ಇದು ಉತ್ತರ ಕರ್ನಾಟಕ ವಿರೋಧಿ ಸರ್ಕಾರ : ಸಿದ್ದರಾಮಯ್ಯ Siddaramaiah
ಬೆಳಗಾವಿ : ಇದು ಉತ್ತರ ಕರ್ನಾಟಕ ವಿರೋಧಿ ಸರ್ಕಾರ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಬೆಳಗಾವಿಯಲ್ಲಿ ನಡೆಯುತ್ತದ್ದ ಅಧಿವೇಶನ ಅನಿರ್ಧಿಷ್ಟಾವಧಿಗೆ ಮುಂದೂಡಲಾಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಿದ್ದರಾಮಯ್ಯ, ಬೆಳಗಾವಿಯಲ್ಲಿ ಸುವರ್ಣಸೌಧ ನಿರ್ಮಾಣ ಮಾಡಿದ ಉದ್ದೇಶವೇ ಉತ್ತರ ಕರ್ನಾಟಕ ಭಾಗದ ಜನರಿಗೆ ನ್ಯಾಯ ಒದಗಿಸುವುದು. ಬಿಜೆಪಿ ಸರ್ಕಾರದ ಅಲಕ್ಷ್ಯ ಧೋರಣೆಯಿಂದಾಗಿ ಈ ಮೂಲ ಉದ್ದೇಶದ ಈಡೇರಿಕೆ ಆಗುತ್ತಿಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ.
ಕಾಂಗ್ರೆಸ್ ಸರ್ಕಾರ ರಚಿಸಿದ್ದ ಡಾ. ನಂಜುಂಡಪ್ಪನವರ ನೇತೃತ್ವದ ಉನ್ನತಾಧಿಕಾರ ಸಮಿತಿ 2002 ರಲ್ಲಿ ನೀಡಿದ ವರದಿಯಲ್ಲಿ ಎಂಟು ವರ್ಷಗಳಲ್ಲಿ ರಾಜ್ಯದ ಹಿಂದುಳಿದ ತಾಲೂಕುಗಳ ಅಭಿವೃದ್ಧಿಗೆ 31 ಸಾವಿರ ಕೋಟಿ ಹಣವನ್ನು ಖರ್ಚು ಮಾಡಬೇಕು ಎಂದು ಶಿಫಾರಸು ಮಾಡಿತ್ತು. ಇದು ನಮ್ಮ ಪಕ್ಷದ ಬದ್ಧತೆ.
ನಂಜುಂಡಪ್ಪ ವರದಿ ಜಾರಿಯಾಗಿದ್ದು 2007 – 08 ರಲ್ಲಿ. ಅಲ್ಲಿಂದ ಪ್ರತಿ ವರ್ಷ ರೂ. 2000 ಕೋಟಿ ಹಣವನ್ನು 2016 ರ ವರೆಗೆ ನೀಡಲಾಗಿತ್ತು. ನಾನು ಮುಖ್ಯಮಂತ್ರಿ ಆಗಿದ್ದಾಗ ಎಂಟು ವರ್ಷದ ಗಡುವು ಮುಗಿದು ಹೋದರೂ ಅದನ್ನು ಮತ್ತೆ ಐದು ವರ್ಷ ಮುಂದುವರೆಸಬೇಕು ಎಂದು ಆದೇಶಿಸಿದ್ದೆ.
ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರ ಪತ್ರಕ್ಕೆ ಅಂದಿನ ಉಪ ಪ್ರಧಾನಿಗಳು ಹಾಗೂ ಗೃಹ ಸಚಿವರು ಆಗಿದ್ದ ಅಡ್ವಾಣಿಯವರು ನಿಮ್ಮ ಬೇಡಿಕೆಯನ್ನು ಈಡೇರಿಸಲು ಸಾಧ್ಯವಿಲ್ಲ ಎಂದು ನಿಷ್ಠುರವಾಗಿ ಉತ್ತರ ನೀಡಿದ್ದನ್ನು ಉತ್ತರ ಕರ್ನಾಟಕದ ಜನ ಮರೆತಿಲ್ಲ, ಮರೆಯಲೂ ಬಾರದು. 5/17#Session
— Siddaramaiah (@siddaramaiah) December 24, 2021
ಹೈದರಾಬಾದ್ ಕರ್ನಾಟಕ ಪ್ರದೇಶದ ಅಭಿವೃದ್ಧಿಗೆ ಅನುಕೂಲವಾಗುವಂತೆ ಸಂವಿಧಾನ ತಿದ್ದುಪಡಿ ಮಾಡಿ 371(J) ಕಲಂನಡಿ ವಿಶೇಷ ಸ್ಥಾನಮಾನ ನೀಡಬೇಕು ಎಂದು ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಬರೆದಿದ್ದ ಪತ್ರವನ್ನು ತಿರಸ್ಕರಿಸಿದ್ದು ಆಗಿನ ಅಧಿಕಾರರೂಢ ಎನ್.ಡಿ.ಎ ಸರ್ಕಾರವಲ್ಲವೇ?
ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರ ಪತ್ರಕ್ಕೆ ಅಂದಿನ ಉಪ ಪ್ರಧಾನಿಗಳು ಹಾಗೂ ಗೃಹ ಸಚಿವರು ಆಗಿದ್ದ ಅಡ್ವಾಣಿಯವರು ನಿಮ್ಮ ಬೇಡಿಕೆಯನ್ನು ಈಡೇರಿಸಲು ಸಾಧ್ಯವಿಲ್ಲ ಎಂದು ನಿಷ್ಠುರವಾಗಿ ಉತ್ತರ ನೀಡಿದ್ದನ್ನು ಉತ್ತರ ಕರ್ನಾಟಕದ ಜನ ಮರೆತಿಲ್ಲ, ಮರೆಯಲೂ ಬಾರದು.
ಕಾಂಗ್ರೆಸ್ ಸರ್ಕಾರ ರಚಿಸಿದ್ದ ಡಾ. ನಂಜುಂಡಪ್ಪನವರ ನೇತೃತ್ವದ ಉನ್ನತಾಧಿಕಾರ ಸಮಿತಿ 2002 ರಲ್ಲಿ ನೀಡಿದ ವರದಿಯಲ್ಲಿ ಎಂಟು ವರ್ಷಗಳಲ್ಲಿ ರಾಜ್ಯದ ಹಿಂದುಳಿದ ತಾಲೂಕುಗಳ ಅಭಿವೃದ್ಧಿಗೆ 31 ಸಾವಿರ ಕೋಟಿ ಹಣವನ್ನು ಖರ್ಚು ಮಾಡಬೇಕು ಎಂದು ಶಿಫಾರಸು ಮಾಡಿತ್ತು. ಇದು ನಮ್ಮ ಪಕ್ಷದ ಬದ್ಧತೆ. 2/17#Session
— Siddaramaiah (@siddaramaiah) December 24, 2021
2013 ರಲ್ಲಿ ನಾನು ಕೇಂದ್ರದ ಯುಪಿಎ ಸರ್ಕಾರಕ್ಕೆ ಮಾಡಿದ ಮನವಿಯನ್ನು ಮನ್ನಿಸಿ ಶ್ರೀಮತಿ ಸೋನಿಯಾ ಗಾಂಧಿ ಅವರ ಸಲಹೆಯಂತೆ ಪ್ರಧಾನಿ ಮನಮೋಹನ್ ಸಿಂಗ್ ಅವರು ಸಂವಿಧಾನಕ್ಕೆ ತಿದ್ದುಪಡಿ ತಂದು ಕಲಂ 371(J) ಅಡಿ ಹೈದರಾಬಾದ್ ಕರ್ನಾಟಕ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡಿದ್ದರು ಎಂದುಅ ತಿಳಿಸಿದ್ದಾರೆ.