ಮೂರನೇ ಟೆಸ್ಟ್ ಪಂದ್ಯ : ಟೀಂ ಇಂಡಿಯಾ 244ಕ್ಕೆ `ರನ್ ಔಟ್’
ಸಿಡ್ನಿ : ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಟೆಸ್ಟ್ ಪಂದ್ಯದಲ್ಲಿ ಟೀ ಇಂಡಿಯಾ 244ರನ್ ಗಳಿಗೆ ರನ್ ಔಟ್ ಆಗಿದೆ. ಇದರೊಂದಿಗೆ ಕಾಂಗರೂಗಳಿಗೆ 94 ರನ್ ಗಳ ಉತ್ತಮ ಮುನ್ನಡೆ ಬಿಟ್ಟುಕೊಟ್ಟಿದೆ.
ಪಂಡಿತ್ ದೈವಜ್ಞ ಪ್ರಧಾನ ತಾತ್ರಿಂಕ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು 8548998564
ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564
ಭಾರತದ ಪರ ಶುಭ್ ಮನ್ ಗಿಲ್, ಚೇತೇಶ್ವರ ಪೂಜಾರಾ 50 ರನ್ ಗಳಿಸಿದ್ದು ಬಿಟ್ಟರೇ ಇನ್ಯಾವ ಆಟಗಾರನು ಕ್ರೀಸ್ ನಲ್ಲಿ ಹೆಚ್ಚು ಕಾಲ ನಿಲ್ಲಲಿಲ್ಲ. ರಿಷಭ್ ಪಂತ್ 36 ರನ್ ಮತ್ತು ಜಡೇಜಾ 28 ಉಪಯುಕ್ತ ರನ್ ಕಲೆಹಾಕಿ ತಂಡಕ್ಕೆ ಆಸರೆ ಆದ್ರು.
ಇನ್ನು ಎರಡು ವಿಕೆಟ್ ಕಳೆದುಕೊಂಡು ಇಂದಿನ ದಿನದಾಟ ಆರಂಭಿಸಿದ ಟೀಂ ಇಂಡಿಯಾಗೆ ಉತ್ತಮ ಆರಂಭ ದೊರಕಲಿಲ್ಲ.
ಎರಡು ವಿಕೆಟ್ ಗೆ 96 ರನ್ ಗಳಿಸಿದ್ದಲ್ಲಿಂದ ಬ್ಯಾಟಿಂಗ್ ಮುಂದುವರಿಸಿದ ಭಾರತ ತಂಡ ನಾಯಕ ಅಜಿಂಕ್ಯ ರಹಾನೆ ವಿಕೆಟ್ ಬೇಗನೇ ಕಳೆದುಕೊಂಡಿತು. ನಂತರ ಪೂಜಾರ- ಪಂತ್ ಅರ್ಧಶತಕದ ಜೊತೆಯಾಟ ನಡೆಸಿದರು. ಆದರೆ ಅವರಿಬ್ಬರೂ ಸತತ ಎಸೆತಗಳಲ್ಲಿ ಔಟಾದರು.
ನಾಯಕ ರಹಾನೆ 70 ಎಸೆತಗಳಲ್ಲಿ 22 ರನ್ ಗಳಿಸಿ ಔಟ್ ಆದರು. ಹನುಮ ವಿಹಾರಿ 4 ರನ್ ಗಳಿಸಿರುವಾಗ ರನೌಟ್ ಗೆ ಬಲಿಯಾದರು.
ಈ ಸಂದರ್ಭ ಪೂಜಾರ ಜೊತೆಯಾದ ರಿಷಭ್ ಪಂತ್ ಎಚ್ಚರಿಕೆಯ ಇನ್ನಿಂಗ್ಸ್ ಕಟ್ಟಿದರು. 200ರ ಅಂಚಿಗೆ ತಂಡದ ಮೊತ್ತವನ್ನು ತಂದಿಟ್ಟ ಈ ಜೋಡಿ ಅರ್ಧಶತಕದ ಜೊತೆಯಾಟ ಆಡಿತು. ರಿಷಭ್ ಪಂತ್ ಅನಗತ್ಯ ಹೊಡೆತಕ್ಕೆ ಕೈ ಹಾಕಿ 67 ಎಸೆತಗಳಲ್ಲಿ 36 ರನ್ ಗೆ ಔಟ್ ಆದರು.
ಇದರ ಬೆನ್ನಲ್ಲೇ ಅರ್ಧಶತಕ ಬಾರಿಸಿದ್ದ ಪೂಜಾರ ಕೂಡ ಬ್ಯಾಟ್ ಕೆಳಗಿಟ್ಟರು. 176 ಎಸೆತಗಳಲ್ಲಿ ಎದುರಿಸಿದ ಪೂಜಾರ 5 ಬೌಂಡರಿಯೊಂದಿಗೆ 50 ರನ್ ಗಳಿಸಿದರು.
ಬಳಿಕ ಅಶ್ವಿನ್ 10ಕ್ಕೆ ಸುಸ್ತಾದ್ರು. ಕೊನೆಯಲ್ಲಿ ಸೈನಿ ಮೂರು ರನ್, ಸಿರಾಜ್ ಆರು ರನ್ ಗಳಿಸಿದರು. ರವೀಂದ್ರ ಜಡೇಜಾ 28 ರನ್ ಗಳಿಸಿ ನಾಟ್ ಔಟ್ ಆಗಿ ಉಳಿಸಿದರು. ಅಂತಿಮವಾಗಿ ಟೀಂ ಇಂಡಿಯಾ 244ಕ್ಕೆ ಸರ್ವ ಪತನಗೊಂಡಿತು.
ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.
ವಿಚಿತ್ರ ಅಂದ್ರೆ ಭಾರತ ಮೂರು ಮಂದಿ ಆಟಗಾರರು ರನ್ ಔಟ್ ಆಗಿ ತಂಡಕ್ಕೆ ಸಂಕಷ್ಟ ತಂದೊಡ್ಡಿದರು.
ಇನ್ನ ಆಸ್ಟ್ರೇಲಿಯಾ ಪರ ಪ್ಯಾಟ್ ಕಮಿನ್ಸ್ ನಾಲ್ಕು ವಿಕೆಟ್ ಪಡೆದರೆ, ಹ್ಯಾಜಲ್ ವುಡ್ ಎರಡು ವಿಕೆಟ್, ಸ್ಟಾರ್ಕ್ ಒಂದು ವಿಕೆಟ್ ಪಡೆದು ಮಿಂಚಿದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel









