ಧಾರವಾಡ : ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷಗಳು ಮಾಡುತ್ತಿರುವ ಆರೋಪ ಸತ್ಯಕ್ಕೆ ಹತ್ತಿರವಾದದ್ದು ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ್ ಅಭಿಪ್ರಾಯಪಟ್ಟಿದ್ದಾರೆ.
ಧಾರವಾಡದಲ್ಲಿ ಮಾತನಾಡಿದ ಅವರು, ಮೇಲ್ನೋಟಕ್ಕೆ ಕೊರೊನಾ ಪ್ರಕ್ರಿಯೆಯಲ್ಲಿ ಗೊಂದಲಗಳು ಕಾಣುತ್ತಿವೆ. ರಾಜ್ಯ ಸರ್ಕಾರ ಡಾ.ಕಜೆಯವರ 70 ಲಕ್ಷ ಆಯುರ್ವೇದಿಕ್ ಮಾತ್ರೆ ಖರೀದಿಸಿದೆ. ಆದ್ರೆ ಅದನ್ನು ಎಲ್ಲಿಯೂ ವಿತರಿಸುತ್ತಿಲ್ಲ. ಇದರಿಂದ ಸರ್ಕಾರದ ಮೇಲೆ ಸಂಶಯ ಬರುತ್ತದೆ. ವಿರೋಧ ಪಕ್ಷದವರ ಆರೋಪ ಸತ್ಯಕ್ಕೆ ಹತ್ತಿರವಾದದ್ದು, ಅಲೋಪತಿಕ್ ಮಾಫಿಯಾ ದೊಡ್ಡದಿದೆ. ಈ ಲಾಬಿಗೆ ಕಜೆಯವರ ಔಷಧ ಬಲಿಯಾಗಿದೆ ಎಂದರು. ಹಾಗೇ ಕೊರೊನಾ ನಿಯಂತ್ರಣ ವಿಚಾರದಲ್ಲಿ ಸರ್ಕಾರ ಸರಿಯಾಗಿ ಕೆಲಸವಾಗುತ್ತಿಲ್ಲ ಎಂಬ ವಿಪಕ್ಷಗಳ ಆರೋಪಕ್ಕೆ ಸರ್ಕಾರ ಉತ್ತರ ಕೊಡಬೇಕು ಎಂದು ಒತ್ತಾಯಿಸಿದರು.
ಇನ್ನು ಬಕ್ರೀದ್ ಬಕ್ರೀದ್ ಹಬ್ಬ ಸಮೀಪಿಸುತ್ತಿರುವ ಹಿನ್ನೆಲೆ ಗೋವುಗಳನ್ನು ರಕ್ಷಣೆ ಮಾಡಬೇಕು ಎಂದು ಹೇಳಿದ ಮುತಾಲಿಕ್, ವಿಜಯಪುರದ ಜಿಲ್ಲಾಧಿಕಾರಿಗಳು ಅಕ್ರಮ ಗೋವು ಸಾಗಾಟ ತಡೆಗೆ ಎಂಟು ತಂಡ ರಚಿಸಿ ಒಳ್ಳೆಯ ಕ್ರಮ ಕೈಗೊಂಡಿದ್ದಾರೆ. ಇದೇ ರೀತಿಯ ಕ್ರಮ ಎಲ್ಲಡೆ ಆಗಬೇಕು ಎಂದು ಒತ್ತಾಯಿಸಿದ್ದಾರೆ.








