ADVERTISEMENT
Wednesday, July 22, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ಬೆಂಗಳೂರು

ಫುಟ್ ಪಾತ್ ಕದನ:ಶಿವಾಜಿನಗರದಲ್ಲಿ ಪುಂಡಾಟ ನಡೆಸಿದವರನ್ನು ಸುಮ್ಮನೆ ಬಿಡಲ್ಲ ಅಧಿಕಾರಿಗಳ ಮೇಲೆ ಹಲ್ಲೆ ಮಾಡಿದವರು ಬಡವರಲ್ಲ ಸಮಾಜಘಾತುಕರು ಶಿವಾಜಿನಗರ ಪುಂಡರ ವಿರುದ್ಧ ಸಚಿವ ಕೃಷ್ಣ ಭೈರೇಗೌಡ ಕೆಂಡ

Shwetha by Shwetha
July 22, 2026
in ಬೆಂಗಳೂರು, Newsbeat, State, ರಾಜ್ಯ
Share on FacebookShare on TwitterShare on WhatsappShare on Telegram

ಬೆಂಗಳೂರು: ರಾಜಧಾನಿಯ ಶಿವಾಜಿನಗರದಲ್ಲಿ ಫುಟ್ ಪಾತ್ ಒತ್ತುವರಿ ತೆರವುಗೊಳಿಸಲು ಹೋದ ಅಧಿಕಾರಿಗಳ ಮೇಲೆ ನಡೆದ ಹಲ್ಲೆ ಪ್ರಕರಣ ಈಗ ರಾಜಕೀಯ ಮತ್ತು ಸಾಮಾಜಿಕ ವಲಯದಲ್ಲಿ ಭಾರಿ ಕಿಚ್ಚು ಹಚ್ಚಿದೆ. ಕರ್ತವ್ಯ ನಿರತ ಅಧಿಕಾರಿಗಳ ಮೇಲೆ ನಡೆದ ದಾಳಿಯನ್ನು ಬೆಂಗಳೂರು ಉಸ್ತುವಾರಿ ಸಚಿವ ಕೃಷ್ಣ ಭೈರೇಗೌಡ ಅವರು ತೀವ್ರವಾಗಿ ಖಂಡಿಸಿದ್ದು, ತಪ್ಪು ಮಾಡಿದವರ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳುವುದಾಗಿ ಘೋಷಿಸಿದ್ದಾರೆ.

ಖಾರದ ಪುಡಿ ಎರಚಿದ ಕಿಡಿಗೇಡಿಗಳು ಬಡವರಲ್ಲ

Related posts

ಪ್ರಧಾನಿ ಮೋದಿ ನಿವಾಸದ ಎದುರು ರಸ್ತೆ ಮೇಲೆಯೇ ಕುಳಿತ ರಾಹುಲ್ ಗಾಂಧಿ: ಅಮಿತ್ ಶಾ ಮತ್ತು ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಬಿಗಿಪಟ್ಟು

ಪ್ರಧಾನಿ ಮೋದಿ ನಿವಾಸದ ಎದುರು ರಸ್ತೆ ಮೇಲೆಯೇ ಕುಳಿತ ರಾಹುಲ್ ಗಾಂಧಿ: ಅಮಿತ್ ಶಾ ಮತ್ತು ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಬಿಗಿಪಟ್ಟು

July 22, 2026
ರಾಜ್ಯದಲ್ಲಿ ಕೋವಿಡ್ ಅಪಾಯ ಇಲ್ಲ; ಎಚ್ಚರಿಕೆ ಮಾತ್ರ ಅಗತ್ಯ: ಸಚಿವ ಯು.ಟಿ. ಖಾದರ್

ರಾಜ್ಯದಲ್ಲಿ ಕೋವಿಡ್ ಅಪಾಯ ಇಲ್ಲ; ಎಚ್ಚರಿಕೆ ಮಾತ್ರ ಅಗತ್ಯ: ಸಚಿವ ಯು.ಟಿ. ಖಾದರ್

July 22, 2026

ಘಟನೆಯ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಸಚಿವರು, ಫುಟ್ ಪಾತ್ ತೆರವುಗೊಳಿಸುತ್ತಿದ್ದ ಜಿಬಿಎ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿರುವುದು ಅಕ್ಷಮ್ಯ ಅಪರಾಧ. ವಿಶೇಷವಾಗಿ ಮಹಿಳಾ ಅಧಿಕಾರಿಗಳ ಕಣ್ಣಿಗೆ ಖಾರದ ಪುಡಿ ಎರಚಿ ವಿಕೃತಿ ಮೆರೆದಿದ್ದಾರೆ. ಇಂತಹ ಕೃತ್ಯ ಎಸಗುವವರು ಬಡ ವ್ಯಾಪಾರಿಗಳಲ್ಲ, ಇವರು ಸಮಾಜಘಾತುಕ ಶಕ್ತಿಗಳು. ಸುಪ್ರೀಂ ಕೋರ್ಟ್ ಆದೇಶದಂತೆ ಫುಟ್ ಪಾತ್ ತೆರವು ಮಾಡಲಾಗುತ್ತಿದೆ. ಕಾನೂನು ಪಾಲನೆಗೆ ಹೋದ ಅಧಿಕಾರಿಗಳಿಗೆ ರಕ್ಷಣೆ ನೀಡುವುದು ಸರ್ಕಾರದ ಜವಾಬ್ದಾರಿ. ಈಗಾಗಲೇ ಕಮರ್ಷಿಯಲ್ ಸ್ಟ್ರೀಟ್ ಪೊಲೀಸರು ಏಳು ಮಂದಿಯನ್ನು ಬಂಧಿಸಿದ್ದು, ಇನ್ನುಳಿದ ಪ್ರತಿಯೊಬ್ಬರನ್ನೂ ಹೆಡೆಮುರಿ ಕಟ್ಟಲಾಗುವುದು ಎಂದು ಸಚಿವರು ಗುಡುಗಿದ್ದಾರೆ.

ಸರ್ಕಾರದ ವಿರುದ್ಧ ಆರ್ ಅಶೋಕ್ ವಾಗ್ದಾಳಿ

ಇದೇ ವಿಚಾರವಾಗಿ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ ಪ್ರತಿಪಕ್ಷ ನಾಯಕ ಆರ್ ಅಶೋಕ್, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ ಎಂದು ಆರೋಪಿಸಿದ್ದಾರೆ. ಶಿವಾಜಿನಗರದಲ್ಲಿ ಅಧಿಕಾರಿಗಳ ಮೇಲೆಯೇ ಹಲ್ಲೆಯಾಗಿದ್ದರೂ ಸಚಿವರು ಯಾಕೆ ಮೌನವಾಗಿದ್ದರು? ಇಲ್ಲಿ ನಿಮ್ಮ ವೋಟ್ ಬ್ಯಾಂಕ್ ರಾಜಕೀಯ ಕಾನೂನಿಗಿಂತ ದೊಡ್ಡದಾಗಿದೆಯೇ? ಬೆಂಗಳೂರಿನ ಇತರ ಕಡೆಗಳಲ್ಲಿ ಒತ್ತುವರಿ ತೆರವು ವೇಳೆ ಕ್ಯಾಮೆರಾ ಮುಂದೆ ರೀಲ್ಸ್ ಮಾಡುವ ಸಚಿವರು ಇಲ್ಲಿಗೆ ಯಾಕೆ ಹೋಗುತ್ತಿಲ್ಲ ಎಂದು ಪ್ರಶ್ನಿಸಿದ್ದಾರೆ.

ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ವಿರುದ್ಧ ವಾಗ್ದಾಳಿ ನಡೆಸಿದ ಅಶೋಕ್, ರಾಜ್ಯದಲ್ಲಿ ಎರಡು ರೀತಿಯ ಕಾನೂನು ಜಾರಿಯಲ್ಲಿದೆಯೇ? ಕೆಲವು ಪ್ರದೇಶಗಳಲ್ಲಿ ಒತ್ತುವರಿ ತೆರವು ಮಾಡಲು ಸರ್ಕಾರಕ್ಕೆ ಭಯವಿದೆಯೇ ಎಂದು ಪ್ರಶ್ನಿಸಿದ್ದಾರೆ. ಅಧಿಕಾರಿಗಳ ಸುರಕ್ಷತೆಯನ್ನು ಖಚಿತಪಡಿಸದಿದ್ದರೆ ಸರ್ಕಾರದ ಮೌನವೇ ದುಷ್ಕರ್ಮಿಗಳಿಗೆ ರಕ್ಷಣೆ ನೀಡಿದಂತಾಗುತ್ತದೆ. ತಕ್ಷಣವೇ ದೋಷಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಅಧಿಕಾರಿಗಳ ಸಂಘವು ಸಹ ಈ ದಾಳಿಯನ್ನು ಖಂಡಿಸಿದ್ದು, ಕೆಲಸ ಮಾಡಲು ಸೂಕ್ತ ಭದ್ರತೆ ನೀಡುವಂತೆ ಮನವಿ ಮಾಡಿದೆ. ಈ ಹಲ್ಲೆ ಪ್ರಕರಣವು ಈಗ ಕಾಂಗ್ರೆಸ್ ಮತ್ತು ಬಿಜೆಪಿ ನಡುವಿನ ನೇರ ವಾಕ್ಸಮರಕ್ಕೆ ವೇದಿಕೆಯಾಗಿದೆ.

ShareTweetSendShare
Join us on:

Related Posts

ಪ್ರಧಾನಿ ಮೋದಿ ನಿವಾಸದ ಎದುರು ರಸ್ತೆ ಮೇಲೆಯೇ ಕುಳಿತ ರಾಹುಲ್ ಗಾಂಧಿ: ಅಮಿತ್ ಶಾ ಮತ್ತು ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಬಿಗಿಪಟ್ಟು

ಪ್ರಧಾನಿ ಮೋದಿ ನಿವಾಸದ ಎದುರು ರಸ್ತೆ ಮೇಲೆಯೇ ಕುಳಿತ ರಾಹುಲ್ ಗಾಂಧಿ: ಅಮಿತ್ ಶಾ ಮತ್ತು ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಬಿಗಿಪಟ್ಟು

by Shwetha
July 22, 2026
0

ನವದೆಹಲಿ: ದೇಶದ ರಾಜಧಾನಿಯಲ್ಲಿ ನಿನ್ನೆ ರಾಜಕೀಯ ಹಂಗಾಮ ಉತ್ತುಂಗಕ್ಕೇರಿತ್ತು. ನೀಟ್ ಪರೀಕ್ಷಾ ಅಕ್ರಮ ಮತ್ತು ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲೆ ಪೊಲೀಸರು ನಡೆಸಿದ ಲಾಠಿಚಾರ್ಜ್ ಖಂಡಿಸಿ, ಲೋಕಸಭೆಯ...

ರಾಜ್ಯದಲ್ಲಿ ಕೋವಿಡ್ ಅಪಾಯ ಇಲ್ಲ; ಎಚ್ಚರಿಕೆ ಮಾತ್ರ ಅಗತ್ಯ: ಸಚಿವ ಯು.ಟಿ. ಖಾದರ್

ರಾಜ್ಯದಲ್ಲಿ ಕೋವಿಡ್ ಅಪಾಯ ಇಲ್ಲ; ಎಚ್ಚರಿಕೆ ಮಾತ್ರ ಅಗತ್ಯ: ಸಚಿವ ಯು.ಟಿ. ಖಾದರ್

by Shwetha
July 22, 2026
0

ಆಂಧ್ರ ಪ್ರದೇಶದಲ್ಲಿ ಕೋವಿಡ್-19 ಸೋಂಕಿನಿಂದ ನಾಲ್ವರು ಮೃತಪಟ್ಟಿರುವ ವರದಿಗಳ ಬೆನ್ನಲ್ಲೇ, ಕರ್ನಾಟಕದ ಜನರಿಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಮಹತ್ವದ ಸಂದೇಶ ನೀಡಿದ್ದಾರೆ. ರಾಜ್ಯದಲ್ಲಿ ಸದ್ಯ ಕೋವಿಡ್...

ಪ್ರೇಮ್ ಆರಂಭಿಸಿದ್ದ ಪ್ರಶಸ್ತಿ ಅಭಿಯಾನಕ್ಕೆ ನಾದಬ್ರಹ್ಮ ಬ್ರೇಕ್: ಇದು ಮ್ಯಾಚ್ ಆಗದ ಫ್ಲಾಪ್ ಸಾಂಗ್ ಎಂದ ಹಂಸಲೇಖ

ಪ್ರೇಮ್ ಆರಂಭಿಸಿದ್ದ ಪ್ರಶಸ್ತಿ ಅಭಿಯಾನಕ್ಕೆ ನಾದಬ್ರಹ್ಮ ಬ್ರೇಕ್: ಇದು ಮ್ಯಾಚ್ ಆಗದ ಫ್ಲಾಪ್ ಸಾಂಗ್ ಎಂದ ಹಂಸಲೇಖ

by Shwetha
July 22, 2026
0

ಕನ್ನಡ ಚಿತ್ರರಂಗದ ಖ್ಯಾತ ಸಂಗೀತ ನಿರ್ದೇಶಕ ನಾದಬ್ರಹ್ಮ ಹಂಸಲೇಖ ಅವರಿಗೆ ಪದ್ಮ ಪ್ರಶಸ್ತಿ ಅಥವಾ ಜ್ಞಾನಪೀಠ ಪ್ರಶಸ್ತಿ ನೀಡಬೇಕು ಎಂದು ನಟ ನೆನಪಿರಲಿ ಪ್ರೇಮ್ ಆರಂಭಿಸಿದ್ದ ಅಭಿಯಾನಕ್ಕೆ...

ವಿದ್ಯಾರ್ಥಿಗಳು ಲಾಠಿ ಏಟು ತಿನ್ನುವಾಗ ಹೋಟೆಲ್ ನಲ್ಲಿ ಬರ್ಗರ್ ಮೆಲ್ಲುತ್ತಿದ್ದ ವಕ್ತಾರ ಉಚ್ಚಾಟನೆ: ವಿಜೇತಾ ದಹಿಯಾ ವಿರುದ್ಧ ಕಾಕ್ರೋಚ್ ಜನತಾ ಪಾರ್ಟಿ ಗರಂ

ವಿದ್ಯಾರ್ಥಿಗಳು ಲಾಠಿ ಏಟು ತಿನ್ನುವಾಗ ಹೋಟೆಲ್ ನಲ್ಲಿ ಬರ್ಗರ್ ಮೆಲ್ಲುತ್ತಿದ್ದ ವಕ್ತಾರ ಉಚ್ಚಾಟನೆ: ವಿಜೇತಾ ದಹಿಯಾ ವಿರುದ್ಧ ಕಾಕ್ರೋಚ್ ಜನತಾ ಪಾರ್ಟಿ ಗರಂ

by Shwetha
July 22, 2026
0

ನವದೆಹಲಿ: ದೇಶಾದ್ಯಂತ ಸದ್ದು ಮಾಡುತ್ತಿರುವ ನೀಟ್ ಸೇರಿದಂತೆ ವಿವಿಧ ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಬೃಹತ್ ಪ್ರತಿಭಟನಾ ರ‍್ಯಾಲಿಯ...

ವಿದ್ಯಾರ್ಥಿಗಳ ಮೇಲೆ ಲಾಠಿ ಪ್ರಹಾರ ಏಕೆ?; ಸಂಸತ್‌ನಲ್ಲಿ ಚರ್ಚೆಗೆ ವಿರೋಧ ಪಕ್ಷ ಒತ್ತಾಯ

ವಿದ್ಯಾರ್ಥಿಗಳ ಮೇಲೆ ಲಾಠಿ ಪ್ರಹಾರ ಏಕೆ?; ಸಂಸತ್‌ನಲ್ಲಿ ಚರ್ಚೆಗೆ ವಿರೋಧ ಪಕ್ಷ ಒತ್ತಾಯ

by Shwetha
July 22, 2026
0

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸೇರಿದಂತೆ ವಿರೋಧ ಪಕ್ಷದ ನಾಯಕರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರನ್ನು ಭೇಟಿ ಮಾಡಿ, ನೀಟ್ ಪ್ರಶ್ನೆಪತ್ರಿಕೆ ಸೋರಿಕೆ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram