಬಿಜೆಪಿಗೆ ನೈತಿಕತೆ ಎಲ್ಲಿದೆ?

ಶಿಡ್ಲಘಟ್ಟ ಪೌರಾಯುಕ್ತೆಗೆ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಖರ್ಗೆ, ಈ ಘಟನೆಯನ್ನು ನಾವು ಸಮರ್ಥಿಸಿಕೊಳ್ಳುವುದಿಲ್ಲ. ಈಗಾಗಲೇ ಪಕ್ಷದಿಂದ ಅವರಿಗೆ ನೋಟಿಸ್ ನೀಡಲಾಗಿದೆ ಮತ್ತು ಪೊಲೀಸರು ಕಾನೂನು ಕ್ರಮ ಕೈಗೊಳ್ಳುತ್ತಿದ್ದಾರೆ. ಆದರೆ, ಈ ಬಗ್ಗೆ ಮಾತನಾಡಲು ಬಿಜೆಪಿಗೆ ಯಾವ ನೈತಿಕತೆ ಇದೆ? ಎಂದು ಪ್ರಶ್ನಿಸಿದರು.

ಹಿಂದೆ ಸಿ.ಟಿ. ರವಿ, ಆರ್. ಅಶೋಕ್, ಎಚ್.ಡಿ. ಕುಮಾರಸ್ವಾಮಿ ಹಾಗೂ ದೇವೇಗೌಡರು ಅಧಿಕಾರಿಗಳ ವಿರುದ್ಧ ಯಾವ ರೀತಿಯ ಪದಬಳಕೆ ಮಾಡಿದ್ದರು ಎಂಬುದು ಎಲ್ಲರಿಗೂ ಗೊತ್ತಿದೆ. ಅವೆಲ್ಲವೂ ಸಾರ್ವಜನಿಕವಾಗಿ ದಾಖಲೆಯಾಗಿವೆ. ನಮ್ಮ ಪಕ್ಷ ತಪ್ಪು ಮಾಡಿದವರನ್ನು ರಕ್ಷಿಸುವುದಿಲ್ಲ, ಕಾನೂನು ತನ್ನ ಕೆಲಸ ಮಾಡಲಿದೆ ಎಂದು ಸ್ಪಷ್ಟಪಡಿಸಿದರು.

ShareTweetSendShare
Join us on:

Related Posts

Hey..Pak..! You can't win me... You know what you're doing... Stop playing the hypocritical game..!

ಹೇ..ಪಾಕ್..! ನನ್ನ ನೀನು ಗೆಲ್ಲಲಾರೆ… ತಿಳಿದು ತಿಳಿದು ಛಲವೇತಕೆ…ಕಪಟ ನಾಟಕವನ್ನು ಬಿಟ್ಟು ಬಿಡು..!

by admin
February 3, 2026
0

ಭರತ ಖಂಡದಲ್ಲಿ ದಾಯಾದಿಗಳ ಕದನ ಇನ್ನು ನಿನ್ನೆಯದಲ್ಲ. ಮಹಾಭಾರತದ ಕುರುಕ್ಷೇತ್ರದಿಂದ ಇಂದಿನ ಗಡಿ ವಿವಾದದ ತನಕದ ಇತಿಹಾಸವನ್ನು ನೋಡಿದಾಗ ದಾಯಾದಿ ಕಲಹ ಬಿಡಿಸಲಾಗದ ಒಗ್ಗಟ್ಟಿನಂತಿದೆ. ಅದು ರಾಜ್ಯವಂಶಸ್ಥರು...

Carrying these two items while going to the temple of the ancestral deity can help us move to the next stage of progress in our lives

ಕುಲದೇವರ ದೇವಸ್ಥಾನಕ್ಕೆ ಹೋಗುವಾಗ ಈ ಎರಡು ವಸ್ತುಗಳನ್ನು ಹೊತ್ತುಕೊಂಡರೆ ನಮ್ಮ ಜೀವನದಲ್ಲಿ ಮುಂದಿನ ಪ್ರಗತಿಯ ಹಂತಕ್ಕೆ ಹೋಗಬಹುದು.

by admin
February 3, 2026
0

ಜೀವನ ಯಶಸ್ಸಿನ ಕುಲದೈವಂ ಹೂಗಳು ಈ ಜಗತ್ತಿನಲ್ಲಿ ಹುಟ್ಟಿದ ಯಾರಾದರೂ ಪ್ರತಿ ಸೆಕೆಂಡ್ ಮತ್ತು ಪ್ರತಿ ದಿನವೂ ಯಾವುದಾದರೊಂದು ರೂಪದಲ್ಲಿ ಸ್ವಲ್ಪ ಪ್ರಗತಿಯನ್ನು ಸಾಧಿಸಬೇಕು. ಸೂಕ್ತ ಪ್ರಯತ್ನಗಳು...

ನಾಯಕರ ಮುಂದೆ ಗ್ಲಾಮರಸ್ ಆಗಿ ಕಾಣಲು ಹೋಗಬೇಡಿ: ಮೋಟಮ್ಮ ಖಡಕ್ ವಾರ್ನಿಂಗ್

ನಾಯಕರ ಮುಂದೆ ಗ್ಲಾಮರಸ್ ಆಗಿ ಕಾಣಲು ಹೋಗಬೇಡಿ: ಮೋಟಮ್ಮ ಖಡಕ್ ವಾರ್ನಿಂಗ್

by Shwetha
February 3, 2026
0

ಮಂಗಳೂರು: ರಾಜಕೀಯದಲ್ಲಿ ಮಹಿಳೆಯರ ಸ್ಥಾನಮಾನ, ನಡವಳಿಕೆ ಹಾಗೂ ಪ್ರಸ್ತುತ ಸಮಾಜದಲ್ಲಿ ಹೆಣ್ಣುಮಕ್ಕಳ ಪಾಲನೆ ಕುರಿತಂತೆ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕಿ ಮೋಟಮ್ಮ ಅವರು ನೀಡಿರುವ ಹೇಳಿಕೆ ಈಗ...

ದುಡ್ಡಿದ್ದವರಿಗೆ ಮಾತ್ರ ದರ್ಶನ ಕೊಡ್ತಾರಾ ಗಿಲ್ಲಿ ನಟ ಅತಿಯಾದ ಅಭಿಮಾನವೇ ಈಗ ಸೆಲೆಬ್ರಿಟಿಗೆ ಮುಳುವಾಯ್ತಾ!

ದುಡ್ಡಿದ್ದವರಿಗೆ ಮಾತ್ರ ದರ್ಶನ ಕೊಡ್ತಾರಾ ಗಿಲ್ಲಿ ನಟ ಅತಿಯಾದ ಅಭಿಮಾನವೇ ಈಗ ಸೆಲೆಬ್ರಿಟಿಗೆ ಮುಳುವಾಯ್ತಾ!

by Shwetha
February 3, 2026
0

ಬೆಂಗಳೂರು: ಅತಿಯಾದರೆ ಅಮೃತವೂ ವಿಷ ಎನ್ನುವ ಮಾತು ಅಕ್ಷರಶಃ ಸತ್ಯ. ಅದರಲ್ಲೂ ಅಭಿಮಾನದ ವಿಷಯದಲ್ಲಿ ಇದು ನೂರಕ್ಕೆ ನೂರರಷ್ಟು ಅನ್ವಯವಾಗುತ್ತದೆ. ಅಭಿಮಾನಿಗಳನ್ನು ದೇವರು ಎನ್ನುತ್ತಾರೆ, ಆದರೆ ಅದೇ...

ಶಾಸಕರಿಗೆ ಲ್ಯಾಪ್‌ಟಾಪ್ / ಐಫೋನ್ ಆಫರ್: ಗ್ಯಾಜೆಟ್ ಬೇಕಂದ್ರೆ ಈ ಷರತ್ತು ಪಾಲಿಸಲೇಬೇಕು ಎಂದ ಸ್ಪೀಕರ್ ಯು.ಟಿ.ಖಾದರ್

ಶಾಸಕರಿಗೆ ಲ್ಯಾಪ್‌ಟಾಪ್ / ಐಫೋನ್ ಆಫರ್: ಗ್ಯಾಜೆಟ್ ಬೇಕಂದ್ರೆ ಈ ಷರತ್ತು ಪಾಲಿಸಲೇಬೇಕು ಎಂದ ಸ್ಪೀಕರ್ ಯು.ಟಿ.ಖಾದರ್

by Shwetha
February 3, 2026
0

ಬೆಂಗಳೂರು: ವಿಧಾನಸಭೆಯ ಸದಸ್ಯರಿಗೆ ಹೈಟೆಕ್ ಸ್ಪರ್ಶ ನೀಡಲು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಮುಂದಾಗಿದ್ದಾರೆ. ಶಾಸಕರಿಗೆ ಲ್ಯಾಪ್‌ಟಾಪ್ ಅಥವಾ ದುಬಾರಿ ಐಫೋನ್ ನೀಡುವ ಆಲೋಚನೆ ಇದೆ ಎಂದು ಸ್ವತಃ ಸ್ಪೀಕರ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram