ರಾಜ್ಯದ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕೊಡಗು, ಹಾಸನ, ಚಿಕ್ಕಮಗಳೂರು ದಕ್ಷಿಣ ಒಳನಾಡಿನ ಹಲವು ಕಡೆ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡದಲ್ಲಿ ಕೂಡ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆ, ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.