ಶ್ರೀ ಚಳ್ಳಕೆರೆಮ್ಮ ದೇವಸ್ಥಾನದಲ್ಲಿ ಕಳ್ಳತನ : ಸಿಸಿ ಟಿವಿಯಲ್ಲಿ ದೃಶ್ಯ ಸೆರೆ

1 min read
challakeremma saaksha tv

ಶ್ರೀ ಚಳ್ಳಕೆರೆಮ್ಮ ದೇವಸ್ಥಾನದಲ್ಲಿ ಕಳ್ಳತನ : ಸಿಸಿ ಟಿವಿಯಲ್ಲಿ ದೃಶ್ಯ ಸೆರೆ

ಚಿತ್ರದುರ್ಗ: ಚಳ್ಳಕೆರೆ ಪಟ್ಟಣದ ನಗರದ ದೇವತೆ ಶ್ರೀ ಚಳ್ಳಕೆರೆಮ್ಮ ದೇವಸ್ಥಾನಕ್ಕೆ ಕಳ್ಳರು ಕನ್ನಾ ಹಾಕಿದ್ದು, ಕಳ್ಳತನದ ದೃಶ್ಯಗಳು ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಇಂದು ಬೆಳಿಗ್ಗೆ ನಾಲ್ಕು ಗಂಟೆ ಸುಮಾರಿಗೆ ಕಳ್ಳತನ ನಡೆದಿದ್ದು, ಕಳ್ಳರು ದೇವಸ್ಥಾನದ ಕಬ್ಬಿಣದ ಕಂಬಿಗಳನ್ನು ಮುರಿದು ಒಳನುಗ್ಗಿದ್ದಾರೆ.

ಬಳಿಕ ದೇವಸ್ಥಾನದ ಒಳಗಿದ್ದ ಹುಂಡಿಗಳ ಬೀಗ ಮುರಿದು ಹುಂಡಿಯಲ್ಲಿ ಇದ್ದ ಹಣವನ್ನು ದೋಚಿ ಪರಾರಿಯಾಗಿದ್ದಾರೆ.

challakeremma saaksha tv

ಬೆಳಗಿನ ಜಾವವೇ ಈ ಘಟನೆ ನಡೆದಿರೋದ ಸ್ಥಳೀಯರದಲ್ಲಿ ಆತಂಕವನ್ನು ಮೂಡಿಸಿದೆ.

ಇನ್ನು ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಚಳ್ಳಕೆರೆ ತಹಶೀಲ್ದಾರರಾದ ಎನ್.ರಘುಮೂರ್ತಿ, ಪೊಲೀಸ್ ಇನ್ಸಪೇಕ್ಟರ್ ಜೆ.ತಿಪ್ಪೇಸ್ವಾಮಿ, ಪಿಎಸ್ ಐ ಮಹೇಶ್ ಗೌಡ ಭೇಟಿ ನೀಡಿದ್ದು, ದೇವಸ್ಥಾನದ ಸುತ್ತಮುತ್ತಲಿನ ಸಿಸಿಟಿವಿಗಳಲ್ಲಿ ಪರಿಶೀಲನೆ ನಡೆಸಿದ್ದಾರೆ.

ಸಿಸಿಟಿವಿ ಪರಿಶೀಲನೆ ನಡೆಸಿದಾಗ ಕಾಣಿಕೆ ಹುಂಡಿಗೆ ಕನ್ನ ಹಾಕಿದ ದೃಶ್ಯ ಸೆರೆಯಾಗಿದೆ. ಇನ್ನು ಈ ಸಂಬಂಧ ಚಳ್ಳಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd