ಬೆಂಗಳೂರು: ರಾಜ್ಯದ ಕೆಲವು ಪ್ರದೇಶಗಳಲ್ಲಿ ಮೂರ್ನಾಲ್ಕು ದಿನಗಳ ಕಾಲ ಮಳೆಯ ಆರ್ಭಟ ಇರಲಿದೆ ಎಂದು ಹವಾಮಾನ ಇಲಾಖೆಯ ಮುನ್ಸೂಚನೆ ತಿಳಿಸಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿದ ಹಿನ್ನೆಲೆಯಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಹಗುರವಾದ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಹಗುರವಾದ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ತಿಳಿಸಿದೆ. ತಮಿಳುನಾಡು ಜಿಲ್ಲೆಯಲ್ಲಿ ಈಗಾಗಲೇ ಭರ್ಜರಿ ಮಳೆಯಾಗುತ್ತಿದ್ದು, ಜನ – ಜೀವನ ಸಂಪೂರ್ಣ ಅಸ್ತವ್ಯಸ್ಥಗೊಂಡಿದೆ. ಹೀಗಾಗಿ ಹಲವು ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.