ಅಮೆರಿಕದಲ್ಲಿ ಭಾರತ ಮೂಲದ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆಯೊಂದು ನಡೆದಿದೆ.
ಅಲ್ಲಿಯ ಓಹಿಯೋ ರಾಜ್ಯದ ಸಿನ್ಸಿನಾಟಿಯಲ್ಲಿ ಭಾರತೀಯ ವಿದ್ಯಾರ್ಥಿ ಶವವಾಗಿ ಪತ್ತೆಯಾಗಿದ್ದಾನೆ. ಶ್ರೇಯಸ್ ರೆಡ್ಡಿ ಬೆನಿಗೇರಿ ಶವವಾಗಿ ಪತ್ತೆಯಾಗಿರುವ ವಿದ್ಯಾರ್ಥಿ ಎನ್ನಲಾಗಿದೆ. ಸದ್ಯದ ಮಾಹಿತಿಯಂತೆ ಪೊಲೀಸರು ಈ ಕುರಿತು ತನಿಖೆ ಕೈಗೊಂಡಿದ್ದಾರೆ ಎಂದು ನ್ಯೂಯಾರ್ಕ್ನಲ್ಲಿರುವ ಭಾರತದ ಕಾನ್ಸುಲೇಟ್ ಜನರಲ್ ಹೇಳಿದ್ದಾರೆ.
ರಾಯಭಾರ ಕಚೇರಿ ಕೂಡ ಕುಟುಂಬದೊಂದಿಗೆ ನಿರಂತರ ಸಂಪರ್ಕದಲ್ಲಿದೆ. ಅಲ್ಲದೇ, ಸಹಾಯ ಮಾಡುತ್ತಿದೆ. ಓಹಿಯೋದಲ್ಲಿ ಭಾರತೀಯ ಮೂಲದ ವಿದ್ಯಾರ್ಥಿ ಶ್ರೇಯಸ್ ರೆಡ್ಡಿ ಬೆನಿಗೇರಿ ಅವರ ದುರದೃಷ್ಟಕರ ನಿಧನದಿಂದ ತೀವ್ರ ದುಃಖವಾಗಿದೆ ಎಂದು ನ್ಯೂಯಾರ್ಕ್ನಲ್ಲಿರುವ ಭಾರತದ ಕಾನ್ಸುಲೇಟ್ ಜನರಲ್ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.
ವಿದ್ಯಾರ್ಥಿಯ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಒಂದು ವಾರದೊಳಗೆ ನಡೆದ ನಾಲ್ಕನೇ ಸಾವು ಇದಾಗಿದ್ದು, ಅಮೆರಿಕದಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಮತ್ತು ಅವರ ಪೋಷಕರನ್ನು ಆತಂಕಕ್ಕೆ ದೂಡಿದೆ. ಈ ವಿದ್ಯಾರ್ಥಿಯು ಪರ್ಡ್ಯೂ ವಿಶ್ವವಿದ್ಯಾನಿಲಯದಲ್ಲಿ ಕಂಪ್ಯೂಟರ್ ಸೈನ್ಸ್ ಓದುತ್ತಿದ್ದ ಮತ್ತೊಬ್ಬ ಭಾರತೀಯ ವಿದ್ಯಾರ್ಥಿ ನೀಲ್ ಆಚಾರ್ಯ ಕಾಣೆಯಾದ ಒಂದು ದಿನದ ನಂತರ ವಿಶ್ವವಿದ್ಯಾಲಯದ ಕ್ಯಾಂಪಸ್ನಲ್ಲಿ ಶವವಾಗಿ ಪತ್ತೆಯಾಗಿದ್ದ. ಜಾರ್ಜಿಯಾದ ಲಿಥೋನಿಯಾದ ಅಂಗಡಿಯೊಂದರಲ್ಲಿ ವಿವೇಕ್ ಸೈನಿ ಎಂಬ ಮತ್ತೋರ್ವ ಭಾರತೀಯ ವಿದ್ಯಾರ್ಥಿಯನ್ನು ಮಾದಕ ವ್ಯಸನಿಯೊಬ್ಬ ಸುತ್ತಿಗೆಯಿಂದ ಬರ್ಬರವಾಗಿ ಹತ್ಯೆ ಮಾಡಿದ್ದ.