ಬೆಂಗಳೂರು : ತಮಿಳುನಾಡಿನಲ್ಲಿ ಟ್ರಫ್ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು (Bengaluru Rain) ಸೇರಿದಂತೆ ರಾಜ್ಯದ ಹಲವೆಡೆ ಇನ್ನೂ ಮೂರು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ಸೇರಿದಂತೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಇಂದಿನಿಂದ ಏ. 23ರ ವರೆಗೆ ಗುಡುಗು, ಮಿಂಚಿನ ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬಿಸಿಲಿನಿಂದ ಕಂಗೆಟ್ಟಿದ್ದ ಬೆಂಗಳೂರು ನಗರಕ್ಕೆ ಇಂದು ವರುಣನ ಸಿಂಚನವಾಗಿದೆ. ರಾಜಧಾನಿಯ ಬ್ಯಾಟರಾಯನಪುರ, ಯಲಹಂಕ, ಹೆಬ್ಬಾಳ ಸುತ್ತಮುತ್ತ ಭಾರೀ ಮಳೆಯಾಗಿದೆ. ಪರಿಣಾಮವಾಗಿ ಜನಜೀವನ ಅಸ್ತವ್ಯಸ್ತವಾಗಿತ್ತು. ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನಲ್ಲಿ 3 ದಿನ ಮಾಳೆಯಾಗುವ ಸಂಭವವಿದೆ. ಕರಾವಳಿ ಜಿಲ್ಲೆಗಳಲ್ಲಿ 2 ದಿನ ಭಾರೀ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.