ದೆಹಲಿ: ಸಂಸತ್ ಅಧಿವೇಶನ ಇಂದಿನಿಂದ ಆರಂಭವಾಗಿದೆ. ಅಧಿವೇಶನಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ, ಮಾಧ್ಯಮದ ಮುಂದೆ ಮಾತನಾಡಿದ್ದಾರೆ.
ಕೇಂದ್ರ ಬಜೆಟ್ ಮುಂದಿನ ಐದು ವರ್ಷಗಳ ಮಾರ್ಗಸೂಚಿಯನ್ನು ರೂಪಿಸಲಿದೆ. ನಾನು ದೇಶದ ಜನರಿಗೆ ಭರವಸೆಗಳನ್ನು ನೀಡುತ್ತಿದ್ದೇನೆ ಮತ್ತು ಇದನ್ನು ನಾನು ಜಾರಿಗೆ ತರುತ್ತೇನೆ. ಇದು ನಮ್ಮ ಸರ್ಕಾರದ ಧ್ಯೇಯ. ಇಂದಿನ ಬಜೆಟ್ ನಮ್ಮ ಅಧಿಕಾರದ ಮುಂದಿನ 5 ವರ್ಷಗಳ ದಿಕ್ಕನ್ನು ನಿರ್ಧರಿಸುತ್ತದೆ. ಈ ಬಜೆಟ್ ನಮ್ಮ ವಿಕಸಿತ ಭಾರತದ ಕನಸಿಗೆ ಬುನಾದಿಯಾಗಿದೆ ಎಂದು ಭರವಸೆ ನೀಡಿದ್ದಾರೆ.
ಬಜೆಟ್ ಅಧಿವೇಶನವು ಆಗಸ್ಟ್ 12 ರವರೆಗೆ ನಡೆಯಲಿದೆ. ಕೇಂದ್ರವು 90 ವರ್ಷಗಳಷ್ಟು ಹಳೆಯದಾದ ಏರ್‌ಕ್ರಾಫ್ಟ್ ಕಾಯ್ದೆ ಬದಲಿಸುವುದು ಸೇರಿದಂತೆ ಆರು ಮಸೂದೆಗಳನ್ನು ಮಂಡಿಸುವ ನಿರೀಕ್ಷೆಯಿದೆ. ಜಮ್ಮು ಮತ್ತು ಕಾಶ್ಮೀರದ ಬಜೆಟ್‌ಗೆ ಸಂಸತ್ತಿನ ಅನುಮೋದನೆ ಪಡೆಯುವ ಸಾಧ್ಯತೆ ಇದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಗಳವಾರ ಬಜೆಟ್ ಮಂಡಿಸಲಿದ್ದಾರೆ.








