ಮುಂಬೈ: ಇನ್ ಸ್ಟಾ ರೀಲ್ಸ್ ನಿಂದಾಗಿ ಕಳ್ಳಿಯರು ಸಿಕ್ಕಿ ಬಿದ್ದಿರುವ ಘಟನೆ ನಡೆದಿದೆ.
55 ಲಕ್ಷ ರೂ.ಗಳ ಕಳ್ಳತನ ಮಾಡಿ ಪರಾರಿಯಾಗಿದ್ದ ಇಬ್ಬರು ಸಹೋದರಿಯರು ಇನ್ ಸ್ಟಾದಿಂದಾಗಿ ಸಿಕ್ಕಿ ಬಿದ್ದಿದ್ದಾರೆ. ಆರೋಪಿಗಳನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಸಹೋದರಿಯರು ವೃದ್ಧ ದಂಪತಿಯೊಬ್ಬರ ಮನೆಯಲ್ಲಿ ಕೆಲಸ ಮಾಡುತ್ತಿದ್ದರು. ಆಗ ವೃದ್ಧ ದಂಪತಿಯ ಮನೆಯಲ್ಲಿದ್ದ 55 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ, ಬೆಲೆಬಾಳುವ ಬಟ್ಟೆ ಹಾಗೂ ಇತರೆ ಬೆಲೆಬಾಳುವ ವಸ್ತುಗಳನ್ನು ದೋಚಿ ಪರಾರಿಯಾಗಿದ್ದರು. ಆನಂತರ ಅವುಗಳನ್ನು ಧರಿಸಿ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿದ್ದಾರೆ. ಇದರ ಸಹಾಯದಿಂದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಛಾಯಾ ವೆಟ್ಕೋಲಿ(24) ಮತ್ತು ಭಾರತಿ ವೆಟ್ಕೋಲಿ (21) ಎಂದು ಗುರುತಿಸಲಾಗಿದೆ. ಆರೋಪಿಗಳನ್ನು ಬಂಧಿಸಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.