ಅಮರಾವತಿ : ಕೊರೊನಾ ವೈರಸ್ ಸೋಂಕು ಹರಡದಂತೆ ತಡೆಯಲು ಪ್ರಧಾನಿ ಮೋದಿ ಮೇ 3ರವರೆಗೆ ಲಾಕ್ ಡೌನ್ ವಿಸ್ತರಣೆ ಮಾಡಿದ್ದಾರೆ. ಇದರಿಂದಾಗಿ ವಿಶ್ವ ಪ್ರಸಿದ್ಧ ತಿರುಪತಿ ತಿರುಮಲ ದೇವಸ್ಥಾನದಲ್ಲಿ ತಿಮ್ಮಪ್ಪನ ದರ್ಶನವೂ ಬಂದ್ ಮಾಡಲಾಗಿದೆ.
ಹೌದು ತಿಮ್ಮಪನ ದರ್ಶನದ ಬಂದ್ ಅವಧಿಯನ್ನು ಮೇ 3ರವರೆಗೂ ವಿಸ್ತರಿಸಿ ತಿರುಮಲ ತಿರುಪತಿ ದೇವಸ್ಥಾನಂ ಆಡಳಿತ ಮಂಡಳಿ ಸುತ್ತೋಲೆ ಹೊರಡಿಸಿದೆ.
ಈ ಹಿಂದೆಯೇ ತಿರುಪತಿ ತಿರುಮಲ ದೇವಸ್ಥಾನಕ್ಕೂ ಕೊರೊನಾ ಬಿಸಿ ತಟ್ಟಿತ್ತು. ಮಾರ್ಚ್ 19ನೇ ತಾರೀಕು ಕೊರೊನಾ ಶಂಕಿತ ವ್ಯಕ್ತಿಯೋರ್ವ ದೇವಸ್ಥಾನಕ್ಕೆ ಭೇಟಿ ನೀಡಿದ ಪರಿಣಾಮ ತಿರುಪತಿ ದೇವಸ್ಥಾನಂ ಆಡಳಿತ ಮಂಡಳಿ ತಿಮ್ಮಪ್ಪನ ದರ್ಶನ ಬಂದ್ ಮಾಡಿತ್ತು.








